ಮಡಿಕೇರಿ ಮೇ 6 : ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಪರ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಮತಯಾಚಿಸಿದರು. ಇದೇ ಸಂದರ್ಭ ಅವರು ಪುತ್ತೂರು ಶ್ರೀಮಹಾಲಿಂಗೇಶ್ವರ ದೇವಾಲಯದಲ್ಲಿ ಪೂಜೆಯಲ್ಲಿ ಪಾಲ್ಗೊಂಡು ಆರತಿ ಬೆಳಗಿದರು. ಬಿಜೆಪಿ ಪ್ರಮುಖರು ಹಾಗೂ ದೇವಾಲಯ ಆಡಳಿತ ಮಂಡಳಿಯ ಪದಾಧಿಕಾರಿಗಳು ಹಾಜರಿದ್ದರು.












