ಮಡಿಕೇರಿ ಮೇ 12 : ಕಳೆದ ರಾತ್ರಿ ಸುರಿದ ಧಾರಾಕಾರ ಗಾಳಿ ಮಳೆಯಿಂದಾಗಿ ಕಡಂಗ – ವಿರಾಜಪೇಟೆ ಮುಖ್ಯ ರಸ್ತೆಯಲ್ಲಿ ಭಾರೀ ಗಾತ್ರದ ಮರವೊಂದು ರಸ್ತೆಗೆ ಅಡ್ಡಲಾಗಿ ಬಿದ್ದು ಕೆಲ ಹೊತ್ತು ಸಂಚಾರ ಸ್ಥಗಿತಗೊಂಡಿತ್ತು. ಕಡಂಗ- ಕೆದುಮುಳ್ಳೋರು ಮುಖ್ಯ ರಸ್ತೆಯಲ್ಲೂ ವಿದ್ಯುತ್ ಕಂಬಗಳು ಮತ್ತು ಮರಗಳು ರಸ್ತೆಗೆ ಅಡ್ಡಲಾಗಿ ಬಿದ್ದು ಸಂಚಾರ ಸ್ಥಗಿತಗೊಂಡಿತ್ತು. ಕಡಂಗ ದೇವಸ್ಥಾನ ಸಮೀಪದಲ್ಲಿ ಮರದ ಕೊಂಬೆ ಬಿದ್ದು ಸಂಚಾರಕ್ಕೆ ಅಡಚಣೆಗೊಂಡಿತ್ತು. ಕಡಂಗ ಸುತ್ತುಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡು ಕತ್ತಲು ಅವರಿಸಿಕೊಂಡಿವೆ. (ವರದಿ : ನೌಫಲ್)










