ಮಡಿಕೇರಿ ಮೇ 8 : ಪ್ರೊ. ಬಿ.ಕೃಷ್ಣಪ್ಪ ಸ್ಥಾಪಿತ ಕರ್ನಾಟಕ ದಲಿತ ಸಂಘರ್ಷ ಸಮಿತಿ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡಲು ನಿರ್ಧರಿಸಿದ್ದು, ಮಡಿಕೇರಿ ಕ್ಷೇತ್ರದ ಮತದಾರರು ಕಾಂಗ್ರೆಸ್ ಅಭ್ಯರ್ಥಿ ಡಾ.ಮಂತರ್ ಗೌಡ ಅವರಿಗೆ ಮತ ನೀಡುವಂತೆ ಸಮಿತಿಯ ಮಡಿಕೇರಿ ತಾಲ್ಲೂಕು ಸಂಚಾಲಕ ದಿವಿನ್ ಹಾಗೂ ಮಹಿಳಾ ಒಕ್ಕೂಟದ ತಾಲ್ಲೂಕು ಸಂಚಾಲಕಿ ಶಶಿಕಲಾ ಮನವಿ ಮಾಡಿದ್ದಾರೆ.
ಪತ್ರಿಕಾ ಪ್ರಟಕಣೆ ನೀಡಿರುವ ಅವರು, ಪ್ರೊ. ಬಿ.ಕೃಷ್ಣಪ್ಪ ಸ್ಥಾಪಿತ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ರಾಜ್ಯ ಸಮಿತಿಯ ತೀರ್ಮಾನದಂತೆ ರಾಜ್ಯ ಸಂಚಾಲಕ ಎಂ.ಗುರುಮೂರ್ತಿ ಶಿವಮೊಗ್ಗ ಅವರ ಆದೇಶದ ಮೇರೆಗೆ ಹಾಗೂ ಜಿಲ್ಲಾ ಸಂಚಾಲಕರಾದ ಗಾಯತ್ರಿ ನರಸಿಂಹ ನಿರ್ದೇಶನದಂತೆ ಜಿಲ್ಲೆಯಲ್ಲಿ ಎರಡು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವಿಗೆ ಸಂಘಟನೆ ಶ್ರಮಿಸುತ್ತಿದೆ ಎಂದು ಹೇಳಿದ್ದಾರೆ.
ಬಿಜೆಪಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಕೇಂದ್ರ ಮತ್ತು ರಾಜ್ಯದಲ್ಲಿ ದಲಿತರನ್ನು ಕಡೆಗಣಿಸಲಾಗುತ್ತಿದೆ. ದಲಿತರ ಕಲ್ಯಾಣಕ್ಕಾಗಿ ಯಾವುದೇ ಯೋಜನೆಗಳನ್ನು ಅನುಷ್ಠಾನಕ್ಕೆ ತಾರದೆ ದಲಿತರ ಹಕ್ಕುಗಳನ್ನು ಕಿತ್ತುಕೊಳ್ಳುವ ಪ್ರಯತ್ನ ಮಾಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ.
ಕಳೆದ 20- 25 ವರ್ಷಗಳಿಂದ ಜಿಲ್ಲೆಯ ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಶಾಸಕರುಗಳೇ ಕಾರ್ಯ ನಿರ್ವಹಿಸುತ್ತಿದ್ದಾರೆ. ಆದರೆ ಜನಪರ ಅಭಿವೃದ್ಧಿ ಕಾರ್ಯಗಳು ಎಲ್ಲೂ ನಡೆದಿಲ್ಲ. ದಲಿತರಿಗಾಗಿ ಯಾವುದೇ ಯೋಜನೆ ಮತ್ತು ವಿಶೇಷ ಅನುದಾನವನ್ನು ತರುವ ಪ್ರಯತ್ನ ಮಾಡಿಲ್ಲ. ಜಿಲ್ಲೆಯ ಹಲವು ಭಾಗದಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡದವರು ಮೂಲಭೂತ ಸೌಲಭ್ಯಗಳಿಂದ ವಂಚಿತರಾಗಿದ್ದು, ನಿರಂತರ ಹೋರಾಟ ನಡೆಸಬೇಕಾದ ಅನಿವಾರ್ಯತೆ ಎದುರಾಗಿದೆ. ಜಿಲ್ಲೆಯ ಇಬ್ಬರು ಶಾಸಕರು ಈ ಬಗ್ಗೆ ಯಾವುದೇ ಸ್ಪಂದನೆ ನೀಡಿಲ್ಲವೆಂದು ಟೀಕಿಸಿದ್ದಾರೆ.
