ಮಡಿಕೇರಿ ಮೇ 6 : ರಾಜ್ಯ ಬಾಲ ಭವನ ಸೊಸೈಟಿ, ಬೆಂಗಳೂರು, ಜಿಲ್ಲಾ ಬಾಲಭವನ ಸಮಿತಿ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಇವರ ಸಹಯೋಗದೊಂದಿಗೆ (1 ರಿಂದ 10ನೇ ತರಗತಿ) 5 ರಿಂದ 16 ವರ್ಷದ ಮಕ್ಕಳಿಗಾಗಿ ಪೊನ್ನಮ್ಮ ಕುಶಾಲಪ್ಪ ಸ್ಕೌಟ್ಸ್ ಅಂಡ್ ಗೈಡ್ಸ್ ಭವನ, ಮ್ಯಾನ್ಸ್ ಕಾಂಪೌಂಡ್, ಮಡಿಕೇರಿ. ಇಲ್ಲಿ ಮೇ, 15 ರಿಂದ 29 ರವರೆಗೆ ಉಚಿತ ಬೇಸಿಗೆ ಶಿಬಿರ ನಡೆಯಲಿದೆ.
ಈ ಶಿಬಿರದಲ್ಲಿ ಸೃಜನಾತ್ಮಕ ಹಾಗೂ ಕ್ರಿಯಾತ್ಮಕ ಚಟುವಟಿಕೆಗಳನ್ನು ಸಂಪನ್ಮೂಲ ವ್ಯಕ್ತಿಗಳಿಂದ ಮಕ್ಕಳಿಗೆ ತರಬೇತಿ ನೀಡಲಾಗುವುದು. ಆದ್ದರಿಂದ ಈ ಶಿಬಿರದಲ್ಲಿ ಭಾಗವಹಿಸಲು ಆಸಕ್ತಿ ಇರುವ ಮಕ್ಕಳು ಮೇ, 12 ರೊಳಗೆ ದೂರವಾಣಿ ಸಂಖ್ಯೆ 8618861505, 6363285685 ಕಚೇರಿ ಸಮಯದಲ್ಲಿ ಸಂಪರ್ಕಿಸಿ ಹೆಸರು ನೋಂದಾಯಿಸಿಕೊಳ್ಳುವಂತೆ ತಿಳಿಸಿದೆ.
ಕಚೇರಿಯಲ್ಲಿ ಹೆಸರು ನೋಂದಾಯಿಸಿದ ಮಕ್ಕಳಿಗೆ ಮಾತ್ರ ಶಿಬಿರದಲ್ಲಿ ಭಾಗವಹಿಸಲು ಅವಕಾಶ ನೀಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ಎನ್.ಮಂಜುನಾಥ್ ಅವರು ತಿಳಿಸಿದ್ದಾರೆ.