ಮಡಿಕೇರಿ ಮೇ 13 : ಕಳೆದ 25 ವರ್ಷಗಳಿಂದ ಬಿಜೆಪಿ ಶಾಸಕರುಗಳ ಹಿಡಿತದಲ್ಲಿದ್ದ ಕೊಡಗು ಜಿಲ್ಲೆಯ ವಿಧಾನಸಭಾ ಕ್ಷೇತ್ರಗಳು ಕೈವಶವಾಗಿದೆ. ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದ್ದು, ಕಳೆದ 25 ವರ್ಷಗಳ ಬಳಿಕ ಬಿಜೆಪಿಯ ಭದ್ರಕೋಟೆಯನ್ನು ಛಿದ್ರಗೊಳಿಸಿದೆ.
ಮಡಿಕೇರಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ನ ಡಾ.ಮಂಥರ್ ಗೌಡ ಅವರು ತಮ್ಮ ಸಮೀಪದ ಪ್ರತಿಸ್ಪರ್ಧಿ ಬಿಜೆಪಿಯ ಎಂ.ಪಿ.ಅಪ್ಪಚ್ಚುರಂಜನ್ ಅವರನ್ನು 4,402 ಮತಗಳಿಂದ ಪರಾಭವಗೊಳಿಸಿದ್ದಾರೆ. ವೀರಾಜಪೇಟೆ ಕ್ಷೇತ್ರದಲ್ಲಿ ಕಾಂಗ್ರೆಸ್ ನ ಎ.ಎ.ಸ್.ಪೊನ್ನಣ್ಣ ಅವರು ತಮ್ಮ ಪ್ರತಿಸ್ಪರ್ಧಿ ಬಿಜೆಪಿಯ ಕೆ.ಜಿ.ಬೋಪಯ್ಯ ಅವರನ್ನು 4,291ಮತಗಳಿಂದ ಸೋಲಿಸಿದ್ದಾರೆ.
ಕ್ಷೇತ್ರ ಪುನರ್ ವಿಂಗಡಣೆಯ ಬಳಿಕ ಮಡಿಕೇರಿ ಮತ್ತು ವೀರಾಜಪೇಟೆ ಕ್ಷೇತ್ರಗಳಲ್ಲಿ ಬಿಜೆಪಿ ಸತತ ಗೆಲುವು ಸಾಧಿಸುತ್ತಾ ಬಂದಿದ್ದು, ಇದೀಗ ಬಿಜೆಪಿಯ ಗೆಲುವಿನ ನಾಗಾಲೋಟಕ್ಕೆ ಕಾಂಗ್ರೆಸ್ ಬ್ರೇಕ್ ಹಾಕಿದೆ. ಮಡಿಕೇರಿ ವಿಧಾನಸಭಾ ಕ್ಷೇತ್ರದಲ್ಲಿ ಡಾ.ಮಂಥರ್ ಗೌಡ ಅವರು 84,879 ಮತಗಳನ್ನು ಪಡೆಯುವ ಮೂಲಕ ಗೆಲುವು ಸಾಧಿಸಿದ್ದು, ಪ್ರತಿಸ್ಪರ್ಧಿ ಅಪ್ಪಚ್ಚುರಂಜನ್ ಅವರು 80,477 ಮತಗಳನ್ನು ಪಡೆದರು. ಜೆಡಿಎಸ್ ನ ನಾಪಂಡ ಮುತ್ತಪ್ಪ ಕೇವಲ 6,233ಮತಗಳನ್ನಷ್ಟೇ ಪಡೆಯಲು ಶಕ್ತರಾದರು.
ಒಟ್ಟು 20 ಸುತ್ತುಗಳಲ್ಲಿ ಮತ ಎಣಿಕೆ ನಡೆದಿದ್ದು, ಮೊದಲ 8ನೇ ಸುತ್ತಿನ ವರೆಗೂ ವಿರಾಜಪೇಟೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ.ಜಿ.ಬೋಪಯ್ಯ ಅವರು ಮುನ್ನಡೆ ಸಾಧಿಸುತ್ತಲೇ ಬಂದರು. ನಂತರ ಕಾಂಗ್ರೆಸ್ ನ ಎ.ಎಸ್.ಪೊನ್ನಣ್ಣ ಗೆಲುವಿನತ್ತ ಸಾಗಿದರು.
ಮಡಿಕೇರಿ ಕ್ಷೇತ್ರದಲ್ಲಿ ಡಾ.ಮಂತರ್ ಗೌಡ ಅವರು ಆರಂಭದಿಂದ ಕೊನೆಯವರೆಗೂ ಮೊದಲಿಗರಾಗಿಯೇ ಉಳಿದದ್ದು ವಿಶೇಷ.
