ಮಡಿಕೇರಿ ಮೇ 12 : ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಮತ ಎಣಿಕೆ ವೀಕ್ಷಕರಾಗಿ ನೇಮಕಗೊಂಡಿರುವ ಜಿ.ಪ್ರಸನ್ನ ರಾಮಸ್ವಾಮಿ (ಭಾ.ಆ.ಸೇ) ಅವರು ನಗರದ ಸಂತ ಜೋಸೆಫರ ಶಾಲೆಗೆ ಭೇಟಿ ನೀಡಿ ಮತ ಎಣಿಕೆ ಸಿದ್ಧತೆ ಬಗ್ಗೆ ಪರಿಶೀಲಿಸಿದರು.
ಈ ಸಂಬಂಧ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ.ಬಿ.ಸಿ.ಸತೀಶ ಅವರ ಜೊತೆ ಸಮಾಲೋಚನೆ ನಡೆಸಿದರು. ಹಾಗೆಯೇ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ಶಬನಾ ಎಂ.ಶೇಕ್ ಅವರಿಂದ ಮತ ಎಣಿಕೆಗೆ ಕೈಗೊಳ್ಳಲಾಗಿರುವ ಸಿದ್ಧತೆ ಬಗ್ಗೆ ಮಾಹಿತಿ ಪಡೆದರು.
ಈಗಾಗಲೇ ಚುನಾವಣಾ ಸಾಮಾನ್ಯ ವೀಕ್ಷಕರಾಗಿ ನೇಮಕವಾಗಿರುವ ವಿಕ್ರಮ ಸಿಂಗ್ ಮಲ್ಲಿಕ್(ಭಾ.ಆ.ಸೇ) ಮಡಿಕೇರಿ ವಿಧಾನಸಭಾ ಕ್ಷೇತ್ರಕ್ಕೆ ಮತ ಎಣಿಕೆ ವೀಕ್ಷಕರಾಗಿ ಕಾರ್ಯನಿರ್ವಹಿಸಲಿದ್ದಾರೆ.
ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಮತ ಎಣಿಕೆ ಸಂಬಂಧಿಸಿದಂತೆ ಅಂತಿಮ ಸಿದ್ಧತೆಯನ್ನು ಪರಿಶೀಲಿಸಿದರು. ಹಾಗೆಯೇ ಅಂಚೆ ಮತಪತ್ರ ಎಣಿಕೆ ಹಾಗೂ ವಿದ್ಯುನ್ಮಾನ ಮತಯಂತ್ರದ ಮತ ಎಣಿಕೆ ಸಂಬಂಧಿಸಿದಂತೆ ಅಧಿಕಾರಿಗಳ ಜೊತೆ ಸಮಾಲೋಚಿಸಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ನಂಜುಂಡೇಗೌಡ, ಮಡಿಕೇರಿ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ಯತೀಶ್ ಉಳ್ಳಾಲ್, ಸಹಾಯಕ ಚುನಾವಣಾಧಿಕಾರಿಗಳಾದ ಎಸ್.ಎನ್.ನರಗುಂದ, ಕಿರಣ್ ಗೌರಯ್ಯ, ಪ್ರಮೋದ್, ರಾಮಚಂದ್ರ, ವೀಕ್ಷಕರ ಸಂಪರ್ಕ ಅಧಿಕಾರಿಗಳಾದ ಪ್ರಮೋದ್, ಬಾಲಸುಬ್ರಮಣ್ಯ, ಮತ ಎಣಿಕೆ ಅಧಿಕಾರಿಗಳು ಇದ್ದರು.









