ಮಡಿಕೇರಿ ಮೇ 12 : ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ ಸಂಬಂಧ ಮತ ಎಣಿಕೆ ನಡೆಯುವ ದಿನದಂದು ಕಾನೂನು ಸುವ್ಯವಸ್ಥೆ ಕಾಪಾಡುವ ಸಲುವಾಗಿ ಮೇ 12 ರ ಮಧ್ಯರಾತ್ರಿ 12 ಗಂಟೆಯಿಂದ ಮೇ, 13 ರ ಮಧ್ಯರಾತ್ರಿ 12 ಗಂಟೆ ವರೆಗೆ ಜಿಲ್ಲೆಯಾದ್ಯಂತ ನಿಷೇಧಾಜ್ಞೆಯನ್ನು ಜಾರಿಗೊಳಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ.ಬಿ.ಸಿ.ಸತೀಶ ಆದೇಶ ಹೊರಡಿಸಿದ್ದಾರೆ.
ಈ ಅವಧಿಯಲ್ಲಿ ಕೊಡಗು ಜಿಲ್ಲೆಯಾದ್ಯಂತ ಪಟಾಕಿ ಸಿಡಿಸುವುದು, ವಿಜಯೋತ್ಸವ, ಮೆರವಣಿಗೆ, ರಾಜಕೀಯ ಸಭೆ-ಸಮಾರಂಭ, ವಾಹನ ಜಾಥ, ರ್ಯಾಲಿ ಮುಂತಾದ ಯಾವುದೇ ಚಟುವಟಿಕೆ ನಡೆಸುವುದು, ಸ್ಪೋಟಕ, ದಹನ ವಸ್ತುಗಳು, ಮಾರಕ ಆಯುಧಗಳನ್ನು ಹೊಂದಿರುವುದು ಅಥವಾ ಹಿಡಿದು ಓಡಾಡುವುದು ಮುಂತಾದವುಗಳನ್ನು ಸಂಪೂರ್ಣವಾಗಿ ನಿಷೇಧಿಸಿದೆ.
ಮತ ಎಣಿಕಾ ಕೇಂದ್ರವಾದ ಮಡಿಕೇರಿಯ ಸೆಂಟ್ ಜೋಸೆಫ್ ಕಾನ್ವೆಂಟ್‍ನ ಸುತ್ತಲಿನ 200 ಮೀಟರ್ ವ್ಯಾಪ್ತಿಯ ಪ್ರದೇಶವು ಸಂಪೂರ್ಣ ನಿರ್ಬಂಧಿತ ಪ್ರದೇಶವಾಗಿರುತ್ತದೆ. ಈ ಪ್ರದೇಶದಲ್ಲಿ ಖಾಸಗಿ ವಾಹನಗಳ ತಂಗುವಿಕೆ ಮತ್ತು ಧ್ವನಿವರ್ಧಕ ಬಳಕೆಯನ್ನು ಸಹ ನಿಷೇಧಿಸಿದೆ.
ಈ ಆದೇಶವು ಸರ್ಕಾರಿ ಕರ್ತವ್ಯದ ನಿಮಿತ್ತ, ಬ್ಯಾಂಕ್. ಎಟಿಎಂ ಭದ್ರತಾ ಸಿಬ್ಬಂದಿಗಳು ಹಾಗೂ ಮತ ಎಣಿಕಾ ಕೇಂದ್ರದ ಭದ್ರತಾ ವ್ಯವಸ್ಥೆಗಾಗಿ ನಿಯೋಜಿಸಲ್ಪಟ್ಟ ಅಧಿಕಾರಿ ಮತ್ತು ಸಿಬ್ಬಂದಿಗಳು ಆಯುಧ, ಬಂದೂಕುಗಳನ್ನು ಹೊಂದಿರುವುದಕ್ಕೆ ಅಥವಾ ಬಳಸುವುದಕ್ಕೆ ಅನ್ವಯಿಸುವುದಿಲ್ಲ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ.ಬಿ.ಸಿ.ಸತೀಶ ಅವರು ತಿಳಿಸಿದ್ದಾರೆ.
Breaking News
- *ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನಲ್ಲಿ ಸಂವಿಧಾನ ದಿನಾಚರಣೆ : ಸಂವಿಧಾನಕ್ಕೆ ಗೌರವ ಸಲ್ಲಿಸುವುದು ಪ್ರತಿಯೊಬ್ಬರ ಕರ್ತವ್ಯ : ಮೇಜರ್ ಪ್ರೊ.ಬಿ.ರಾಘವ*
- *ಗಡಿಪಾರು ಮಾಡದಿದ್ದರೆ ಹೋರಾಟ : ಕೊಡವ ಸಂಘಟನೆಗಳ ಎಚ್ಚರಿಕೆ*
- *ಅಂತರ್ ವಿಶ್ವವಿದ್ಯಾನಿಲಯದ ಕ್ರೀಡಾಕೂಟ : ಕಬಡ್ಡಿ ಹಾಗೂ ಭಾರ ಎತ್ತುವ ಸ್ಪರ್ಧೆಯಲ್ಲಿ ಇಬ್ಬರು ವಿಟಿಯು ತಂಡಕ್ಕೆ ಆಯ್ಕೆ*
- *ವಿರಾಜಪೇಟೆಯಲ್ಲಿ ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ ವಾರ್ಷಿಕ ಕ್ರೀಡಾಕೂಟ : ಯೋಧರ ಬಗ್ಗೆ ಗೌರವ ಇರಲಿ : ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮೀಜಿ*
- *ಭಾರದ ಗುಂಡು ಎಸೆತ : ಕರ್ನಾಟಕವನ್ನು ಪ್ರತಿನಿಧಿಸಿದ ಕಾವೇರಿ ಶಾಲೆ ವಿದ್ಯಾರ್ಥಿನಿ ಪಿ.ಶಿಪ್ರಾ ಕಾಳಪ್ಪ*
- *ಅಮ್ಮತ್ತಿ- ಪಾಲಿಬೆಟ್ಟ ರಸ್ತೆ ಅವ್ಯವಸ್ಥೆ : ಆಟೋ ಚಾಲಕರಿಂದ ಪ್ರತಿಭಟನೆ*
- *ನಾಪೋಕ್ಲುವಿನಲ್ಲಿ ಮಾಜಿ ಸೈನಿಕರ ಸಂಘದ ವಾರ್ಷಿಕ ಮಹಾಸಭೆ : ಸರ್ವ ಸದಸ್ಯರು ಒಗ್ಗೂಡಿದರೆ ಮಾತ್ರ ಸಂಘದ ಬೆಳವಣಿಗೆ ಸಾಧ್ಯ : ನಾಣಯ್ಯ*
- *ವಿರಾಜಪೇಟೆಯಲ್ಲಿ ಸಂವಿಧಾನ ಜಾಗೃತಿ ಜಾಥಾ*
- *ಹೊಸಕೋಟೆ ಗ್ರಾಮದಲ್ಲಿ ಕಾಡಾನೆ ಹಿಂಡು ದಾಳಿ : ಬೆಳೆನಾಶ : ಸೂಕ್ತ ಕ್ರಮಕ್ಕೆ ಬೆಳೆಗಾರರ ಆಗ್ರಹ*
- *ಸೋಮವಾರಪೇಟೆ ಸಂತಜೋಸೆಫರ ಪದವಿ ಕಾಲೇಜಿನಲ್ಲಿ ಸಂವಿಧಾನ ಪೀಠಿಕೆ ವಾಚನ*