ಮಡಿಕೇರಿ ಮೇ 9 : ಮೇ 10 ರ ಚುನಾವಣೆ ದಿನ ಮತದಾನ ಮಾಡಿದವರಿಗೆ ಮಾತ್ರ ಜಿಲ್ಲೆಯ ಪ್ರಮುಖ ಪ್ರವಾಸಿತಾಣಗಳಿಗೆ ಪ್ರವೇಶ ನೀಡಲಾಗುವುದು.
ನಗರದ ರಾಜಾಸೀಟು, ಸನ್ನಿ ಸೈಡ್ ಮ್ಯೂಸಿಯಂ, ಅಬ್ಬಿ ಫಾಲ್ಸ್, ಮಲ್ಲಳ್ಳಿ ಫಾಲ್ಸ್‍ಗಳಲ್ಲಿ ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆ ತನಕ ಮಕ್ಕಳು ಹಾಗೂ ಹೊರ ರಾಜ್ಯದ ಪ್ರವಾಸಿಗರನ್ನು ಹೊರತು ಪಡಿಸಿ, ಮತದಾನ ಮಾಡಿರುವವರಿಗೆ ಮಾತ್ರ ಪ್ರವಾಸಿ ತಾಣಗಳಿಗೆ ಪ್ರವೇಶಾವಕಾಶ ಕಲ್ಪಿಸಲಾಗಿದೆ ಎಂದು ಕೊಡಗು ಉಪವಿಭಾಗಾಧಿಕಾರಿ ತಿಳಿಸಿದ್ದಾರೆ.