ಉಳಿದಂತೆ ಮಡಿಕೇರಿ ವಿಧಾನಸಭಾ ಕ್ಷೇತ್ರದಲ್ಲಿ ಎಸ್‍ಡಿಪಿಐನ ಅಮಿನ್ ಮೊಹಿಸಿನ್ 1436, ಸಿಪಿಐನ ಎಚ್.ಎಂ.ಸೋಮಪ್ಪ, 513, ಬಹುಜನ ಸಮಾಜ ಪಾರ್ಟಿಯ ಎ.ಎ.ದಿವಿಲ್ ಕುಮಾರ್ 636, ಇಂಡಿಯನ್ ಮೂವ್‍ಮೆಂಟ್ ಪಾರ್ಟಿ ರಶೀದಾಬೇಗಂ, 84, ಕರ್ನಾಟಕ ಪ್ರಜ್ಞಾವಂತ ಜನತಾ ಪಾರ್ಟಿಯ ಬಿ.ಕೆ.ಶ್ರೀನಿವಾಸ ರೈ 116, ಆಮ್ ಆದ್ಮಿ ಪಾರ್ಟಿಯ ಕೆ.ಪಿ.ಬೋಪಣ್ಣ 407, ಕರ್ನಾಟಕ ರಾಷ್ಟ್ರ ಸಮಿತಿಯ ಸಜೀರ್ ಮಜೀದ್ ನೆಲಾಟ್ 155, ರಿಪಬ್ಲಿಕ್ ಪಾರ್ಟಿ ಆಫ್ ಇಂಡಿಯಾದಕೆ.ಬಿ.ರಾಜು 116, ಪಕ್ಷೇತರರಾದ ಎಂ.ಖಲೀಲ್ 249, ಶೃತಿ ಕೆ.ಪಿ 222, ಹರೀಶ್ ಜಿ.ಆಚಾರ್ಯ 124, ಜಿ.ಜಿ.ಹೇಮಂತ್ ಕುಮಾರ್ 253, ಮತಗಳನ್ನು ಪಡೆದರು.
::: ವಿರಾಜಪೇಟೆ ಕ್ಷೇತ್ರ :::
ವೀರಾಜಪೇಟೆ ಕ್ಷೇತ್ರದಲ್ಲಿ ಕಾಂಗ್ರೆಸ್ ನ ಎ.ಎಸ್.ಪೊನ್ನಣ್ಣ 83,791ಮತಗಳನ್ನು ಪಡೆದು ಜಯಗಳಿಸಿದರೆ, ಬಿಜೆಪಿಯ ಕೆ.ಜಿ.ಬೋಪಯ್ಯ 79,500 ಮತಗಳನ್ನು ಪಡೆದು ಪರಾಭವಗೊಂಡರು. ಜೆಡಿಎಸ್ ನ ಎಂ.ಎ.ಮನ್ಸೂರ್ ಅಲಿ 1121, ಸರ್ವೋದಯ ಕರ್ನಾಟಕ ಪಕ್ಷದ ಕೆ.ಎಸ್.ಮನು ಸೋಮಯ್ಯ 682, ಆಮ್ ಆದ್ಮಿ ಪಕ್ಷದ ಚಿಮ್ಮಣಮಾಡ ಎಸ್.ರವೀಂದ್ರ 254, ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ ಮಸೂದ್ ಫೌಜ್ದಾರ್ 121, ಕರ್ನಾಟಕ ರಾಷ್ಟ್ರ ಸಮಿತಿಯ ವಿ.ಎ.ಸಜು 123, ಪಕ್ಷೇತರರಾದ ಪೊನ್ನೇಟ್ಟಿ ಕೆ.ದರ್ಶನ್ 414, ಅಬ್ದುಲ್ ನಾಸಿರ್ ಮಕ್ಕಿ 346 ಮತಗಳನ್ನು ಪಡೆದರು.
::: ನೋಟಾಕ್ಕೆ ಮತ :::
ಕೊಡಗಿನ ವಿಧಾನಸಭಾ ಕ್ಷೇತ್ರಗಳಲ್ಲಿ ನೋಟಾಕ್ಕೆ ಅಧಿಕ ಮತಗಳು ಚಲಾವಣೆಯಾಗಿದೆ. ವೀರಾಜಪೇಟೆ ಕ್ಷೇತ್ರದಲ್ಲಿ 1636 ಮಂದಿ ನೋಟಾಕ್ಕೆ ಮತ ಚಲಾಯಿಸುವ ಮೂಲಕ ಮೂರನೇ ಸ್ಥಾನ ಮತ್ತು ಮಡಿಕೇರಿ ಕ್ಷೇತ್ರದಲ್ಲಿ 1516 ಮಂದಿ ನೋಟಾಕ್ಕೆ ಮತಹಾಕಿ ನಾಲ್ಕನೇ ಸ್ಥಾನ ನೀಡಿದ್ದಾರೆ.
ಕಳೆದ ಬಾರಿಯು ಮಡಿಕೇರಿ ಕ್ಷೇತ್ರದಲ್ಲಿ 1615 ಮತ ಮತ್ತು ವೀರಾಜಪೇಟೆ ಕ್ಷೇತ್ರದಲ್ಲಿ 1733 ಮತಗಳು ನೋಟಾಕ್ಕೆ ಚಲಾವಣೆಯಾಗಿದ್ದವು.
