ಮಡಿಕೇರಿ ಮೇ 13 : ವಿರಾಜಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ನ ಎ.ಎಸ್.ಪೊನ್ನಣ್ಣ ಗೆಲುವು ಸಾಧಿಸಿದ್ದಾರೆ. ಕೊನೆಯ ಸುತ್ತಿನ ಮತ ಎಣಿಕೆಯಲ್ಲಿ ಪೊನ್ನಣ್ಣ ಅವರು 83128 ಮತಗಳನ್ನು ಗಳಿಸಿದ್ದಾರೆ. ಪ್ರತಿಸ್ಪರ್ಧಿ ಬಿಜೆಪಿಯ ಕೆ.ಜಿ.ಬೋಪಯ್ಯ ಅವರು 78397 ಮತಗಳನ್ನು ಗಳಿಸಿ ಸೋಲು ಅನುಭವಿಸಿದ್ದಾರೆ.
ಮಡಿಕೇರಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಮಂತರ್ ಗೌಡ ಅವರು ಕೊನೆಯ ಸುತ್ತಿನ ಎಣಿಕೆಯಲ್ಲಿ 83,949 ಮತಗಳನ್ನು ಗಳಿಸಿ ಗೆಲುವು ಸಾಧಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಎಂ.ಪಿ.ಅಪ್ಪಚ್ಚುರAಜನ್ ಅವರು 79,249 ಮತಗಳನ್ನು ಪಡೆದು ಸೋಲು ಅನುಭವಿಸಿದ್ದಾರೆ.
ಬಿಜೆಪಿಯ ಭದ್ರಕೋಟೆಯನ್ನು ಚಿದ್ರ ಮಾಡುವ ಮೂಲಕ ಈ ಜೋಡಿ ಕೊಡಗಿನಲ್ಲಿ ದೊಡ್ಡ ಮೋಡಿ ಮಾಡಿದೆ. ಸೋಲಿಲ್ಲದ ಸರದಾರರಿಗೆ ಸೋಲಿನ ರುಚಿ ತೋರಿಸುವ ಮೂಲಕ ಕಾಂಗ್ರೆಸ್ ಪಕ್ಷಕ್ಕೆ ಜಿಲ್ಲೆಯಲ್ಲಿ ಮರು ಜೀವ ನೀಡಿದ್ದಾರೆ. ಬದಲಾವಣೆಯನ್ನು ಬಯಸಿದ್ದ ಕೊಡಗಿನ ಜನ ಇಬ್ಬರು ಉತ್ಸಾಹಿ ಯುವಕರ ಕೈಹಿಡಿದು ನಿಮ್ಮೊಂದಿಗೆ ನಾವಿದ್ದೇವೆ ಎಂದು ಅಭಯ ನೀಡಿದ್ದಾರೆ. ಇನ್ನು ಏನಿದ್ದರೂ ನೂತನ ಶಾಸಕರುಗಳಾದ ಮಡಿಕೇರಿಯ ಡಾ.ಮಂತರ್ ಗೌಡ ಹಾಗೂ ವಿರಾಜಪೇಟೆಯ ಎ.ಎಸ್.ಪೊನ್ನಣ್ಣ ಅವರುಗಳು ಜನರ ನಿರೀಕ್ಷೆಯನ್ನು ತಲುಪಬೇಕಷ್ಟೆ.
Breaking News
- *ರಾಜಾಸೀಟು ಫಲಪುಷ್ಪ ಪ್ರದರ್ಶನದಲ್ಲಿ 22 ಅಡಿ ಎತ್ತರದ ಶ್ರೀ ಓಂಕಾರೇಶ್ವರ ದೇವಸ್ಥಾನದ ಕಲಾಕೃತಿ ಮತ್ತು 20 ಸಾವಿರ ವಿವಿಧ ಜಾತಿಯ ಹೂವುಗಳ ಆಕರ್ಷಣೆ*
- *ರಾಷ್ಟ್ರೀಯ ಹಾಕಿ ತಂಡಕ್ಕೆ ಪಿ.ಯು.ತನುಷ್ ಆಯ್ಕೆ*
- *ಹೆಬ್ಬಾಲೆ ಸರ್ಕಾರಿ ಶಾಲೆಯಲ್ಲಿ ಗಮನ ಸೆಳೆದ ಇಂಗ್ಲಿಷ್ ಭಾಷಾ ಮೇಳ*
- *”ಶ್ರೀಮತಿ ವಿಜಯ ವಿಷ್ಣು ಭಟ್ ದತ್ತಿ ಪ್ರಶಸ್ತಿ”ಗೆ ಕೃತಿಗಳ ಆಹ್ವಾನ*
- *ಮಾವಿನಹಳ್ಳ ಹಾಡಿ ಮತ್ತು ಕಟ್ಟೆ ಹಾಡಿಯ ಅರಣ್ಯ ಹಕ್ಕು ಗ್ರಾಮಸಭೆ*
- *ಬಾಳೆಲೆ : ಮಣ್ಣು ಪರೀಕ್ಷೆ ಮತ್ತು ಸಸ್ಯ ಪೋಷಕಾಂಶಗಳ ನಿರ್ವಹಣೆ ಕುರಿತು ಮಾಹಿತಿ ಕಾರ್ಯಕ್ರಮ*
- *ಜ.26 ರಂದು ಗಣರಾಜ್ಯೋತ್ಸವ ದಿನಾಚರಣೆ*
- *ದಕ್ಷಿಣ ಕೊಡಗಿನಲ್ಲಿ ಸಣ್ಣ ಕೈಗಾರಿಕಾ ಪ್ರದೇಶಾಭಿವೃದ್ಧಿ : 50 ಏಕರೆ ಭೂಮಿ ಮಂಜೂರಾತಿಗೆ ಆಪ್ ಮನವಿ*
- *ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜು : 8ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ*
- *ರಾಷ್ಟ್ರೀಯ ಜೂನಿಯರ್ ಹಾಕಿ ತಂಡಕ್ಕೆ ಕೊಡಗಿನ ವಿಶ್ವಜಿತ್ ಹಾಗೂ ಪೂಜಿತ್ ಆಯ್ಕೆ*