ಮಡಿಕೇರಿ ಮೇ 4 : ಟಿ.ಶೆಟ್ಟಿಗೇರಿಯಲ್ಲಿ ಭಾರತೀಯ ಜನತಾ ಪಕ್ಷದ ಚುನಾವಣಾ ಪ್ರಚಾರ ಮೆರವಣಿಗೆ ಮತ್ತು ಸಭೆ ನಡೆಸಲಾಯಿತು. ಮಂಡಲ ಅದ್ಯಕ್ಷ ನೆಲ್ಲೀರ ಚಲನ್ ಕುಮಾರ್, ಜಿಲ್ಲಾ ಅಧ್ಯಕ್ಷ ರಾಬಿನ್ ದೇವಯ್ಯ, ಕೊಡಗು ಮೈಸೂರು ಸಂಸದ ಪ್ರತಾಪ್ ಸಿಂಹ, ಶಾಸಕರಾದ ಕೆ.ಜಿ ಬೋಪಯ್ಯ, ರಂಗಾಯಣ ನಿರ್ದೇಶಕ ಅಡ್ಡಂಡ ಕಾರ್ಯಪ್ಪ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅರುಣ್ ಭೀಮಯ್ಯ, ತಾಲೂಕು ಪ್ರಧಾನ ಕಾರ್ಯದರ್ಶಿ ಅಜ್ಜಿಕುಟ್ಟಿರ ಪ್ರವೀಣ್, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಬಾಂಡ್ ಗಣಪತಿ, ರಾಜ್ಯ ಕಾರ್ಯಕಾರಿಣಿ ಸದಸ್ಯ ಅಪ್ಪಚೆಟ್ಟೋಳಂಡ ಮನು ಮುತ್ತಪ್ಪ, ರಾಜ್ಯ ಶಿಸ್ತು ಸಮಿತಿ ಸದಸ್ಯರು ರೀನಾ ಪ್ರಕಾಶ್, ರಾಜ್ಯ ಕೃಷಿ ಮೋರ್ಚ ಸದಸ್ಯ ಯಮುನಾ ಚಂಗಪ್ಪ, ಹುದಿಕೇರಿ ಪ್ರಭಾರಿ ಕಟ್ಟೇರ ಈಶ್ವರ ಹಾಗೂ ಮತ್ತು ಟಿ.ಶೆಟ್ಟಿಗೇರಿ ಪಂಚಾಯತಿ ಒಳಪಟ್ಟ ಎಲ್ಲಾ ಬಿಜೆಪಿ ಕಾರ್ಯಕರ್ತರು ಉಪಸ್ಥಿತಿರಿದ್ದರು.










