ಮಡಿಕೇರಿ ಮೇ 7 : ಮಡಿಕೇರಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಮಂತರ್ ಗೌಡ ಪರ ನಗರದಲ್ಲಿ ಭರ್ಜರಿ ಪ್ರಚಾರ ನಡೆಯಿತು. ಮತಯಾಚನೆಯ ನೇತೃತ್ವ ವಹಿಸಿದ್ದ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಸ್.ಐ.ಮುನೀರ್ ಅಹಮ್ಮದ್ ಅವರು ಜಿಲ್ಲೆಯ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.