ಮಕ್ಕಳಿಗೆ ನೀಡಲಾಗುತ್ತಿದ್ದ ವಿದ್ಯಾರ್ಥಿ ವೇತನವನ್ನು ನಿಲ್ಲಿಸಲಾಗಿದೆ. ಸರ್ಕಾರಿ ಇಲಾಖೆಗಳಲ್ಲಿ ಭ್ರಷ್ಟಚಾರ ಹೆಚ್ಚಾಗಿದೆ. ಅತ್ಯಾಚಾರಗಳು ಕೋಮು ಗಲಭೆಗಳು ಹೆಚ್ಚಾಗುತ್ತಿದ್ದು, ಪೆಟ್ರೋಲ್, ಡಿಸೇಲ್ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಜನರು ಸಂಕಷ್ಟಪಡುವಂತಾಗಿದೆ. ಪರಿಸ್ಥಿತಿ ಹೀಗಿರುವಾಗ ಮತದಾರರು ಕಾಂಗ್ರೆಸ್ ನ್ನು ಬೆಂಬಲಿಸುವುದು ಸೂಕ್ತ ಎಂದು ದಿವಿನ್ ಹೇಳಿದ್ದಾರೆ.
ಮಡಿಕೇರಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಾ.ಮಂತರ್ ಗೌಡ ಅವರನ್ನು ಗೆಲ್ಲಿಸುವಂತೆ ಮನವಿ ಮಾಡಿದ್ದಾರೆ.
Breaking News
- *ವೀರ ಸೇನಾನಿಗಳಿಗೆ ಅಗೌರವ : ಜಿಲ್ಲಾ ಬಿಜೆಪಿಯಿಂದ ಎಸ್ಪಿಗೆ ದೂರು*
- *ಮಡಿಕೇರಿಯಲ್ಲಿ ವಕೀಲರ ಸಂಘದಿಂದ ಪ್ರತಿಭಟನೆ*
- *ಜಿಲ್ಲಾ ಮಟ್ಟದ ಯುವಜನೋತ್ಸವ : ಹೆಸರು ನೋಂದಾಯಿಸಿಕೊಳ್ಳಲು ನ.28 ಕೊನೆ ದಿನ*
- *ನ.26 ರಂದು ಸಿಎನ್ಸಿಯಿಂದ ಕೊಡವ ನ್ಯಾಷನಲ್ ಡೇ ಮತ್ತು ಸಂವಿಧಾನ ದಿನಾಚರಣೆ*
- *ನ.24 ರಂದು ಕೊಡಗು ಜಿಲ್ಲಾ ಕಿವುಡರ ಸಂಘದ ಸಭೆ*
- *ಕುಶಾಲನಗರದಲ್ಲಿ ಅಕ್ಷರ ಜ್ಯೋತಿ ಯಾತ್ರೆಗೆ ಸ್ವಾಗತ : ಉತ್ತಮ ಸಂಸ್ಕಾರ, ಸದ್ಗುಣ ಬೆಳೆಸಿಕೊಳ್ಳಲು ಬಸವಕುಮಾರ್ ಪಾಟೀಲ್ ಕರೆ*
- *ನ.29 ರಂದು ಮೂರ್ನಾಡುವಿನಲ್ಲಿ 69ನೇ ಕನ್ನಡ ರಾಜ್ಯೋತ್ಸವದ ಸಂಭ್ರಮ*
- *ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಿಂದ ರಾಷ್ಟ್ರೀಯ ಅಪಸ್ಮಾರ (ಮೂರ್ಛೆರೋಗ) ದಿನಾಚರಣೆ*
- *ವೀರ ಸೇನಾನಿಗಳಿಗೆ ಅಗೌರವ : ಕೊಡವ ಮಕ್ಕಡ ಕೂಟ ಖಂಡನೆ : ಕಿಡಿಗೇಡಿಯ ಬಂಧನಕ್ಕೆ ಆಗ್ರಹ*
- *ಮೂರ್ನಾಡು ಫ್ರೆಂಡ್ಸ್ ವಾಹನ ಮಾಲೀಕರ ಹಾಗೂ ಚಾಲಕರ ಸಂಘದ ವಾರ್ಷಿಕ ಮಹಾಸಭೆ : ನೂತನ ಪದಾಧಿಕಾರಿಗಳ ಆಯ್ಕೆ*