ಮಡಿಕೇರಿ ಮೇ 5 : ನಗರದಂಚಿನಲ್ಲಿರುವ ಕರ್ಣಂಗೇರಿ ಕ್ಷೇತ್ರದ ಶ್ರೀ ರಾಜರಾಜೇಶ್ವರಿ ದೇವಾಲಯದ ವಾರ್ಷಿಕೋತ್ಸವ ಹಾಗೂ ರಥೋತ್ಸವವು ಶ್ರದ್ಧಾಭಕ್ತಿಯಿಂದ ಜರುಗಿತು.
ಮುಂಜಾನೆ ಧ್ವಜಾರೋಹಣದ ಮೂಲಕ ವಿವಿಧ ಪೂಜಾ ಕೈಂಕರ್ಯಗಳಿಗೆ ಚಾಲನೆ ದೊರೆಯಿತು.
ನಂತರ ಗಣಪತಿ ಹೋಮ, ದೇವಿಗೆ ಅಭಿಷೇಕ, ಹೂವಿನ ಅಲಂಕಾರ ಪೂಜೆ, ತೀರ್ಥ ಸ್ನಾನ, ಕಳಸ ಪೂಜೆ, ನೈವೇದ್ಯ ಪ್ರಸಾದ ಹಾಗೂ ಮಹಾಮಂಗಳಾತಿ ನಡೆಯಿತು.
ನಂತರ ದೇವಾಲಯದ ಆವರಣದ ಸುತ್ತಲೂ ದೇವಿಯ ರಥೋತ್ಸವ ನಂತರ ನೆರವೇರಿತು. ಬಳಿಕ ತುಲಾಭಾರ, ತಲೆಮುಡಿ ತೆಗೆಯುವುದು, ತೀರ್ಥಸ್ನಾನ, ಉರುಳು ಸೇವೆ, ಕುಂಕುಮ ಅರ್ಚನೆ ಮತ್ತು ಮಂಗಳಾರತಿ ಹಾಗೂ ತಾಯಿಯ ದರ್ಶನ ನೆರವೇರಿತು.
ಸಂಜೆ ದೇವಾಲಯದಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ದೀಪಾಲಂಕಾರ ನಡೆಯಿತು.
ನಗರದ ಹಾಗೂ ವಿವಿಧೆಡೆಯಿಂದ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು.