ಮಡಿಕೇರಿ ಮೇ 13 : ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟಗೊಂಡಿದ್ದು, ಮಡಿಕೇರಿ ವಿಧಾನಸಭಾ ಕ್ಷೇತ್ರದಲ್ಲಿ ಡಾ.ಮಂತರ್ ಗೌಡ ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಎ.ಎಸ್.ಪೊನ್ನಣ್ಣ ಅವರು ಜಯಗಳಿಸಿದ್ದಾರೆ.
ಗೆಲುವು ಸಾಧಿಸಿದ ಡಾ.ಮಂತರ್ ಗೌಡ ಅವರಿಗೆ ಮಡಿಕೇರಿ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ಡಾ.ಯತೀಶ್ ಉಲ್ಲಾಳ್ ಅವರು ಚುನಾವಣಾ ಪ್ರಮಾಣ ಪತ್ರ ನೀಡಿದರು.
ಹಾಗೆಯೇ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ಶಬನಾ ಎಂ.ಶೇಕ್ ಅವರು ಎ.ಎಸ್.ಪೊನ್ನಣ್ಣ ಅವರಿಗೆ ಚುನಾವಣಾ ಪ್ರಮಾಣ ಪತ್ರ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ನಂಜುಂಡೇಗೌಡ, ತಹಶೀಲ್ದಾರರು ಮತ್ತು ಸಹಾಯಕ ಚುನಾವಣಾಧಿಕಾರಿಗಳಾದ ಎಸ್.ಎನ್.ನರಗುಂದ, ಕಿರಣ್ ಗೌರಯ್ಯ, ಪ್ರಮೋದ್, ರಾಮಚಂದ್ರ, ಚುನಾವಣಾ ತಹಶೀಲ್ದಾರ್ ರವಿಶಂಕರ್ ಇತರರು ಇದ್ದರು.
ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ್, ಹೆಚ್ಚುವರಿ ಜಿಲ್ಲಾಧಿಕಾರಿ ಡಾ. ನಂಜುಂಡೇಗೌಡ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಸ್.ಸುಂದರರಾಜ್ ಅವರು ಮಾಧ್ಯಮ ಕೇಂದ್ರಕ್ಕೆ ಭೇಟಿ ನೀಡಿ ವಿಕ್ಷೀಸಿದರು.