::: ಬಿಗಿ ಭದ್ರತೆಯಲ್ಲಿ ಮತ ಎಣಿಕೆ :::
ನಗರದ ಸಂತ ಜೋಸೆಫರ ಶಾಲೆಯ ಮತ ಎಣಿಕಾ ಕೇಂದ್ರದಲ್ಲಿ ಜಿಲ್ಲಾ ಚುನಾವಣಾಧಿಕಾರಿ ಡಾ.ಬಿ.ಸಿ.ಸತೀಶ ಅವರ ಉಸ್ತುವಾರಿಯಲ್ಲಿ ಶನಿವಾರ ಬೆಳಗ್ಗೆ 8 ಗಂಟೆಗೆ ಮತ ಎಣಿಕಾ ಕಾರ್ಯ ಆರಂಭಗೊಂಡಿತು. ಮಧ್ಯಾಹ್ನ 1 ಗಂಟೆಯ ವೇಳೆಗೆ ಎರಡೂ ಕ್ಷೇತ್ರಗಳ ಪೂರ್ಣ ಫಲಿತಾಂಶ ಹೊರಬಿದ್ದಿತು. ಜಿಲ್ಲಾ ಪೊಲೀಸ್, ಕೈಗಾರಿಕಾ ಭದ್ರತಾ ಪಡೆ ಪೊಲೀಸರ ಬಿಗಿ ಭದ್ರತೆಯಲ್ಲಿ ಮತ ಎಣಿಕೆ ಕಾರ್ಯ ನಡೆಯಿತು.
::: ವಿಜಯೋತ್ಸವ :::
ಮತ ಎಣಿಕೆಯ ಅಂತಿಮ ಫಲಿತಾಂಶ ಹೊರಬೀಳುವ ಮುನ್ನವೇ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಸಂಭ್ರಮ ಮುಗಿಲು ಮುಟ್ಟಿತ್ತು. ಘೋಷಣೆ, ಮೆರವಣಿಗೆ ಮತ್ತು ಪಟಾಕಿ ಸಿಡಿಸಿ ಸಂಭ್ರಮಿಸಿದರು.
Breaking News
- *ಕೊಡವ ಲ್ಯಾಂಡ್ ಭೂರಾಜಕೀಯ ಸ್ವಾಯತ್ತತೆ : ಮಾ.11ಕ್ಕೆ ವಿಚಾರಣೆ ಮುಂದೂಡಿಕೆ*
- *ಜ.25 ರಂದು ಜಿಲ್ಲಾ ಮಟ್ಟದ ಜನಸ್ಪಂದನ ಕಾರ್ಯಕ್ರಮ*
- *ಜ.30 ರಂದು ಹುತಾತ್ಮರ ದಿನಾಚರಣೆ : ಮಡಿಕೇರಿಯಲ್ಲಿ ಪೂರ್ವಭಾವಿ ಸಭೆ*
- *ಹೈದರಾಬಾದ್ನಲ್ಲಿ ಗಮನ ಸೆಳೆದ ಕುಡಿಯರ ಉರುಟಿಕೊಟ್ಟ್ ಪಾಟ್ ನೃತ್ಯ*
- *ಮಡಿಕೇರಿ : ಜ.28 ರಂದು ಕುಂದುರುಮೊಟ್ಟೆ ದಸರಾ ಉತ್ಸವ ಸಮಿತಿಯ ಸುವರ್ಣ ಮಹೋತ್ಸವ ಸ್ಮರಣ ಸಂಚಿಕೆ “ದಶಮಿ” ಬಿಡುಗಡೆ*
- *ಮಡಿಕೇರಿಯ ಡಾ.ಅಂಬೇಡ್ಕರ್ ಭವನವನ್ನು ದಲಿತ ಸಂಘರ್ಷ ಸಮಿತಿಯ ವಶಕ್ಕೆ ನೀಡಿ*
- *‘ಸಂವಿಧಾನ್ ಸಮ್ಮಾನ್ ಅಭಿಯಾನ್’ : ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಸಂವಿಧಾನ ವಿರೋಧಿಯಾಗಿ ನಡೆದುಕೊಂಡವರ ಬಣ್ಣ ಬಯಲು*
- *ಅಂತರರಾಷ್ಟ್ರೀಯ ವಾಣಿಜ್ಯ ಮೇಳ ಸಾವಯವ ಮತ್ತು ಸಿರಿಧಾನ್ಯ ಕಾರ್ಯಕ್ರಮ ಉದ್ಘಾಟನೆ : ಮಂಡ್ಯದಲ್ಲಿ ಸಂಯೋಜಿತ ಕೃಷಿ ವಿಶ್ವವಿದ್ಯಾಲಯ ಸ್ಥಾಪನೆ : ಮುಖ್ಯಮಂತ್ರಿ ಸಿದ್ದರಾಮಯ್ಯ
- *ಭಾಗಮಂಡಲದಲ್ಲಿ ಕಸಾಪ ದತ್ತಿ ಉಪನ್ಯಾಸ ಕಾರ್ಯಕ್ರಮ : ಗೌರವ ಸಮರ್ಪಣೆ*
- *ಬಲ್ಲಮಾವಟಿಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ : ಪ್ರತಿಯೊಬ್ಬರೂ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಿ : ಡಾ.ಶೈಲಜಾ ಸಲಹೆ*