ಮಡಿಕೇರಿ ಮೇ 4 : ದಕ್ಷಿಣ ಕೊಡಗಿನ ಕೊಟ್ಟಗೇರಿಯ ಲಕ್ಷ್ಮಣ ತೀರ್ಥ ಸಂಘದ ಒಂಭತ್ತನೇ ವಾರ್ಷಿಕೋತ್ಸವದ ಹಿನ್ನೆಲೆಯಲ್ಲಿ ಇದೇ ಮೇ 21 ಮತ್ತು 22 ರಂದು ಬಾಳೆಲೆಯಲ್ಲಿ ಜಿಲ್ಲಾ ಮಟ್ಟದ ಹೊನಲು ಬೆಳಕಿನ ಮುಕ್ತ ವಾಲಿಬಾಲ್ ಪಂದ್ಯಾವಳಿಯನ್ನು ಆಯೋಜಿಸಲಾಗಿದೆಯೆಂದು ಸಂಘದ ಅಧ್ಯಕ್ಷ ಮಚ್ಚಮಾಡ ಅಯ್ಯಪ್ಪ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಾಳೆಲೆ ವಿಜಯಲಕ್ಷ್ಮಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಮೇ21 ರಂದು ಮಧ್ಯಾಹ್ನ ಪಂದ್ಯಾವಳಿ ಉದ್ಘಾಟನೆಗೊಳ್ಳಲಿದ್ದು, ಮೇ22 ರಂದು ಸಂಜೆ 6 ಗಂಟೆಯ ಬಳಿಕ ಅಂತಿಮ ಪಂದ್ಯ ನಡೆಯಲಿದೆ. ಪಂದ್ಯಾವಳಿ ನಾಕ್ ಔಟ್ ಮಾದರಿಯಲ್ಲಿ ನಡೆಯಲಿದ್ದು, 25 ರಿಂದ 30 ತಂಡಗಳು ಪಾಲ್ಗೊಳ್ಳ್ಳುವ ನಿರೀಕ್ಷೆ ಇರುವುದಾಗಿ ತಿಳಿಸಿದರು.
ಪಂದ್ಯಾವಳಿಯಲ್ಲಿ ಪಾಲ್ಗೊಳ್ಳಲು ಇಚ್ಛಿಸುವ ತಂಡಗಳು ಮೇ15 ರ ಒಳಗಾಗಿ 5 ಸಾವಿರ ರೂ. ಶುಲ್ಕದೊಂದಿಗೆ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದು. ಈ ಕುರಿತ ಮಾಹಿತಿಗಾಗಿ ಮಚ್ಚಮಾಡ ಅಯ್ಯಪ್ಪ ಮೊ.9480731797, ಮಾಚಂಗಡ ಸುಬ್ರಮಣಿ ಮೊ.9980672958, ಅಳಮೇಂಗಡ ಚಂಗಪ್ಪ ಮೊ.9481114113, ಮಾಚಂಗಡ ದರ್ಶನ್ ಮೊ.9632085536 ಅವರನ್ನು ಸಂಪರ್ಕಿಸಬಹುದೆಂದು ತಿಳಿಸಿದರು.
ಪಂದ್ಯಾವಳಿ ವಿಜೇತ ತಂಡಕ್ಕೆ 1 ಲಕ್ಷ ರೂ. ನಗದು ಮತ್ತು ಟ್ರೋಫಿ, ದ್ವಿತೀಯ ಬಹುಮಾನ 50 ಸಾವಿರ ರೂ. ಮತ್ತು ಟ್ರೋಫಿ, ಮೂರನೇ ಬಹುಮಾನ 10 ಸಾವಿರ ರೂ. ಮತ್ತು ಟ್ರೋಫಿ, ನಾಲ್ಕನೇ ಬಹುಮಾನ 10 ಸಾವಿರ ರೂ. ಮತ್ತು ಟ್ರೋಫಿಯನ್ನು ನೀಡಲಾಗುವುದೆಂದು ಮಾಹಿತಿಯನ್ನಿತ್ತರು.
