ಮಡಿಕೇರಿ ಮೇ 6 : ಕೆಪಿಸಿಸಿ ಸದಸ್ಯರಾಗಿದ್ದ ಕದ್ದಣಿಯಂಡ ಹರೀಶ್ ಬೋಪಣ್ಣ ಕಾಂಗ್ರೆಸ್ ಪಕ್ಷ ತೊರೆದು ಭಾರತೀಯ ಜನತಾ ಪಾರ್ಟಿ ಗೆ ಸೇರ್ಪಡೆಗೊಂಡಿದ್ದಾರೆ.
ಶಾಸಕ ಕೆ.ಜಿ.ಬೋಪಯ್ಯ ಅವರ ಸರಳತೆ, ಸಜ್ಜನಿಕೆ ಹಾಗೂ ಬಿಜೆಪಿ ಯ ತತ್ವ ಸಿದ್ಧಾಂತವನ್ನು ಮೆಚ್ಚಿ ಬಿಜೆಪಿ ಪಕ್ಷವನ್ನು ಸೇರ್ಪಡೆಗೊಂಡಿರುವುದಾಗಿ ಹರೀಶ್ ಬೋಪಣ್ಣ ಸ್ಪಷ್ಟಪಡಿಸಿದರು.
ಈ ಸಂದರ್ಭ ಶಾಸಕ ಕೆ.ಜಿ.ಬೋಪಯ್ಯ, ಬಿಜೆಪಿ ಜಿಲ್ಲಾಧ್ಯಕ್ಷ ರಾಬಿನ್ ದೇವಯ್ಯ, ಜಿಲ್ಲಾ ಬಿಜೆಪಿ ಕಾರ್ಯಕಾರಿ ಸಮಿತಿಯ ಸದಸ್ಯ ತೇಲಪಂಡ ಶಿವಕುಮಾರ್ ನಾಣಯ್ಯ ಹಾಗೂ ಮತ್ತಿತರ ಕಾರ್ಯಕರ್ತರು ಹಾಜರಿದ್ದರು.








