ಮಡಿಕೇರಿ ಮೇ 9 : ಪರಿಸರ ಸಂರಕ್ಷಣಾ ಇಲಾಖೆ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಹಾಗೂ ಫೀಲ್ಡ್ ಮಾರ್ಷಲ್ ಕೆ. ಎಂ. ಕಾರ್ಯಪ್ಪ ಕಾಲೇಜಿನ ಸಂಯುಕ್ತಶ್ರಯದಲ್ಲಿ ಪರಿಸರ ಸಂರಕ್ಷಣೆ ಹಾಗೂ ಮತದಾನ ಜಾಗೃತಿ ಕಾರ್ಯಕ್ರಮ ನಡೆಯಿತು.
ಮಡಿಕೇರಿ ಎಫ್.ಎಂ.ಕೆ.ಎಂ.ಸಿ. ಕಾಲೇಜು ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪರಿಸರ ಅಧಿಕಾರಿ ಎಂ. ಜಿ. ರಘುರಾಮ್ ವಿದ್ಯಾರ್ಥಿಗಳಿಗೆ ಪ್ರತಿಜ್ಞೆ ವಿಧಿ ಬೋಧಿಸಿದರು.
ನಂತರ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್’ನ ಜಿಲ್ಲಾ ಸಂಘಟಕರಾದ ಯು.ಸಿ.ದಮಯಂತಿ ಮತದಾನದ ಬಗ್ಗೆ ಪ್ರತಿಜ್ಞಾ ವಿಧಿ ಬೋದಿಸಿದರು. ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಕೊಡಗು ಜಿಲ್ಲಾ ಆಯುಕ್ತ ಬೇಬಿ ಮ್ಯಾಥ್ಯೂ ಮತದಾನದ ಮಹತ್ವದ ಬಗ್ಗೆ ಮಾಹಿತಿ ನೀಡಿದರು.
ಕಾಲೇಜಿನ ಪ್ರಾಂಶುಪಾಲ ಮೇಜರ್ ಡಾ. ಬಿ.ರಾಘವ ಸ್ವಾಗತಿಸಿದರು. ಕಾಲೇಜಿನ ಎಂ.ಎ.ಕೊಡವದ ಸಂಯೋಜಕ ಮೇಚಿರ ರವಿಶಂಕರ್ ವಂದಿಸಿದರು.
ಕಾರ್ಯಕ್ರಮದಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಜಿಲ್ಲಾ ಜಂಟಿ ಕಾರ್ಯದರ್ಶಿ ಬೊಳ್ಳಜಿರ ಬಿ. ಅಯ್ಯಪ್ಪ ಹಾಗೂ ಮಡಿಕೇರಿ ಸ್ಥಳೀಯ ಸಮಿತಿಯ ಕಾರ್ಯದರ್ಶಿ ಅಜ್ಜಮಕ್ಕಡ ಎಂ. ವಿನುಕುಮಾರ್ ಹಾಗೂ ಕಾಲೇಜಿನ ಉಪನ್ಯಾಸಕರು, ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.
ಬಾಲಕಿಯರ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಜವರಪ್ಪ ಮತ್ತು ರೇಂಜರ್ ಲೀಡರ್ ನಮಿತ ಹಾಗೂ ರೇಂಜರ್ಸ್’ಗಳು ಮತ್ತು ಕಾಲೇಜು ವಿದ್ಯಾರ್ಥಿನಿಯರು ಪ್ರತಿಜ್ಞಾನಿಧಿ ಸ್ವೀಕರಿಸಿದರು.
ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ನಿರ್ಮಲಾ, ಓವರ್ ಲೀಡರ್ ಎವರೆಸ್ಟ್ ಲಾಡ್ರಿಗಸ್, ರೇಂಜರ್ ಲೀಡರ್ ಕುಸುಮಾ ಹಾಗೂ ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಪರಿಸರ ಸಂರಕ್ಷಣೆ ಮತ್ತು ಮತದಾನದ ಕುರಿತು ಪ್ರತಿಜ್ಞಾವಿಧಿ ಸ್ವೀಕರಿಸಿದರು.