ಮಡಿಕೇರಿ ಮೇ 8 : ಪ್ರೊ.ಬಿ.ಕೃಷ್ಣಪ್ಪ ಸ್ಥಾಪಿತ ಕರ್ನಾಟಕ ದಲಿತ ಸಂಘರ್ಷ ಸಮಿತಿ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ಸೂಚಿಸಿದ್ದು, ಅದರಂತೆ ವಿರಾಜಪೇಟೆ ಕ್ಷೇತ್ರದ ಮತದಾರರು ಕಾಂಗ್ರೆಸ್ ಅಭ್ಯರ್ಥಿ ಎ.ಎಸ್.ಪೊನ್ನಣ್ಣ ಅವರಿಗೆ ಮತ ನೀಡುವಂತೆ ಸಮಿತಿಯ ವಿರಾಜಪೇಟೆ ತಾಲ್ಲೂಕು ಸಂಚಾಲಕ ಮನು ಚೆನ್ನಯ್ಯನಕೋಟೆ ಹಾಗೂ ಮಹಿಳಾ ಒಕ್ಕೂಟದ ತಾಲ್ಲೂಕು ಸಂಚಾಲಕಿ ರೇಖಾ ಮಹೇಶ್ ಮನವಿ ಮಾಡಿದ್ದಾರೆ.
ಪತ್ರಿಕಾ ಪ್ರಟಕಣೆ ನೀಡಿರುವ ಅವರು, ಸಂವಿಧಾನ ವಿರೋಧಿ ನೀತಿಯ ಬಿಜೆಪಿ ಪಕ್ಷವನ್ನು ವಿರೋಧಿಸಿ ಕಾಂಗ್ರೆಸ್ ಪಕ್ಷವನ್ನು ಅಸ್ತಿತ್ವಕ್ಕೆ ತರಲು ಪ್ರೊ.ಬಿ. ಕೃಷ್ಣಪ್ಪ ಸ್ಥಾಪಿತ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ರಾಜ್ಯ ಸಮಿತಿಯ ತೀರ್ಮಾನದಂತೆ ರಾಜ್ಯ ಸಂಚಾಲಕ ಎಂ.ಗುರುಮೂರ್ತಿ ಶಿವಮೊಗ್ಗ ಅವರ ಆದೇಶದ ಮೇರೆಗೆ ಹಾಗೂ ಜಿಲ್ಲಾ ಸಂಚಾಲಕರಾದ ಗಾಯತ್ರಿ ನರಸಿಂಹ ನಿರ್ದೇಶನದಂತೆ ಜಿಲ್ಲೆಯಲ್ಲಿ ಎರಡು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವಿಗೆ ಸಂಘಟನೆ ಶ್ರಮಿಸುತ್ತಿದೆ ಎಂದರು.
ಕೇಂದ್ರ ಮತ್ತು ರಾಜ್ಯದ ಡಬಲ್ ಇಂಜಿನ್ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ದಲಿತ ಕಲ್ಯಾಣಕ್ಕೆ ಪೂರಕವಾದ ಯಾವುದೇ ಯೋಜನೆಗಳನ್ನು ಅನುಷ್ಠಾನಕ್ಕೆ ತಂದಿಲ್ಲ. ಒಳಮೀಸಲಾತಿ ಜಾರಿಗೆ ತರಲು ತಾರತಮ್ಯ ಮಾಡುವ ಮೂಲಕ ದಲಿತರ ಹಕ್ಕುಗಳನ್ನು ಕಿತ್ತುಕೊಳ್ಳುವ ಪ್ರಯತ್ನ ನಡೆಸಿದೆ ಎಂದು ಆರೋಪಿಸಿದ್ದಾರೆ.
ಮಕ್ಕಳಿಗೆ ನೀಡಲಾಗುತ್ತಿದ್ದ ವಿದ್ಯಾರ್ಥಿ ವೇತನವನ್ನು ನಿಲ್ಲಿಸಲಾಗಿದೆ. ಸರ್ಕಾರಿ ಇಲಾಖೆಗಳಲ್ಲಿ ಭ್ರಷ್ಟಚಾರ ಹೆಚ್ಚಾಗಿದೆ. ಅತ್ಯಾಚಾರಗಳು ಕೋಮು ಗಲಭೆಗಳು ಹೆಚ್ಚಾಗುತ್ತಿದ್ದು, ಪೆಟ್ರೋಲ್, ಡಿಸೇಲ್ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಜನರು ಸಂಕಷ್ಟಪಡುವಂತಾಗಿದೆ. ಕಳೆದ 20 ವರ್ಷಗಳಿಂದ ವಿರಾಜಪೇಟೆ ಕ್ಷೇತ್ರದಲ್ಲಿ ಬಿಜೆಪಿ ಶಾಸಕರಿದ್ದರೂ ವಿಧಾನಸಭೆಯಲ್ಲಿ ದಲಿತರ ಪರವಾದ ಧ್ವನಿಯನ್ನು ಎತ್ತಲಿಲ್ಲ. ಅಲ್ಲದೆ ಕ್ಷೇತ್ರದ ಅಭಿವೃದ್ಧಿ ಸಂಪೂರ್ಣ ಕುಂಟಿತಗೊಂಡಿದೆ ಎಂದು ಟೀಕಿಸಿದ್ದಾರೆ.
