ಮಡಿಕೇರಿ ಮೇ.11 : ವಿಧಾನಸಭಾ ಚುನಾವಣೆಯ ಮತ ಎಣಿಕೆಯು ಮೇ, 13 ರಂದು ನಡೆಯಲಿದ್ದು, ಮತ ಎಣಿಕೆ ಪ್ರಕ್ರಿಯೆಯನ್ನು ತಾಳ್ಮೆ ಮತ್ತು ಎಚ್ಚರಿಕೆಯಿಂದ ನಿರ್ವಹಿಸುವಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ.ಬಿ.ಸಿ.ಸತೀಶ ಅವರು ತಿಳಿಸಿದ್ದಾರೆ.
ನಗರದ ಸಂತ ಜೋಸೆಫರ ಶಾಲೆಯಲ್ಲಿ ಮತ ಎಣಿಕೆ ಅಧಿಕಾರಿಗಳಿಗೆ ಏರ್ಪಡಿಸಿದ್ದ ತರಬೇತಿ ಕಾರ್ಯಗಾರದಲ್ಲಿ ಅವರು ಮಾತನಾಡಿದರು.
ಮತ ಎಣಿಕೆ ಪ್ರಕ್ರಿಯೆಯು ಮೇ, 13 ರಂದು ಬೆಳಗ್ಗೆ 8 ಗಂಟೆಗೆ ಆರಂಭವಾಗಲಿದೆ. ಚುನಾವಣಾ ಆಯೋಗದ ನಿಯಮದ ಪ್ರಕಾರ ಮತ ಎಣಿಕೆ ಕೈಗೊಳ್ಳಬೇಕು. ಮತ ಎಣಿಕೆ ಸ್ಥಳಕ್ಕೆ ಮೊಬೈಲ್ ತರಬಾರದು. ಮತ ಎಣಿಕೆ ಕಾರ್ಯವು ಸರಳ ಪ್ರಕ್ರಿಯೆ ಆಗಿದ್ದು, ಯಾವುದೇ ರೀತಿಯ ಗೊಂದಲಕ್ಕೆ ಒಳಗಾಗದೆ ನಿಯಮಾನುಸಾರ ಕರ್ತವ್ಯ ನಿರ್ವಹಿಸಿ ಮತ ಎಣಿಕೆ ಕಾರ್ಯವನ್ನು ಯಶಸ್ಸುಗೊಳಿಸುವಂತೆ ಜಿಲ್ಲಾಧಿಕಾರಿ ಅವರು ಹೇಳಿದರು.
ಯಾವುದಾದರೂ ಸಮಸ್ಯೆಗಳು ಇದ್ದಲ್ಲಿ ಚುನಾವಣಾಧಿಕಾರಿ ಗಮನಕ್ಕೆ ತರಬೇಕು. ಮತ ಎಣಿಕೆ ಮೇಲ್ವಿಚಾರಕರು ಮತ್ತು ಮತ ಎಣಿಕೆ ಸಹಾಯಕರು ಕಾರ್ಯನಿರ್ವಹಿಸಲಿದ್ದು, ಜೊತೆಗೆ ಮೈಕ್ರೋ ವೀಕ್ಷಕರು ಇರಲಿದ್ದಾರೆ. ಎದುರಿಗೆ ವಿವಿಧ ಪಕ್ಷದ ಏಜೆಂಟರು ಇರುತ್ತಾರೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಅವರು ವಿವರಿಸಿದರು.
‘ಕೊಡಗು ಜಿಲ್ಲೆಯ ಎರಡು ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ನಗರದ ಸಂತ ಜೋಸೆಫರ ಶಾಲೆಯಲ್ಲಿ ಪ್ರತ್ಯೇಕವಾಗಿ ಮತ ಎಣಿಕೆ ಕಾರ್ಯ ನಡೆಯಲಿದೆ. ಒಂದು ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ 14 ಟೇಬಲ್‍ಗಳಲ್ಲಿ ಮತ ಎಣಿಕೆ ನಡೆಯಲಿದ್ದು, 20 ಸುತ್ತಿನಲ್ಲಿ ಮತ ಎಣಿಕೆ ಕಾರ್ಯ ನಡೆಯಲಿದೆ. ಜೊತೆಗೆ ಅಂಚೆ ಮತ್ತು ಸೇವಾ ಮತದಾರರ ಪತ್ರ ಮತ ಎಣಿಕೆ ಕಾರ್ಯವೂ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ತಿಳಿಸಿದರು.’
