ಬೆಂಗಳೂರು ಮೇ 13 : ಕರ್ನಾಟಕ ವಿಧಾನಸಭೆ ಚುನಾವಣೆ 2023ರ ಫಲಿತಾಂಶ ಘೋಷಣೆಗೆ ಕ್ಷಣಗಣನೆ ಆರಂಭವಾಗಿದ್ದು, ಬೆಳಗ್ಗೆ 8 ಗಂಟೆಯಿಂದ ಮತಎಣಿಕೆ ಕಾರ್ಯ ಆರಂಭವಾಗಿದೆ. ಮತಎಣಿಕೆ ಕಾರ್ಯದಲ್ಲಿ ಕಾಂಗ್ರೆಸ್ ಆರಂಭಿಕ ಮುನ್ನಡೆ ಸಾಧಿಸಿದ್ದು, ಬಿಜೆಪಿ ಕೂಡ ಪ್ರಬಲ ಪೈಪೋಟಿ ನೀಡುತ್ತಿದೆ.
ಬಿಜೆಪಿ 73 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದು, ಕಾಂಗ್ರೆಸ್ 117 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಜೆಡಿಎಸ್ 26 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದು, ಇತರರು 5 ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದ್ದಾರೆ.