ಮಡಿಕೇರಿ ಮೇ 4 : ಕಾರಣಾಂತರಗಳಿoದ ಕಾಂಗ್ರೆಸ್ ಪಕ್ಷದಿಂದ ಹೊರಗುಳಿದಿದ್ದ ಪ್ರಮುಖರಾದ ಶ್ರೀಮತಿ ಬಂಗೇರ, ವೀಣಾಕ್ಷಿ, ತಜಸುಂ, ಗಿಲ್ಬರ್ಟ್ ಲೋಬೋ, ಕೆ.ಈ.ಮ್ಯಾಥ್ಯು ಹಾಗೂ ಸುನಿಲ್ ನಂಜಪ್ಪ ಅವರುಗಳು ಇಂದು ಮತ್ತೆ ಕಾಂಗ್ರೆಸ್ ಗೆ ಸೇರ್ಪಡೆಗೊಂಡರು.
ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಪಕ್ಷದ ಜಿಲ್ಲಾಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಜಿಲ್ಲಾ ಚುನಾವಣಾ ಉಸ್ತುವಾರಿ ಹೆಚ್.ಎಂ.ನoದಕುಮಾರ್ ಹಾಗೂ ನಗರಾಧ್ಯಕ್ಷ ಬಿ.ವೈ.ರಾಜೇಶ್ ಅವರುಗಳ ಸಮ್ಮುಖದಲ್ಲಿ ಸೇರ್ಪಡೆಗೊಂಡ ಪ್ರಮುಖರು ಕಾಂಗ್ರೆಸ್ ಅಭ್ಯರ್ಥಿಗಳಿಗೆ ಬೆಂಬಲ ಘೋಷಿಸಿದರು.
ಈ ಸಂದರ್ಭ ಮಾತನಾಡಿದ ಧರ್ಮಜ ಉತ್ತಪ್ಪ, ಮಡಿಕೇರಿ ಮತ್ತು ವಿರಾಜಪೇಟೆ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವಿಗಾಗಿ ಒಗ್ಗಟ್ಟನಿಂದ ಶ್ರಮಿಸಲಾಗುತ್ತಿದೆ. ಜಿಲ್ಲೆಯ ಜನ ಬದಲಾವಣೆಯನ್ನು ಬಯಸಿದ್ದು, ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಭರ್ಜರಿ ಜಯ ಸಾಧಿಸಲಿದೆ ಎಂದರು.
ಪಕ್ಷದ ಜಿಲ್ಲಾ ಗೌರವ ಕಾರ್ಯದರ್ಶಿ ವಿ.ಪಿ.ಸುರೇಶ್, ನಗರ ಘಟಕದ ಉಪಾಧ್ಯಕ್ಷ ಪ್ರಕಾಶ್ ಆಚಾರ್ಯ, ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಕಲೀಲ್ ಬಾಷ, ಪರಿಶಿಷ್ಟ ಘಟಕದ ಅಧ್ಯಕ್ಷ ಮುದ್ದುರಾಜು, ಪ್ರಮುಖರಾದ ಟಿ.ಎಂ.ಅಯ್ಯಪ್ಪ, ಬೊಳ್ಳಿಯಂಡ ಗಣೇಶ್, ಟಿ.ಹೆಚ್.ಉದಯಕುಮಾರ್, ಪ್ರಮೋದ್, ಜಿ.ಸಿ.ಜಗದೀಶ್, ಸುದಯ್ ನಾಣಯ್ಯ, ಹಫೀಜ಼್ ಮತ್ತಿತರರು ಉಪಸ್ಥಿತರಿದ್ದರು.
Breaking News
- *ಕೊಡವ ಲ್ಯಾಂಡ್ ಭೂರಾಜಕೀಯ ಸ್ವಾಯತ್ತತೆ : ಮಾ.11ಕ್ಕೆ ವಿಚಾರಣೆ ಮುಂದೂಡಿಕೆ*
- *ಜ.25 ರಂದು ಜಿಲ್ಲಾ ಮಟ್ಟದ ಜನಸ್ಪಂದನ ಕಾರ್ಯಕ್ರಮ*
- *ಜ.30 ರಂದು ಹುತಾತ್ಮರ ದಿನಾಚರಣೆ : ಮಡಿಕೇರಿಯಲ್ಲಿ ಪೂರ್ವಭಾವಿ ಸಭೆ*
- *ಹೈದರಾಬಾದ್ನಲ್ಲಿ ಗಮನ ಸೆಳೆದ ಕುಡಿಯರ ಉರುಟಿಕೊಟ್ಟ್ ಪಾಟ್ ನೃತ್ಯ*
- *ಮಡಿಕೇರಿ : ಜ.28 ರಂದು ಕುಂದುರುಮೊಟ್ಟೆ ದಸರಾ ಉತ್ಸವ ಸಮಿತಿಯ ಸುವರ್ಣ ಮಹೋತ್ಸವ ಸ್ಮರಣ ಸಂಚಿಕೆ “ದಶಮಿ” ಬಿಡುಗಡೆ*
- *ಮಡಿಕೇರಿಯ ಡಾ.ಅಂಬೇಡ್ಕರ್ ಭವನವನ್ನು ದಲಿತ ಸಂಘರ್ಷ ಸಮಿತಿಯ ವಶಕ್ಕೆ ನೀಡಿ*
- *‘ಸಂವಿಧಾನ್ ಸಮ್ಮಾನ್ ಅಭಿಯಾನ್’ : ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಸಂವಿಧಾನ ವಿರೋಧಿಯಾಗಿ ನಡೆದುಕೊಂಡವರ ಬಣ್ಣ ಬಯಲು*
- *ಅಂತರರಾಷ್ಟ್ರೀಯ ವಾಣಿಜ್ಯ ಮೇಳ ಸಾವಯವ ಮತ್ತು ಸಿರಿಧಾನ್ಯ ಕಾರ್ಯಕ್ರಮ ಉದ್ಘಾಟನೆ : ಮಂಡ್ಯದಲ್ಲಿ ಸಂಯೋಜಿತ ಕೃಷಿ ವಿಶ್ವವಿದ್ಯಾಲಯ ಸ್ಥಾಪನೆ : ಮುಖ್ಯಮಂತ್ರಿ ಸಿದ್ದರಾಮಯ್ಯ
- *ಭಾಗಮಂಡಲದಲ್ಲಿ ಕಸಾಪ ದತ್ತಿ ಉಪನ್ಯಾಸ ಕಾರ್ಯಕ್ರಮ : ಗೌರವ ಸಮರ್ಪಣೆ*
- *ಬಲ್ಲಮಾವಟಿಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ : ಪ್ರತಿಯೊಬ್ಬರೂ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಿ : ಡಾ.ಶೈಲಜಾ ಸಲಹೆ*