ಮಡಿಕೇರಿ ಮೇ 8 : ಹತ್ತನೇ ತರಗತಿ ಫಲಿತಾಂಶ ಪ್ರಕಟಗೊಂಡಿದ್ದ ಬೆಂಗಳೂರಿನ ಹೊಸೂರು ರಸ್ತೆಯಲ್ಲಿರುವ ನ್ಯೂ ಮೆಕಾಲೆ ಶಾಲೆಯ ವಿದ್ಯಾರ್ಥಿನಿ ಭೂಮಿಕಾ ಪೈ, ಚಿಕ್ಕಬಳ್ಳಾಪುರದ ಅಗಲಗುರ್ಕಿ ಬಿಜಿಎಸ್ ಶಾಲೆಯ ಯಶಸ್ ಗೌಡ, ಬೆಳಗಾವಿ ಜಿಲ್ಲೆಯ ಸವದತ್ತಿಯ ಶ್ರೀ ಕುಮಾರೇಶ್ವರ ಶಾಲೆಯ ಅನುಪಮಾ ಶ್ರೀಶೈಲ್ ಹಿರೆಹೋಳಿ, ವಿಜಯಪುರದ ಭೀಮನಗೌಡ ಪಾಟೀಲ್ ಈ ನಾಲ್ವರು ವಿದ್ಯಾರ್ಥಿಗಳು 625ಕ್ಕೆ 625 ಅಂಕ ಗಳಿಸಿ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ್ದಾರೆ. ಈ ಬಾರಿ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಪಾಸಾದ ಬಾಲಕರ ಸಂಖ್ಯೆ 3,41,108 ಆಗಿದ್ದು, ಬಾಲಕಿಯರ ಸಂಖ್ಯೆ 3,59,511, SSLC ಫಲಿತಾಂಶದಲ್ಲಿ A ಗ್ರೇಡ್ ಪಡೆದ ಜಿಲ್ಲೆಗಳು ಸಂಖ್ಯೆ-23, ಬಿ ಗ್ರೇಡ್ ಪಡೆದ ಜಿಲ್ಲೆಗಳು ಸಂಖ್ಯೆ 12 ಆಗಿದೆ. ಕರ್ನಾಟಕ ಶಿಕ್ಷಣ ಇಲಾಖೆಯ ಅಧಿಕೃತ ವೆಬ್‍ಸೈಟ್ karresults.nic.in ನಲ್ಲಿ ಎಸ್‍ಎಸ್‍ಎಲ್‍ಸಿ ಫಲಿತಾಂಶ ವೀಕ್ಷಿಸಬಹುದು.










