ಮಡಿಕೇರಿ ಏ.8 : ಮತದಾರರ ಪಟ್ಟಿಯಲ್ಲಿ ಹೆಸರು ಇದ್ದು, ಮತದಾರರ ಗುರುತಿನ ಚೀಟಿ ಇಲ್ಲದೇ ಇದ್ದರೆ ಮಾನ್ಯತೆ ಪಡೆದ 12 ಬಗೆಯ ಗುರುತಿನ ಚೀಟಿ ಹಾಜರುಪಡಿಸಿ ಮತದಾನ ಮಾಡಬಹುದಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ.ಬಿ.ಸಿ.ಸತೀಶ ಅವರು ತಿಳಿಸಿದ್ದಾರೆ.
ಆಧಾರ್ ಕಾರ್ಡ್, ಎಂಎನ್‍ಆರ್‍ಇಜಿಎ ಜಾಬ್ ಕಾರ್ಡ್, ಬ್ಯಾಂಕ್, ಅಂಚೆ ಕಚೇರಿಯು ವಿತರಿಸಿರುವ ಭಾವಚಿತ್ರವಿರುವ ಪಾಸ್‍ಬುಕ್, ಕಾರ್ಮಿಕ ಸಚಿವಾಲಯದ ಯೋಜನೆಯಡಿ ವಿತರಿಸಿರುವ ಹೆಲ್ತ್ ಇನ್ಸುರೆನ್ಸ್ ಕಾರ್ಡ್, ಚಾಲನಾ ಪರವಾನಗಿ ಪತ್ರ, ಪಾನ್‍ಕಾರ್ಡ್, ಎನ್‍ಪಿಆರ್ ಅಡಿಯಲ್ಲಿ ಆರ್‍ಜಿಐ ವತಿಯಿಂದ ನೀಡಿರುವ ಸ್ಮಾರ್ಟ್ ಕಾರ್ಡ್, ಭಾರತೀಯ ಪಾಸ್‍ಪೋರ್ಟ್, ಭಾವಚಿತ್ರವಿರುವ ಪಿಂಚಣಿ ದಾಖಲೆಗಳು. ಕೇಂದ್ರ, ರಾಜ್ಯ, ಅರೆ ಸರ್ಕಾರಿ ಮತ್ತು ಸಾರ್ವಜನಿಕ ಸ್ವಾಮ್ಯದ ಸಂಸ್ಥೆಗಳು ತಮ್ಮ ಸಿಬ್ಬಂದಿಗಳಿಗೆ ನೀಡಿರುವ ಗುರುತಿನ ಚೀಟಿ ತೋರಿಸಿ ಮತ ಹಕ್ಕು ಚಲಾಯಿಸಬಹುದಾಗಿದೆ.
‘ವಿಧಾನಸಭಾ ಸಾರ್ವತ್ರಿಕ ಚುನಾವಣೆ ಹಿನ್ನೆಲೆ ಪ್ರತಿ ಮತಗಟ್ಟೆಯ 200 ಮೀಟರ್ ಅಂತರದಲ್ಲಿ ರಾಜಕೀಯ ಪಕ್ಷಗಳ ಪ್ರಚಾರ ಬೂತ್‍ಗಳನ್ನು ಸ್ಥಾಪಿಸಬಹುದಾಗಿದೆ. ಈ ಬೂತ್‍ಗಳಲ್ಲಿ ಸಂಬಂಧಪಟ್ಟ ಗ್ರಾಮ ಪಂಚಾಯತಿಯ, ಪಂಚಾಯತ್ ಅಭಿವೃದ್ದಿ ಅಧಿಕಾರಿಗಳಿಂದ ಪಡೆಯುವುದು.’