ಕುಶಾಲನಗರ ಮೇ 5 : ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆಯಲ್ಲಿ ಭಜರಂಗದಳ ನಿಷೇಧ ಅಂಶ ಪ್ರಕಟವಾದ ಹಿನ್ನೆಲೆಯಲ್ಲಿ ಕುಶಾಲನಗರದ ವಿವಿಧ ದೇವಾಲಯಗಳಲ್ಲಿ ಹನುಮಾನ್ ಚಾಲಿಸಾ ಪಾರಾಯಣ ಕಾರ್ಯಕ್ರಮ ಹಮ್ಮಿಕೊಂಡಿದ್ದರು.
ಕುಶಾಲನಗರ ರಾಮಾಂಜನೇಯ ಉತ್ಸವ ಸಮಿತಿಯ ನೇತೃತ್ವದಲ್ಲಿ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಸೇರಿ ಪಾರಾಯಣ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಪ್ರಮುಖರಾದ ಜಿಎಲ್ ನಾಗರಾಜ್, ನವನೀತ್ ಪೊನ್ನಟ್ಟಿ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಪ್ರಣಾಳಿಕೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಈ ಸಂದರ್ಭ ಸಮಿತಿಯ ಪ್ರಮುಖರಾದ ಪ್ರವೀಣ್, ರಾಜೀವ್, ಪುಂಡರಿಕಾಕ್ಷ,, ಆರ್ ರಾಜೀವ್, ವಿನು ಅಮೃತರಾಜ್, ಆಮೆ ಜನಾರ್ಧನ್ ಮತ್ತಿತರರು ಇದ್ದರು.
ವಿಶ್ವ ಹಿಂದೂ ಪರಿಷತ್ನ ಜಿಲ್ಲಾ ಸಂಚಾಲಕರಾದ ಸಂತೋಷ್ ನೇತೃತ್ವದಲ್ಲಿ ವಿವಿಧ ದೇವಾಲಯಗಳಲ್ಲಿ ಕಾರ್ಯಕರ್ತರು ಪಾರಾಯಣ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.








