ಮಡಿಕೇರಿ ಮೇ 5 : ಗಿರಿಜನರ ಅಭಿವೃದ್ಧಿಗಾಗಿ 28 ಸಾವಿರ ಕೋಟಿ ರೂ.ಗಳನ್ನು ಬಜೆಟ್ನಲ್ಲಿ ಮೀಸಲಿಟ್ಟ ಕೇಂದ್ರ ಸರ್ಕಾರ ಈ ಯೋಜನೆಯ ಜಾಹೀರಾತಿಗಾಗಿ ನೂರಾರು ಕೋಟಿ ರೂ. ಗಳನ್ನು ವ್ಯಯ ಮಾಡಿತೇ ಹೊರತು, ಇಲ್ಲಿಯವರೆಗೆ ಗಿರಿಜನರ ಅಭಿವೃದ್ಧಿಯಾಗಿಲ್ಲವೆಂದು ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ಹಾಗೂ ಕೆಪಿಸಿಸಿ ಸಾಮಾಜಿಕ ನ್ಯಾಯ ಸಮಿತಿಯ ಅಧ್ಯಕ್ಷ ಡಾ.ಸಿ.ಎಸ್.ದ್ವಾರಕನಾಥ್ ಆರೋಪಿಸಿದ್ದಾರೆ.
ಮಡಿಕೇರಿಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಗಿರಿಜನರ ಅಭಿವೃದ್ಧಿಗಾಗಿ ಹಲವು ಯೋಜನೆಗಳನ್ನು ಜಾರಿಗೆ ತಂದಿರುವುದಾಗಿ ನೂರಾರು ಕೋಟಿ ರೂ. ಗಳನ್ನು ಖರ್ಚು ಮಾಡಿ ಜಾಹೀರಾತು ಮೂಲಕ ಪ್ರಚಾರ ಪಡೆಯುತ್ತಿದ್ದಾರೆ. ಆದರೆ ತುಳಿತಕ್ಕೆ ಒಳಗಾದ ಗಿರಿಜನರ ಸ್ಥಿತಿ ಇಂದಿಗೂ ಹೀನಾಯವಾಗಿದೆ. ಪ್ರಧಾನಮಂತ್ರಿಗಳು ಅಭಿವೃದ್ಧಿ ಪರವಾಗಿ ಮಾತನಾಡುತ್ತಿಲ್ಲ, ಜನತೆಗೆ ರಕ್ಷಣೆ ನೀಡಿದ್ದೇವೆ ಎಂದು ಜಾಹಿರಾತಿನ ಮೂಲಕ ಹೇಳುತ್ತಿದ್ದಾರೆ. ಆದರೆ ಅತ್ಯಾಚಾರ, ಹಲ್ಲೆ, ಪರಿಶಿಷ್ಟರ ಮೇಲೆ ದೌರ್ಜನ್ಯ ಪ್ರಕರಣಗಳು ಹೆಚ್ಚಾಗುತ್ತಲೇ ಇದೆ ಮತ್ತು ದ್ವೇಷದ ರಾಜಕಾರಣ ನಡೆಯುತ್ತಿದೆ. ದೇಶದಲ್ಲಿ ಹಿಟ್ಲರ್ಗೂ ಮೀರಿದ ಆಡಳಿತ ನಡೆಯುತ್ತಿದ್ದು, ಮಾನವ ಹಕ್ಕುಗಳಿಗೆ ಬೆಲೆ ಇಲ್ಲದಾಗಿದೆ ಎಂದು ಆರೋಪಿಸಿದರು.
ಕೊಡಗಿನ ಗಿರಿಜನರ ಅಭಿವೃದ್ಧಿಗಾಗಿ ಇಲ್ಲಿನ ಶಾಸಕರಿಗೆ ಕನಿಷ್ಟ 1 ಕೋಟಿ ರೂ. ತರಲು ಸಾಧ್ಯವಾಗಲಿಲ್ಲ. ಕಳೆದ 8 ವರ್ಷಗಳಿಂದ ಗಿರಿಜನರ ಹಕ್ಕುಗಳನ್ನು ಕಸಿದುಕೊಳ್ಳಲಾಗುತ್ತಿದೆ. ಮಳೆಹಾನಿಯಿಂದ ಸಂತ್ರಸ್ತರಾದವರಿಗೆ ಪರಿಹಾರ ದೊರಕಿಸಿಕೊಡುವಲ್ಲಿ ವಿಫಲರಾಗಿದ್ದಾರೆ. ಹಾಸನ ಮತ್ತು ಮೈಸೂರು ಜಿಲ್ಲೆ ಸಾಕಷ್ಟು ಅಭಿವೃದ್ಧಿ ಹೊಂದಿದೆ, ಆದರೆ ಪಕ್ಕದ ಜಿಲ್ಲೆ ಕೊಡಗು ಹಾಗೆಯೇ ಇದೆ ಎಂದು ಟೀಕಿಸಿದರು.
