ಮಡಿಕೇರಿ ಮೇ 4 : ಮಡಿಕೇರಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಮಂತರ್ ಗೌಡ ಅವರ ಪರ ಮತಯಾಚಿಸುವ ಸಲುವಾಗಿ ಮೇ 5 ರಂದು ನಗರದಲ್ಲಿ ಬೈಕ್ ಜಾಥಾ ನಡೆಯಲಿದೆ ಎಂದು ನಗರ ಕಾಂಗ್ರೆಸ್ ಅಧ್ಯಕ್ಷ ಬಿ.ವೈ.ರಾಜೇಶ್ ತಿಳಿಸಿದ್ದಾರೆ.
ನಗರದ ಫೀ.ಮಾ.ಕಾರ್ಯಪ್ಪ ಕಾಲೇಜು ರಸ್ತೆಯಿಂದ ಹಳೆಯ ಖಾಸಗಿ ಬಸ್ ನಿಲ್ದಾಣ, ಜನರಲ್ ತಿಮ್ಮಯ್ಯ ವೃತ್ತ ಮತ್ತು ಫೀ.ಮಾ.ಕಾರ್ಯಪ್ಪ ವೃತ್ತದವರೆಗೆ ಬೃಹತ್ ಬೈಕ್ ಜಾಥಾ ನಡೆಯಲಿದೆ. ನೂರಾರು ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಮುಖಂಡರುಗಳು ಜಾಥಾದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಅವರು ಪತ್ರಿಕಾ ಪ್ರಕಟಣೆ ನೀಡಿದ್ದಾರೆ.










