ಮಡಿಕೇರಿ ಮೇ 6 : ವಿರಾಜಪೇಟೆ ತಾಲ್ಲೂಕಿನ ಪೊನ್ನಂಪೇಟೆ ಗ್ರಾ.ಪಂ ವ್ಯಾಪ್ತಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ರಂಗೋಲಿ ಸ್ಪರ್ಧೆ ಮತ್ತು ಜಾಥ ಕಾರ್ಯಕ್ರಮಕ್ಕೆ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಜಾಲನೆ ನೀಡಿದರು.
ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆ ಮತದಾರರ ಶಿಕ್ಷಣ ಮತ್ತು ಜಾಗೃತಿ(ಸ್ವೀಪ್) ಕಾರ್ಯಕ್ರಮದಡಿ ಜಿಲ್ಲೆಯಲ್ಲಿ ಮತದಾನದ ಪ್ರಮಾಣವನ್ನು ಹೆಚ್ಚಿಸುವ ಉದ್ದೇಶದಿಂದ ಕೊಡಗು ಜಿಲ್ಲಾಡಳಿತ, ಕೊಡಗು ಜಿಲ್ಲಾ ಸ್ವೀಪ್ ಸಮಿತಿ, ತಾಲ್ಲೂಕು ಸ್ವೀಪ್ ಸಮಿತಿ ಹಾಗೂ ಸ್ತ್ರೀ ಶಕ್ತಿ ಒಕ್ಕೂಟಗಳು ಹಾಗೂ NRLM ಸಹಯೋಗದೊಂದಿಗೆ ಕಾರ್ಯಕ್ರಮ ನಡೆಯಿತು.
ಪೊನ್ನಂಪೇಟೆ ಗ್ರಾ.ಪಂ ವ್ಯಾಪ್ತಿಯಲ್ಲಿ ಜಾಥ ಕಾರ್ಯಕ್ರಮವನ್ನು ಹಮ್ಮಿಕೊಂಡು ಘೋಷಣೆಗಳನ್ನು ಕೂಗುವ ಮೂಲಕ ಮೂಲಕ ಸಾರ್ವಜನಿಕವಾಗಿ ಮತದಾನ ಜಾಗೃತಿಯನ್ನು ಮೂಡಿಸಲಾಯಿತು.
ನಂತರ ಮತದಾನ ಜಾಗೃತಿ ರಂಗೋಲಿ ಸ್ಪರ್ಧೆಯಲ್ಲಿ ಉತ್ತಮವಾಗಿ ರಂಗೋಲಿಯನ್ನು ಚಿತ್ರಿಸಿದ ಮಹಿಳೆಯರಿಗೆ ಪ್ರಶಸ್ತಿ ಹಾಗೂ ಪ್ರಮಾಣ ಪತ್ರವನ್ನು ನೀಡಿ ಅಭಿನಂದಿಸಲಾಯಿತು.
ರಂಗೋಲಿ ಸ್ಪರ್ಧೆಯಲ್ಲಿ 19 ವರ್ಷದ ಒಳಗಿನ ಮಕ್ಕಳಿಗೂ ಅವಕಾಶವನ್ನು ನೀಡಿ ಪ್ರಶಸ್ತಿ ಹಾಗೂ ಪ್ರಮಾಣ ಪತ್ರವನ್ನು ವಿತರಿಸಲಾಯಿತು. ಅಲ್ಲದೇ ಸ್ಪರ್ಧೆಯಲ್ಲಿ ಭಾಗವಹಿಸಿದ ಎಲ್ಲಾ ಮಹಿಳೆಯರಿಗೂ ಪ್ರಮಾಣ ಪತ್ರವನ್ನು ವಿತರಿಸಲಾಯಿತು.
ಈ ಸಂದರ್ಭ ಮುಖ್ಯ ಯೋಜನಾಧಿಕಾರಿಗಳು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಸಹಾಯಕ ನಿರ್ದೇಶಕರು , ತಾಲ್ಲೂಕು ಪಂಚಾಯಿತಿ ವ್ಯವಸ್ಥಾಪಕರು , ತಾಲ್ಲೂಕು ಪಂಚಾಯಿತಿ ಸಿಬ್ಬಂದಿ ವರ್ಗದವರು ಹಾಗೂ ಇತರರು ಉಪಸ್ಥಿತರಿದ್ದರು.