ಹೊಸಪೇಟೆಯಲ್ಲಿ ಹಳೆಯ ಬಟ್ಟೆಗಳನ್ನು ಮಾರಾಟ ಮಾಡಿ ಜೀವನ ಸಾಗಿಸುತ್ತಿದ್ದ ನಾಲ್ವರು ಬಡ ಮಹಿಳೆಯರನ್ನು ಜಿಎಸ್ಟಿ ಪಾವತಿಸಿಲ್ಲ ಎಂದು ಪೊಲೀಸ್ ಠಾಣೆಗೆ ಕರೆ ತಂದ ಪ್ರಕರಣ ನಡೆದಿದೆ. ಕಡು ಬಡವರು, ದುರ್ಬಲರು ಕೂಡ ಜಿಎಸ್ಟಿ ಪಾವತಿಸಬೇಕೆಂದು ಒತ್ತಡ ಹೇರಲಾಗುತ್ತಿದೆ. ಈ ರೀತಿಯ ಮನುಷ್ಯ ವಿರೋಧಿ ನಡೆ ದೇಶ ದ್ರೋಹವೆಂದು ದ್ವಾರಕನಾಥ್ ಅಸಮಾಧಾನ ವ್ಯಕ್ತಪಡಿಸಿದರು.
ಕಾಂಗ್ರೆಸ್ ಪ್ರಮುಖ ಕುಡಿಯರ ಮುತ್ತಪ್ಪ ಮಾತನಾಡಿ, ಜಿಲ್ಲೆಗೆ ಗಿರಿಜನರ ಅಭಿವೃದ್ಧಿಗಾಗಿ ಯಾವುದೇ ಅನುದಾನ ಬಂದಿಲ್ಲ. ಗಿರಿಜನರ ಕಾಲೋನಿಗಳಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ ಕಾಡುತ್ತಿದೆ. ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಗಳಾಗಿದ್ದಾಗ ನೀಡುತ್ತಿದ್ದ ಪೌಷ್ಠಿಕ ಆಹಾರದಲ್ಲಿ ಶೇ.50 ರಷ್ಟು ಆಹಾರವನ್ನು ಈಗಿನ ಆಡಳಿತ ವ್ಯವಸ್ಥೆ ಕಡಿತಗೊಳಿಸಿದೆ ಎಂದು ಆರೋಪಿಸಿದರು.
ಸುದ್ದಿಗೋಷ್ಟಿಯಲ್ಲಿ ಕಾಂಗ್ರೆಸ್ ಪ್ರಚಾರ ಸಮಿತಿಯ ಜಿಲ್ಲಾಧ್ಯಕ್ಷ ಟಿ.ಪಿ.ರಮೇಶ್, ರಾಷ್ಟ್ರೀಯ ಮಹಿಳಾ ಕಾಂಗ್ರೆಸ್ನ ಸಂಘಟಕಿ ಡಾ.ಚಮಣ್ ಫರ್ಜಾನ, ಜಿಲ್ಲಾ ಪ್ರಮುಖರಾದ ಸರ ಚಂಗಪ್ಪ ಹಾಗೂ ಡಾ.ಹೆಚ್.ಎಂ.ಕಾವೇರಿ ಉಪಸ್ಥಿತರಿದ್ದರು.
Breaking News
- *ಭಾಗಮಂಡಲ ಫ್ಲೈ ಓವರ್ – ಫ್ಲಾಶ್ ಬ್ಯಾಕ್*
- *ಅರ್ಚಕರ ಮೇಲೆ ನಡೆದ ಹಲ್ಲೆ ಪ್ರಕರಣ : ಸಹಕರಿಸಿದ ಆರೋಪಿಗಳು ಹಾಗೂ ವಾಹನಗಳು ವಶ : ಆರೋಪಿಗಳಿಗೆ ಸಹಾಯ ಮಾಡುತ್ತಿರುವವರ ಕುರಿತು ಮಾಹಿತಿ ಒದಗಿಸಲು ಎಸ್ಪಿ ಮನವಿ*
- *ಮುಖ್ಯಮಂತ್ರಿಗಳಿಗೆ ಕೊಡಗು ಎಸ್ಡಿಪಿಐಯಿಂದ ಪಂಚ ಪ್ರಶ್ನೆ*
- *ಜೀವ ಬೆದರಿಕೆ ಇದೆ ಎಂದು ಆರೋಪಿಸಿ ದೂರು ನೀಡಿದ ಎನ್.ಯು.ನಾಚಪ್ಪ*
- *ಮಡಿಕೇರಿಯಲ್ಲಿ ಹುತಾತ್ಮ ದಿನಾಚರಣೆ : ಗಾಂಧೀಜಿ ತತ್ವ, ಆದರ್ಶ ಮೈಗೂಡಿಸಿಕೊಳ್ಳಿ : ಜಿಲ್ಲಾಧಿಕಾರಿ ವೆಂಕಟ್ ರಾಜಾ ಕರೆ*
- *ಕೊಡಗು : ಫೆ.13 ರವರೆಗೆ “ಸ್ಪರ್ಶ್ ಕುಷ್ಠರೋಗ ಜಾಗೃತಿ ಅಭಿಯಾನ”*
- *ಒಳಮೀಸಲಾತಿ ಶೀಘ್ರ ಜಾರಿಗೆ ತರಲು ದಲಿತ ಸಂಘರ್ಷ ಸಮಿತಿ ಆಗ್ರಹ*
- *ಮೂರ್ನಾಡು ಗಜಾನನ ಯುವಕ ಸಂಘ ಖಂಡನೆ*
- *ಅಮಾಯಕರ ಮೇಲಿನ ಹಲ್ಲೆ ಖಂಡನೀಯ : ಮೂರ್ನಾಡು ಆಪ್ತಮಿತ್ರ ಬಳಗ ಅಸಮಾಧಾನ*
- *ವಿರಾಜಪೇಟೆ ಕೊಡವ ಪೊಮ್ಮಕ್ಕಡ ಒಕ್ಕೂಟದಿಂದ ಸಂಭ್ರಮದ ಪುತ್ತರಿ ಒತ್ತೋರ್ಮೆ ಕೂಟ*