ಮಡಿಕೇರಿ ಮೇ 13 : ಜನರ ತೀರ್ಪಿಗೆ ತಲೆಬಾಗುವುದಾಗಿ ಮಡಿಕೇರಿ ಕ್ಷೇತ್ರದ ಪರಾಜಿತ ಬಿಜೆಪಿ ಅಭ್ಯರ್ಥಿ ಎಂ.ಪಿ.ಅಪ್ಪಚ್ಚುರಂಜನ್ ತಿಳಿಸಿದ್ದಾರೆ.
ಚುನಾವಣಾ ಫಲಿತಾಂಶ ಘೋಷಣೆಯಾದ ಬಳಿಕ ಮತ ಎಣಿಕೆ ಕೇಂದ್ರದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ 25 ವರ್ಷಗಳಿಂದ ಕ್ಷೇತ್ರದ ಮತದಾರರು ನನಗೆ ಆಶೀರ್ವಾದ ಮಾಡಿದ್ದು, ಅವರಿಗೆ ಕೃತಜ್ಞತೆ ಸಲ್ಲಿಸುವುದಾಗಿ ತಿಳಿಸಿದರು.
ಅಧಿಕಾರದ ಅವಧಿಯಲ್ಲಿ ಯಾರಿಗೂ ತೊಂದರೆಯಾಗದಂತೆ ಅಭಿವೃದ್ಧಿ ಕಾರ್ಯ ನಿರ್ವಹಿಸಿದ ತೃಪ್ತಿ ಇದೆ. ಇದೀಗ ಕಾಂಗ್ರೆಸ್’ನ ಗ್ಯಾರಂಟಿ ಕಾರ್ಡ್ ಹಾಗೂ ಉಚಿತ ಅಕ್ಕಿ ನೀಡುವ ಘೋಷಣೆಯ ಪರಿಣಾಮದಿಂದಾಗಿ ಮತಗಳು ಕಾಂಗ್ರೆಸ್’ಗೆ ಹೋಗಿದೆ. ಇದರಿಂದಾಗಿ ಈ ಬಾರಿ ಸೋಲು ಉಂಟಾಗಿದೆ ಎಂದು ಹೇಳಿದರು.
ಚುನಾವಣೆ ಸಂದರ್ಭ ಪಕ್ಷಕ್ಕಾಗಿ ಪ್ರಾಮಾಣಿಕವಾಗಿ ಕಾರ್ಯ ನಿರ್ವಹಿಸಿದ ಎಲ್ಲರಿಗೂ ತಾನು ಆಭಾರಿಯಾಗಿರುವುದಾಗಿ ಅಪ್ಪಚ್ಚು ರಂಜನ್ ಹೇಳಿದರು.
Breaking News
- *ಜ.25 ರಂದು ಕಸಾಪ ದತ್ತಿ ಉಪನ್ಯಾಸ ಕಾರ್ಯಕ್ರಮ*
- *ಸುಂಟಿಕೊಪ್ಪ : ಸಾರ್ವಜನಿಕರು ಆರೋಗ್ಯ ಶಿಬಿರದ ಸದುಪಯೋಗ ಪಡೆದುಕೊಳ್ಳಿ : ಎ.ಲೋಕೇಶ್ ಕುಮಾರ್*
- *ಮಡಿಕೇರಿಯಲ್ಲಿ ನೇತಾಜಿ ಸುಭಾಷ್ ಚಂದ್ರ ಬೋಸ್ ಜನ್ಮದಿನ ಆಚರಣೆ*
- *ಮಡಿಕೇರಿಯಲ್ಲಿ ಪರಾಕ್ರಮ್ ದಿವಸ್ ಆಚರಣೆ : ಪರೀಕ್ಷಾ ಪೇ ಚರ್ಚಾ 9ನೇ ಆವೃತ್ತಿ*
- *ಕಳೆದು ಹೋಗಿದೆ*
- *ಫೆ.27 ಮತ್ತು 28 ರಂದು ಕೊಡವ ಬಲ್ಯನಮ್ಮೆ : ವಿವಿಧ ಸ್ಪರ್ಧೆಗಳಿಗೆ ಆಹ್ವಾನ*
- *ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಆಹ್ವಾನ*
- *ಕೊಡವ ಲ್ಯಾಂಡ್ ಭೂರಾಜಕೀಯ ಸ್ವಾಯತ್ತತೆ : ಮಾ.11ಕ್ಕೆ ವಿಚಾರಣೆ ಮುಂದೂಡಿಕೆ*
- *ಜ.25 ರಂದು ಜಿಲ್ಲಾ ಮಟ್ಟದ ಜನಸ್ಪಂದನ ಕಾರ್ಯಕ್ರಮ*
- *ಜ.30 ರಂದು ಹುತಾತ್ಮರ ದಿನಾಚರಣೆ : ಮಡಿಕೇರಿಯಲ್ಲಿ ಪೂರ್ವಭಾವಿ ಸಭೆ*