ಮಡಿಕೇರಿ ಮೇ 8 : ಮಡಿಕೇರಿ ಕ್ಷೇತ್ರದ ಶಾಸಕರು ಕೋಟ್ಯಾಂತರ ರೂ. ಅನುದಾನ ತಂದಿರುವುದಾಗಿ ಹೇಳಿಕೊಳ್ಳುತ್ತಿದ್ದಾರೆ. ಆದರೆ ಈ ಅನುದಾನ ಎಲ್ಲಿಗೆ ಬಳಕೆಯಾಗಿದೆ ಎನ್ನುವುದೇ ಯಕ್ಷ ಪ್ರಶ್ನೆಯಾಗಿದೆ ಎಂದು ಜೆಡಿಎಸ್ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿರುವ ಪ್ರಮುಖ ಸುರೇಶ್ ಹಣಕೋಡು ಟೀಕಿಸಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕ್ಷೇತ್ರದ ಅಭಿವೃದ್ಧಿಗಾಗಿ ಮತದಾರರು ಜಾತಿ, ಮತ, ಧರ್ಮಗಳನ್ನು ಮೀರಿ ಕಾಂಗ್ರೆಸ್ ಅಭ್ಯರ್ಥಿ ಡಾ.ಮಂತರ್ ಗೌಡ ಅವರನ್ನು ಬೆಂಬಲಿಸಬೇಕೆಂದು ಮನವಿ ಮಾಡಿದರು.
ಐದು ಬಾರಿ ಶಾಸಕರಾದವರು ಕೋಟ್ಯಾಂತರ ರೂ. ಅನುದಾನ ತಂದಿರುವ ಬಗ್ಗೆ ಹೇಳಿಕೊಳ್ಳುತ್ತಿದ್ದಾರೆ. ಇಷ್ಟು ಹಣ ಬಂದಿದ್ದರೂ ಕ್ಷೇತ್ರ ಅಭಿವೃದ್ಧಿ ಕಾಣದೆ ಇರಲು ಕಾರಣವೇನೆಂದು ಪ್ರಶ್ನಿಸಿದರು.
ಬಿಜೆಪಿಯನ್ನು ತೊರೆದು ಕಾಂಗ್ರೆಸ್ ಗೆ ಸೇರ್ಪಡೆಗೊಂಡಿರುವ ವಸಂತ ಶಾಂತವೇರಿ ಮಾತನಾಡಿ ಬಿಜೆಪಿಯಲ್ಲಿನ ಗೊಂದಲಗಳಿಂದ ಬೇಸತ್ತು ಪಕ್ಷ ತೊರೆದಿದ್ದೇನೆ ಎಂದರು.
ಭ್ರಷ್ಟಾಚಾರ ರಹಿತ ಆಡಳಿತ ದೊgತಯಕಬೇಕೆನ್ನುವ ಚಿಂತನೆ ತನ್ನದಾಗಿತ್ತು. ಆದರೆ, ಇದಕ್ಕೆ ತದ್ವಿರುದ್ಧವಾದ ನಡೆUಳು ಕಂಡು ಬಂದಿದೆ ಎಂದು ಟೀಕಿಸಿದರು.
ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತ ಮುರುಳಿ ಉಪಸ್ಥಿತರಿದ್ದರು.









