ಮಡಿಕೇರಿ ಮೇ 13 : ಜನಾಭಿಪ್ರಾಯಕ್ಕೆ ತಲೆಬಾಗುತ್ತೇನೆ ಎಂದು ವಿರಾಜಪೇಟೆ ಕ್ಷೇತ್ರದ ಪರಾಜಿತ ಬಿಜೆಪಿ ಅಭ್ಯರ್ಥಿ ಕೆ.ಜಿ.ಬೋಪಯ್ಯ ಹೇಳಿದ್ದಾರೆ.
ನೂತನವಾಗಿ ಶಾಸಕರಾಗಿ ಆಯ್ಕೆಯಾಗಿರುವ ಎ.ಎಸ್.ಪೊನ್ನಣ್ಣ ಅವರಿಗೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ಆಡಳಿತ ಪಕ್ಷದಲ್ಲಿ ಉತ್ತಮ ಜನಪರ ಕೆಲಸಗಳನ್ನು ಮಾಡಲು ದೇವರು ಅವರಿಗೆ ಶಕ್ತಿ ಕೊಡಲೆಂದು ಪ್ರಾರ್ಥಿಸುತ್ತೇನೆ ಎಂದರು.










