ಮಡಿಕೇರಿ ಮೇ 12 : ಕುಶಾಲನಗರ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ 2023-24 ನೇ ಸಾಲಿನಲ್ಲಿ ಎಸ್‍ಎಸ್‍ಎಲ್‍ಸಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಮೊದಲು ಬಂದವರಿಗೆ ಮೊದಲ ಆದ್ಯತೆ ಮೇರೆಗೆ ನೇರವಾಗಿ ಪ್ರಥಮ ಡಿಪ್ಲೋಮಾ ಪ್ರವೇಶ ನೀಡಲಾಗುವುದು.
ಮೇ 15 ರಿಂದ ನೇರ ಪ್ರವೇಶ ಪಡೆಯಲು ಅವಕಾಶವಿದ್ದು, ಸಂಸ್ಥೆಯಲ್ಲಿ 5 ಎಂಜಿನಿಯರಿಂಗ್ ಕೋರ್ಸ್‍ಗಳಿದ್ದು ಆಟೊಮೊಬೈಲ್, ಸಿವಿಲ್, ಎಲೆಕ್ಟ್ರಾನಿಕ್ಸ್, ಎಲೆಕ್ಟ್ರಿಕಲ್ ಹಾಗೂ ಮೆಕ್ಯಾನಿಕಲ್ ವಿಭಾಗಗಳಿಗೆ ಪ್ರವೇಶ ಪಡೆಯಬಹುದಾಗಿದೆ. ಪ್ರವೇಶ ಪಡೆಯಲು ಇಚ್ಚಿಸುವ ಅಭ್ಯರ್ಥಿಗಳು ಕಾಲೇಜಿನಲ್ಲಿ ನೇರವಾಗಿ ಪ್ರವೇಶ ಪಡೆಯಬಹುದು. ಹೆಚ್ಚಿನ ಮಾಹಿತಿಗೆ ಮೊ.ಸಂ. 9611470407, 9591137340 ನ್ನು ಸಂಪರ್ಕಿಸಬಹುದು ಎಂದು ಕುಶಾಲನಗರ ಪಾಲಿಟೆಕ್ನಿಕ್ ಕಾಲೇಜಿನ ಪ್ರಾಂಶುಪಾಲರು ತಿಳಿಸಿದ್ದಾರೆ.