ಸುದ್ದಿಗೋಷ್ಠಿಯಲ್ಲಿ ಸಂಘದ ಕಾರ್ಯದರ್ಶಿ ಮಾಚಂಗಡ ಸುಬ್ರಮಣಿ, ಪಂದ್ಯಾವಳಿ ಉಸ್ತುವಾರಿ ಮಾಚಂಗಡ ಉಮೇಶ್ ಮುತ್ತಣ್ಣ, ಸಂಘದ ಮಾಜಿ ಅಧ್ಯಕ್ಷರಾದ ಮಾಚಂಗಡ ಸಂಪತ್ ಅಯ್ಯಪ್ಪ, ಸದಸ್ಯರಾದ ಮಾಚಂಗಡ ವಿನೋದ್ ಬೋಪಣ್ಣ ಹಾಗೂ ಅಳಮೇಂಗಡ ಚಂಗಪ್ಪ ಉಪಸ್ಥಿತರಿದ್ದರು.
Breaking News
- *ಕೊಡವ ಲ್ಯಾಂಡ್ ಭೂರಾಜಕೀಯ ಸ್ವಾಯತ್ತತೆ : ಮಾ.11ಕ್ಕೆ ವಿಚಾರಣೆ ಮುಂದೂಡಿಕೆ*
- *ಜ.25 ರಂದು ಜಿಲ್ಲಾ ಮಟ್ಟದ ಜನಸ್ಪಂದನ ಕಾರ್ಯಕ್ರಮ*
- *ಜ.30 ರಂದು ಹುತಾತ್ಮರ ದಿನಾಚರಣೆ : ಮಡಿಕೇರಿಯಲ್ಲಿ ಪೂರ್ವಭಾವಿ ಸಭೆ*
- *ಹೈದರಾಬಾದ್ನಲ್ಲಿ ಗಮನ ಸೆಳೆದ ಕುಡಿಯರ ಉರುಟಿಕೊಟ್ಟ್ ಪಾಟ್ ನೃತ್ಯ*
- *ಮಡಿಕೇರಿ : ಜ.28 ರಂದು ಕುಂದುರುಮೊಟ್ಟೆ ದಸರಾ ಉತ್ಸವ ಸಮಿತಿಯ ಸುವರ್ಣ ಮಹೋತ್ಸವ ಸ್ಮರಣ ಸಂಚಿಕೆ “ದಶಮಿ” ಬಿಡುಗಡೆ*
- *ಮಡಿಕೇರಿಯ ಡಾ.ಅಂಬೇಡ್ಕರ್ ಭವನವನ್ನು ದಲಿತ ಸಂಘರ್ಷ ಸಮಿತಿಯ ವಶಕ್ಕೆ ನೀಡಿ*
- *‘ಸಂವಿಧಾನ್ ಸಮ್ಮಾನ್ ಅಭಿಯಾನ್’ : ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಸಂವಿಧಾನ ವಿರೋಧಿಯಾಗಿ ನಡೆದುಕೊಂಡವರ ಬಣ್ಣ ಬಯಲು*
- *ಅಂತರರಾಷ್ಟ್ರೀಯ ವಾಣಿಜ್ಯ ಮೇಳ ಸಾವಯವ ಮತ್ತು ಸಿರಿಧಾನ್ಯ ಕಾರ್ಯಕ್ರಮ ಉದ್ಘಾಟನೆ : ಮಂಡ್ಯದಲ್ಲಿ ಸಂಯೋಜಿತ ಕೃಷಿ ವಿಶ್ವವಿದ್ಯಾಲಯ ಸ್ಥಾಪನೆ : ಮುಖ್ಯಮಂತ್ರಿ ಸಿದ್ದರಾಮಯ್ಯ
- *ಭಾಗಮಂಡಲದಲ್ಲಿ ಕಸಾಪ ದತ್ತಿ ಉಪನ್ಯಾಸ ಕಾರ್ಯಕ್ರಮ : ಗೌರವ ಸಮರ್ಪಣೆ*
- *ಬಲ್ಲಮಾವಟಿಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ : ಪ್ರತಿಯೊಬ್ಬರೂ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಿ : ಡಾ.ಶೈಲಜಾ ಸಲಹೆ*