ವಿರಾಜಪೇಟೆ ಕ್ಷೇತ್ರದ ಕಾಂಗ್ರೆಸ್ ನ ಅಭ್ಯರ್ಥಿ ಹೈಕೋರ್ಟ್ ವಕೀಲ, ಅಭಿವೃದ್ಧಿಪರ ಚಿಂತನೆಯ ಎ.ಎಸ್.ಪೊನ್ನಣ್ಣ ಅವರಿಗೆ ಬೆಂಬಲ ವ್ಯಕ್ತಪಡಿಸಿ ಸಂಘಟನೆಯಿಂದ ಈಗಾಗಲೇ ಮತಯಾಚನೆ ಮಾಡಲಾಗುತ್ತಿದೆ. ಕ್ಷೇತ್ರದ ಮತದಾರರು ಬದಲಾವಣೆಯ ದೃಷ್ಟಿಯಿಂದ ಕಾಂಗ್ರೆಸ್ ಅಭ್ಯರ್ಥಿಗೆ ಮತದಾನ ಮಾಡುವಂತೆ ಮನು ಮನವಿ ಮಾಡಿದ್ದಾರೆ.
Breaking News
- *ಕೊಡಗು : ಡಿ.1 ರಿಂದ ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ ಪ್ರಕ್ರಿಯೆ ಆರಂಭ : ಜಿಲ್ಲಾಧಿಕಾರಿ ವೆಂಕಟ್ ರಾಜಾ*
- *ಪಡಿತರ ಚೀಟಿ ಪರಿಷ್ಕರಣೆ : ಅರ್ಹ ಬಿಪಿಎಲ್ ಕಾರ್ಡ್ ರದ್ದುಗೊಳಿಸುವುದಿಲ್ಲ : ಸಚಿವ ಮುನಿಯಪ್ಪ*
- *ಕೊಡಗು ಬ್ಲಡ್ ಡೋನಸ್೯ ಸಂಸ್ಥೆಯ 7ನೇ ವಾಷಿ೯ಕೋತ್ಸವ : ಜೀವ ಉಳಿಸುವ ರಕ್ತದಾನಿಗಳೇ ನಿಜವಾದ ಹೀರೋಗಳು : ಅನಿಲ್ ಹೆಚ್.ಟಿ.*
- *ದಿವ್ಯಜ್ಯೋತಿ ಪತ್ತಿನ ಸಹಕಾರ ಸಂಘದ ಚುನಾವಣೆ : ಜಾನ್ಸನ್ ಪಿಂಟೋ ಸೇರಿ ಹಲವರು ಕಣದಲ್ಲಿ*
- *ಕಲ್ಲು ಬಾಯ್ಸ್ ಲೈಕ್ಸ್ ಫ್ಯಾಶನ್ ಫುಟ್ಬಾಲ್ ಕಪ್ : ನಿಯೋನ್ ಎಫ್.ಸಿ ಅಮ್ಮತ್ತಿ ಚಾಂಪಿಯನ್*
- *ಗ್ರಾ.ಪಂ ಉಪಚುನಾವಣೆ : ಕೊಡಗಿನ ವಿವಿಧೆಡೆ ಮದ್ಯ ಮಾರಾಟ ನಿಷೇಧ*
- *ನಂದಿನಿ ವಿವಿಧ ಶ್ರೇಣಿಯ ಹಾಲು ಬಿಡುಗಡೆ : ದೇಶದ ಹಾಲು ಉತ್ಪಾದನೆಯಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದೆ : ಮುಖ್ಯಮಂತ್ರಿ ಸಿದ್ದರಾಮಯ್ಯ*
- *ಕಟ್ಟೆಹಾಡಿ ಅರಣ್ಯ ಹಕ್ಕು ಸಮಿತಿ ರಚನೆ : ಆದಿವಾಸಿಗಳನ್ನು ಒಕ್ಕಲೆಬ್ಬಿಸದಂತೆ ಆಗ್ರಹ*
- *ನ.29 ರಂದು ವಾಲ್ನೂರು-ತ್ಯಾಗತ್ತೂರು ಗ್ರಾಮ ಸಭೆ*
- *ಕೊಡಗು : ಗ್ರಾ.ಪಂ.ಉಪಚುನಾವಣೆ : ವಿವಿಧ ಸಂತೆ, ಜಾತ್ರೆಗಳ ನಿಷೇಧ*