ನಗರದ ಸಂತ ಜೋಸೆಫರ ಶಾಲೆಯಲ್ಲಿ ಮತ ಎಣಿಕೆಗೆ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ. ಬ್ಯಾರಿಕೇಡ್ ಅಳವಡಿಕೆ, ಮತ ಎಣಿಕೆ ಕೇಂದ್ರದಲ್ಲಿ ಜಾಲರಿ ನಿರ್ಮಾಣ, ಟೇಬಲ್‍ಗಳ ಅಳವಡಿಕೆ, ಸಿಸಿಟಿವಿ ಅಳವಡಿಕೆ, ಸೂಕ್ತ ಪೊಲೀಸ್ ಬಂದೋ ಬಸ್ತ್ ಸೇರಿದಂತೆ ಹಲವು ಕಾರ್ಯಗಳನ್ನು ಮಾಡಲಾಗಿದೆ.
ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ನಂಜುಂಡೇಗೌಡ, ಚುನಾವಣಾಧಿಕಾರಿಗಳಾದ ಡಾ.ಯತೀಶ್ ಉಳ್ಳಾಲ್, ಶಬಾನಾ ಎಂ.ಶೇಕ್, ಸಹಾಯಕ ಚುನಾವಣಾಧಿಕಾರಿಗಳಾದ ಎಸ್.ಎನ್.ನರಗುಂದ, ಕಿರಣ್ ಗೌರಯ್ಯ, ಪ್ರಮೋದ್, ರಾಮಚಂದ್ರ, ಚುನಾವಣಾ ತಹಶೀಲ್ದಾರ್ ರವಿಶಂಕರ್, ಮತ ಎಣಿಕೆ ಅಧಿಕಾರಿಗಳು ಇತರರು ಇದ್ದರು.
Breaking News
- *ಕನ್ನಡ ರಾಜ್ಯೋತ್ಸವ : ನ.23 ರಂದು ಮಡಿಕೇರಿಯಲ್ಲಿ ರಸಪ್ರಶ್ನೆ ಮತ್ತು ಗೀತಗಾಯನ ಕಾರ್ಯಕ್ರಮ*
- *ಗಂಗಮ್ಮ ನಿಧನ : ಶಾಸಕ ಪೊನ್ನಣ್ಣ ಸಂತಾಪ*
- *ಕೊಡಗು : ಡಿ.1 ರಿಂದ ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ ಪ್ರಕ್ರಿಯೆ ಆರಂಭ : ಜಿಲ್ಲಾಧಿಕಾರಿ ವೆಂಕಟ್ ರಾಜಾ*
- *ಪಡಿತರ ಚೀಟಿ ಪರಿಷ್ಕರಣೆ : ಅರ್ಹ ಬಿಪಿಎಲ್ ಕಾರ್ಡ್ ರದ್ದುಗೊಳಿಸುವುದಿಲ್ಲ : ಸಚಿವ ಮುನಿಯಪ್ಪ*
- *ಕೊಡಗು ಬ್ಲಡ್ ಡೋನಸ್೯ ಸಂಸ್ಥೆಯ 7ನೇ ವಾಷಿ೯ಕೋತ್ಸವ : ಜೀವ ಉಳಿಸುವ ರಕ್ತದಾನಿಗಳೇ ನಿಜವಾದ ಹೀರೋಗಳು : ಅನಿಲ್ ಹೆಚ್.ಟಿ.*
- *ದಿವ್ಯಜ್ಯೋತಿ ಪತ್ತಿನ ಸಹಕಾರ ಸಂಘದ ಚುನಾವಣೆ : ಜಾನ್ಸನ್ ಪಿಂಟೋ ಸೇರಿ ಹಲವರು ಕಣದಲ್ಲಿ*
- *ಕಲ್ಲು ಬಾಯ್ಸ್ ಲೈಕ್ಸ್ ಫ್ಯಾಶನ್ ಫುಟ್ಬಾಲ್ ಕಪ್ : ನಿಯೋನ್ ಎಫ್.ಸಿ ಅಮ್ಮತ್ತಿ ಚಾಂಪಿಯನ್*
- *ಗ್ರಾ.ಪಂ ಉಪಚುನಾವಣೆ : ಕೊಡಗಿನ ವಿವಿಧೆಡೆ ಮದ್ಯ ಮಾರಾಟ ನಿಷೇಧ*
- *ನಂದಿನಿ ವಿವಿಧ ಶ್ರೇಣಿಯ ಹಾಲು ಬಿಡುಗಡೆ : ದೇಶದ ಹಾಲು ಉತ್ಪಾದನೆಯಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದೆ : ಮುಖ್ಯಮಂತ್ರಿ ಸಿದ್ದರಾಮಯ್ಯ*
- *ಕಟ್ಟೆಹಾಡಿ ಅರಣ್ಯ ಹಕ್ಕು ಸಮಿತಿ ರಚನೆ : ಆದಿವಾಸಿಗಳನ್ನು ಒಕ್ಕಲೆಬ್ಬಿಸದಂತೆ ಆಗ್ರಹ*