ಮಡಿಕೇರಿ ಏ.8 : ಮಾರ್ಚ್ ಮತ್ತು ಏಪ್ರಿಲ್ ತಿಂಗಳಲ್ಲಿ ನಡೆದ ಎಸ್‍ಎಸ್‍ಎಲ್‍ಸಿ ಪರೀಕ್ಷಾ ಫಲಿತಾಂಶ ಇಂದು ಪ್ರಕಟವಾಗಿದ್ದು, ಕೊಡಗು 9ನೇ ಸ್ಥಾನ ಪಡೆದುಕೊಂಡಿದೆ.
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ನಡಿಸಿದ ಸುದ್ದಿಗೋಷ್ಠಿಯಲ್ಲಿ , ‘ಚಿತ್ರದುರ್ಗ ಹೆಚ್ಚು ಫಲಿತಾಂಶವನ್ನು ಪಡೆದುಕೊಂಡಿದೆ. ಎರಡನೆಯ ಜಿಲ್ಲೆ ಮಂಡ್ಯ, ಮೂರನೇ ಜಿಲ್ಲೆ ಹಾಸನ ಜಿಲ್ಲೆಯಾಗಿದೆ. ಬೆಂಗಳೂರು ಗ್ರಾಮಾಂತರ ನಾಲ್ಕನೇ ಸ್ಥಾನದಲ್ಲಿ ಇದೆ. ಕೊನೆಯ ಜಿಲ್ಲೆ ಯಾದಗಿರಿ ಜಿಲ್ಲೆಯಾಗಿದೆ. ನಾಲ್ವರು ವಿದ್ಯಾರ್ಥಿಗಳು 625ಕ್ಕೆ 625 ಅಂಕಗಳನ್ನು ಪಡೆದಿದ್ದಾರೆ.