ಮಡಿಕೇರಿ ಮೇ 10 : ಕೊಡಗು ಜಿಲ್ಲಾ ಅಂಭಾಭವಾನಿ ಯುವಕ, ಯುವತಿ ಕ್ರೀಡಾ ಮತ್ತು ಮನೋರಂಜನಾ ಸಂಘ ಹಾಗೂ ಕೊಡಗು ಜಿಲ್ಲಾ ಮರಾಠ, ಮರಾಠಿ ಸಮಾಜ ಸೇವಾ ಸಂಘ ತಾಳತ್ತಮನೆ ವತಿಯಿಂದ ಮೇ 13 ಮತ್ತು 14 ರಂದು ಎಂ.ಪಿ.ಎಲ್ ಸೀಸನ್-1 ಕ್ರಿಕೆಟ್ ಪಂದ್ಯಾವಳಿ ಮಡಿಕೇರಿಯಲ್ಲಿ ನಡೆಯಲಿದೆ.
ಪತ್ರಿಕಾ ಪ್ರಕಟಣೆ ನೀಡಿರುವ ಯುವಕ ಸಂಘದ ಅಧ್ಯಕ್ಷ ಎಂ.ಆರ್.ಮೋಹನ್, ನಗರದ ಜನರಲ್ ತಿಮ್ಮಯ್ಯ ಕ್ರೀಡಾಂಗಣದಲ್ಲಿ ಬೆಳಿಗ್ಗೆ 8 ಗಂಟೆಗೆ ಲೀಗ್ ಮಾದರಿಯಲ್ಲಿ ಪಂದ್ಯಾವಳಿ ನಡೆಯಲಿದ್ದು, ಬೇರೆ ಜಿಲ್ಲೆ ಅಥವಾ ರಾಜ್ಯದ ಸ್ವಜಾತಿ ಪ್ರತಿ ತಂಡದಲ್ಲಿ ಇಬ್ಬರು ಅತಿಥಿ ಆಟಗಾರರಿಗೆ ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದ್ದಾರೆ.
ಪ್ರಥಮ ಬಹುಮಾನ ರೂ.25 ಸಾವಿರ ನಗದು ಮತ್ತು ಆಕರ್ಷಕ ಟ್ರೋಫಿ, ದ್ವಿತೀಯ ಬಹುಮಾನ ರೂ.15 ಸಾವಿರ ನಗದು ಮತ್ತು ಆಕರ್ಷಕ ಟ್ರೋಫಿ, ತೃತೀಯ ಬಹುಮಾನ ರೂ.5 ಸಾವಿರ ನಗದು ಮತ್ತು ಆಕರ್ಷಕ ಟ್ರೋಫಿ, 4ನೇ ಸ್ಥಾನ ಪಡೆದ ತಂಡಕ್ಕೆ ಆಕರ್ಷಕ ಟ್ರೋಫಿ ಮತ್ತು ಇತರ ವೈಯುಕ್ತಿಕ ಬಹುಮಾನಗಳನ್ನು ನೀಡಲಾಗುವುದು ಎಂದು ಮಾಹಿತಿ ನೀಡಿದ್ದಾರೆ.
ಹೆಚ್ಚಿನ ಮಾಹಿತಿಗೆ ಎಂ.ಆರ್.ಮೋಹನ್-70903 27684, ಸಂತೋಷ್-96863 17062 ನ್ನು ಸಂಪರ್ಕಿಸಬಹುದಾಗಿದೆ.









