ಮಡಿಕೇರಿ ಮೇ 6 : ರೆಗ್ಯೂಲರ್ ಡಿಪ್ಲೊಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್ಮೆಂಟ್ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಕೋರ್ಸ್ ಅವಧಿ 6 ತಿಂಗಳು ಜುಲೈ, 1 ರಿಂದ 6 ತಿಂಗಳ ಅವಧಿಯ ರೆಗ್ಯೂಲರ್ ಡಿಪ್ಲೊಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್ಮೆಂಟ್ನಲ್ಲಿ ಸಹಕಾರ ತರಬೇತಿ ಪ್ರಾರಂಭಿಸಲಾಗುತ್ತಿದ್ದು, ಕೊಡಗು ಮತ್ತು ಹಾಸನ ಜಿಲ್ಲೆಗಳ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಪ್ರವೇಶ ಪಡೆದ ಎಲ್ಲಾ ಸಾಮಾನ್ಯ ಅಭ್ಯರ್ಥಿಗಳಿಗೆ ಪ್ರತಿ ಮಾಹೆಯಾನ ರೂ.500 ಶಿಷ್ಯವೇತನ ನೀಡಲಾಗುವುದು. ಎಸ್.ಸಿ/ಎಸ್.ಟಿ ಅಭ್ಯರ್ಥಿಗಳಿಗೆ ಪ್ರತಿ ಮಾಹೆಯಾನ ರೂ.600 ಶಿಷ್ಯವೇತನ ನೀಡಲಾಗುವುದು. ಪ್ರತ್ಯೇಕ ತರಗತಿ ಹಾಗೂ ಕಂಪ್ಯೂಟರ್ ಲ್ಯಾಬ್ ವ್ಯವಸ್ಥೆ, ಪ್ರವೇಶ ಪಡೆದ ಅಭ್ಯರ್ಥಿಗಳಿಗೆ ಉಚಿತ ವಸತಿ ಗೃಹದ ವ್ಯವಸ್ಥೆ ಇದೆ.
ತರಬೇತಿ ಪಡೆದವರಿಗೆ ವಿವಿಧ ರೀತಿಯ ಸಹಕಾರ ಸಂಘ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸಲು ಅವಕಾಶ. ಸಹಕಾರ ಬ್ಯಾಂಕುಗಳಲ್ಲಿ ಹಾಗೂ ಇತರೆ ಸಹಕಾರ ಸಂಸ್ಥೆಗಳ ನೇಮಕಾತಿಯಲ್ಲಿ ಆದ್ಯತೆ. ಕೆಎಎಸ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅನುಕೂಲಕರ ವಿದ್ಯಾರ್ಹತೆ ಎಸ್ಎಸ್ಎಲ್ಸಿ, ಪಿಯುಸಿ, ಪದವಿ, ಸ್ನಾತಕೋತ್ತರ ಪದವಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಹೆಚ್ಚಿನ ಮಾಹಿತಿಗೆ ದೂ.ಸಂ. 9845318364, 9663153922, 7259729104, 8762110952, 8792628437 ಮತ್ತು 8762925862 ನ್ನು ಸಂಪರ್ಕಿಸಬಹುದು ಎಂದು ಕೆಐಸಿಎಂ ಡಾ.ಆರ್.ಎಸ್.ರೇಣುಕಾ ಅವರು ತಿಳಿಸಿದ್ದಾರೆ.
Breaking News
- *ಮಡಿಕೇರಿಯಲ್ಲಿ ಪರಾಕ್ರಮ್ ದಿವಸ್ ಆಚರಣೆ : ಪರೀಕ್ಷಾ ಪೇ ಚರ್ಚಾ 9ನೇ ಆವೃತ್ತಿ*
- *ಕಳೆದು ಹೋಗಿದೆ*
- *ಫೆ.27 ಮತ್ತು 28 ರಂದು ಕೊಡವ ಬಲ್ಯನಮ್ಮೆ : ವಿವಿಧ ಸ್ಪರ್ಧೆಗಳಿಗೆ ಆಹ್ವಾನ*
- *ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಆಹ್ವಾನ*
- *ಕೊಡವ ಲ್ಯಾಂಡ್ ಭೂರಾಜಕೀಯ ಸ್ವಾಯತ್ತತೆ : ಮಾ.11ಕ್ಕೆ ವಿಚಾರಣೆ ಮುಂದೂಡಿಕೆ*
- *ಜ.25 ರಂದು ಜಿಲ್ಲಾ ಮಟ್ಟದ ಜನಸ್ಪಂದನ ಕಾರ್ಯಕ್ರಮ*
- *ಜ.30 ರಂದು ಹುತಾತ್ಮರ ದಿನಾಚರಣೆ : ಮಡಿಕೇರಿಯಲ್ಲಿ ಪೂರ್ವಭಾವಿ ಸಭೆ*
- *ಹೈದರಾಬಾದ್ನಲ್ಲಿ ಗಮನ ಸೆಳೆದ ಕುಡಿಯರ ಉರುಟಿಕೊಟ್ಟ್ ಪಾಟ್ ನೃತ್ಯ*
- *ಮಡಿಕೇರಿ : ಜ.28 ರಂದು ಕುಂದುರುಮೊಟ್ಟೆ ದಸರಾ ಉತ್ಸವ ಸಮಿತಿಯ ಸುವರ್ಣ ಮಹೋತ್ಸವ ಸ್ಮರಣ ಸಂಚಿಕೆ “ದಶಮಿ” ಬಿಡುಗಡೆ*
- *ಮಡಿಕೇರಿಯ ಡಾ.ಅಂಬೇಡ್ಕರ್ ಭವನವನ್ನು ದಲಿತ ಸಂಘರ್ಷ ಸಮಿತಿಯ ವಶಕ್ಕೆ ನೀಡಿ*