ನಾಪೋಕ್ಲು ಮೇ 5 : ಬೇತು ಗ್ರಾಮದ ಮಕ್ಕಿ ಶಾಸ್ತಾವು ದೇವರ ವಾರ್ಷಿಕ ಉತ್ಸವ ಎರಡು ದಿನಗಳ ಕಾಲ ಶ್ರದ್ಧಾಭಕ್ತಿಯಿಂದ ಜರುಗಿತು.
ಮಕ್ಕಿ ಶಾಸ್ತಾವು ಸನ್ನಿಧಿಯಲ್ಲಿ ವಿವಿಧ ಕೋಲಗಳು ಜರುಗಿದ್ದು, ಭಕ್ತಾದಿಗಳು ಹೆಚ್ಚಿನ ಸಂಖ್ಯೆಲ್ಲಿ ಪಾಲ್ಗೊಂಡು ಸೇವೆ ಸಲ್ಲಿಸಿದರು.
ಬೆಳಿಗ್ಗೆ ಅಜ್ಜಪ್ಪ ಕೋಲ ಹಾಗೂ ಮಧ್ಯಾಹ್ನ ವಿಷ್ಣುಮೂರ್ತಿ ಕೋಲಗಳು ಗಮನ ಸೆಳೆದವು.
ದೇವಾಲಯದ ವತಿಯಿಂದ ಉತ್ಸವ ವೀಕ್ಷಿಸಲು ಬಂದ ಭಕ್ತರಿಗೆ ಪ್ರಸಾದ ವಿತರಣೆ ಮಾಡಲಾಯಿತು.
ಉತ್ಸವದ ಅಂಗವಾಗಿ ಎತ್ತೇರಾಟ ಹಾಗೂ ರಾತ್ರಿ ದೀಪಾರಾಧನೆ ನಡೆಯಿತು.
ಈ ಸಂದರ್ಭ ದೇವಾಲಯದ ಆಡಳಿತ ಮಂಡಳಿ, ತಕ್ಕಮುಖ್ಯಸ್ಥರು ವಾರ್ಷಿಕ ಉತ್ಸವದ ನೇತೃತ್ವ ವಹಿಸಿಸಿದ್ದು, ಅರ್ಚಕ ಮಕ್ಕಿ ದಿವಾಕರ ಪೂಜಾ ವಿಧಿವಿಧಾನಗಳನ್ನು ನೆರವೆರಿಸಿದರು.
ವರದಿ : ದುಗ್ಗಳ ಸದಾನಂದ