ಬೆಂಗಳೂರು ಮೇ 13 : ತೀವ್ರ ಕುತೂಹಲ ಸೃಷ್ಟಿಸಿದ್ದ ಕರ್ನಾಟಕ ವಿಧಾನಸಭೆ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು, ಕಾಂಗ್ರೆಸ್ ಭರ್ಜರಿ ಬಹುಮತ ಪಡೆದಿದೆ.
ಬಿಜೆಪಿ 65 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದು, ಕಾಂಗ್ರೆಸ್ 136 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಜೆಡಿಎಸ್ 19 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದು, ಇತರರು 4 ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದ್ದಾರೆ.