ಮಡಿಕೇರಿ ಮೇ 6 : ಚುನಾವಣಾ ಪ್ರಚಾರಕ್ಕಾಗಿ ಜಿಲ್ಲೆಯ ಗಡಿ ಅರಕಲಗೂಡಿಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂತಪ್ಪ ಆಗಮಿಸಿ ದೊಡ್ಡಮಠಕ್ಕೆ ಭೇಟಿ ನೀಡಿದರು.
ಈ ಸಂದರ್ಭ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊಡಗು ಜಿಲ್ಲೆ ಬಿಜೆಪಿಯ ಭದ್ರಕೋಟೆ. ಇಲ್ಲಿನ ಜನತೆ ಪ್ರಜ್ಞಾವಂತರು ಈ ಹಿಂದಿನಿಂದಲೂ ನಮ್ಮನ್ನು ಆಶೀರ್ವಾದಿಸುತ್ತಾ ಬಂದಿದ್ದಾರೆ. ಈ ಭಾರಿಯು ನಮ್ಮ ಪಕ್ಷದಿಂದ ಅಪ್ಪಚ್ಚು ರಂಜನ್ ಹಾಗೂ ಬೋಪಯ್ಯ ಸ್ಪರ್ಧಿಸಿದ್ದು, ನಿಮ್ಮೆಲ್ಲರ ಆಶೀರ್ವಾದ ಅವರ ಮೇಲಿರಲಿ ಎಂದರು.
ರಾಜ್ಯದ ಜನತೆ ಬಿಜೆಪಿ ಪರವಾಗಿದ್ದಾರೆ. ಈ ಚುನಾವಣೆಯಲ್ಲಿ ಅತಿ ಹೆಚ್ಚಿನ ಸ್ಥಾನ ಗಳಿಸುವ ಮೂಲಕ ಮತ್ತೊಮ್ಮೆ ಈ ರಾಜ್ಯದ ಆಡಳಿತ ಚುಕ್ಕಾಣಿ ಹಿಡಿಯಲಿದ್ದೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಮಾಜಿ ಶಾಸಕ ಎ.ಟಿ.ರಾಮಸ್ವಾಮಿ, ದೊಡ್ಡ ಮಠದ ಮಠಾಧೀಶರಾದ ಶ್ರೀ ಮಲ್ಲಿಕಾರ್ಜುನ ದೇವರು, ಬಸವ ಪಟ್ಟಣ ಮಠದ ಶ್ರೀ ಸ್ವತಂತ್ರ ಬಸವಲಿಂಗ ಸ್ವಾಮೀಜಿ, ಕಲ್ಲು ಮಠದ ಶ್ರೀ ಮಹಾಂತ ಸ್ವಾಮೀಜಿ ಸೇರಿದಂತೆ ವಿವಿಧ ಮಠಾಧೀಶರು, ಪಕ್ಷದ ಪ್ರಮುಖರು ಈ ಸಂದರ್ಭ ಹಾಜರಿದ್ದರು.








