ವಿರಾಜಪೇಟೆ ಮೇ 6 : ಕೊಡಗು ವಿಶ್ವವಿದ್ಯಾನಿಲಯದ ಪ್ರಥಮ ಕುಲಪತಿಗಳಾಗಿ ನೇಮಕವಾದ ಪ್ರೊ.ಅಶೋಕ ಸಂಗಪ್ಪ ಆಲೂರ ಅವರನ್ನು ವಿರಾಜಪೇಟೆಯ ಸಂತ ಅನ್ನಮ್ಮ ವಿದ್ಯಾಸಂಸ್ಥೆ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.
ಕುಲಪತಿಗಳ ಕಚೇರಿಯಲ್ಲಿ ಸಂತ ಅನ್ನಮ್ಮ ವಿದ್ಯಾಸಂಸ್ಥೆಗಳ ವ್ಯವಸ್ಥಾಪಕ ರೆ.ಫಾ.ಐಸಾಕ್ ರತ್ನಕರ್ ಸನ್ಮಾನಿಸಿ ಅಭಿನಂದಿಸಿದರು.
ಈ ಸಂದರ್ಭದಲ್ಲಿ ಸೆಂಟ್ ಆನ್ಸ್ ಪದವಿ ಕಾಲೇಜಿನ ಪ್ರಾಂಶುಪಾಲರಾದ ತೃಪ್ತಿ ಬೋಪಣ್ಣ, ಐಕ್ಯೂಎಸಿ ಸಂಚಾಲಕರಾದ ಬಿ.ಡಿ.ಹೇಮ ಹಾಜರಿದ್ದರು.







