ಮಡಿಕೇರಿ ಮೇ 14 : ವಿರಾಜಪೇಟೆ ಕ್ಷೇತ್ರವನ್ನು ಮುಂದಿನ ಕಾಂಗ್ರೆಸ್ ಅಧಿಕಾರದ ಅವಧಿಯಲ್ಲಿ ಭ್ರಷ್ಟಾಚಾರ ಮುಕ್ತ ಮತ್ತು ರಾಜ್ಯದಲ್ಲೆ ಮಾದರಿ ಕ್ಷೇತ್ರವನ್ನಾಗಿ ನೂತನ ಶಾಸಕ ಅಜ್ಜಿಕುಟ್ಟೀರ ಎಸ್.ಪೊನ್ನಣ್ಣ ಅವರ ನೇತೃತ್ವದಲ್ಲಿ ರೂಪಿಸುವುದು ನಮ್ಮ ಮೊದಲ ಆದ್ಯತೆಯಾಗಿದೆ ಎಂದು ಕೆಪಿಸಿಸಿ ವಕ್ತಾರ ಮೇರಿಯಂಡ ಸಂಕೇತ್ ಪೂವಯ್ಯ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜನರ ಆಶೀರ್ವಾದದಿಂದ ಎ.ಎಸ್.ಪೊನ್ನಣ್ಣ ಅವರು ಆಯ್ಕೆಯಾಗಿದ್ದಾರೆ. ಕ್ಷೇತ್ರದ ಅಭಿವೃದ್ಧಿಯ ಜೊತೆ ಜೊತೆಯಲ್ಲೆ ಜನರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಮೂಲಕ ಉತ್ತಮ ಸಮಾಜ ನಿರ್ಮಾಣ ಮಾಡುವ ಕಾರ್ಯ ಮುಂದಿನ ದಿನಗಳಲ್ಲಿ ನಡೆಯಲಿದೆ ಎಂದರು.
ಪ್ರಸ್ತುತ ಸಮಾಜದ ಪ್ರತಿ ಹಂತದಲ್ಲೂ ಭ್ರಷ್ಟಾಚಾರವೆಂಬುದು ಹಾಸು ಹೊಕ್ಕಾಗಿ ಹೋಗಿದೆ. ಇನ್ನು ಮುಂದೆ ವಿರಾಜಪೇಟೆ ಕ್ಷೇತ್ರದಲ್ಲಿ ಭ್ರಷ್ಟಾಚಾರ ನಡೆಯದಂತೆ ನೋಡಿಕೊಳ್ಳಲಾಗುವುದು. ಜಿಲ್ಲೆಯ ಕಾಫಿ ಬೆಳೆಗಾರ ಎದುರಿಸುತ್ತಿರುವ ಹತ್ತು ಹಲವು ಸಮಸ್ಯೆಗಳಿಗೆ, ವನ್ಯಜೀವಿ ಮತ್ತು ಮಾನವ ಸಂಘರ್ಷ ನಿವಾರಣೆಗೆ ವೈಜ್ಞಾನಿಕವಾದ ಪರಿಹಾರಗಳನ್ನು ಕಂಡುಕೊಳ್ಳುವ ಪ್ರಯತ್ನ ನಡೆಯಲಿದೆ. ಈಗಾಗಲೆ ಬಿಡುಗಡೆ ಮಾಡಿರುವ ವಿರಾಜಪೇಟೆ ಕ್ಷೇತ್ರದ ಕಾಂಗ್ರೆಸ್ ಪ್ರಣಾಳಿಕೆಯಲ್ಲಿನ ಅಂಶಗಳಿಗೆ ಒತ್ತು ನೀಡಿ ಕಾರ್ಯನಿರ್ವಹಿಸಲು ನೂತನ ಶಾಸಕ ಪೊನ್ನಣ್ಣ ಅವರ ನೇತೃತ್ವದಲ್ಲಿ ಸಮಿತಿಯೊಂದನ್ನು ರಚಿಸಿ ಶೀಘ್ರವೇ ಕಾರ್ಯಪ್ರವೃತ್ತರಾಗುವುದಾಗಿ ಸಂಕೇತ್ ಪೂವಯ್ಯ ತಿಳಿಸಿದರು.
::: ಸಚಿವ ಸ್ಥಾನ :::
ನೂತನ ಕಾಂಗ್ರೆಸ್ ಸರ್ಕಾರದ ಸಚಿವ ಸಂಪುಟದಲ್ಲಿ ಅಜ್ಜಿಕುಟ್ಟೀರ ಪೊನ್ನಣ್ಣ ಅವರಿಗೆ ಸಚಿವ ಸ್ಥಾನ ದೊರಕುವ ವಿಶ್ವಾಸ ವ್ಯಕ್ತಪಡಿಸಿದ ಅವರು, ಒಂದು ಕ್ಷೇತ್ರ ಮತ್ತು ಜಿಲ್ಲೆಯ ಒಟ್ಟು ಸಮಸ್ಯೆಗಳನ್ನು ಸರ್ಕಾರದ ಮುಂದೆ ಮಂಡಿಸಿ ಪರಿಹಾರಗಳನ್ನು ಕಂಡುಕೊಳ್ಳಲು ಜಿಲ್ಲೆಯವರಿಗೆ ಸಚಿವ ಸ್ಥಾನ ನೀಡುವುದು ಅವಶ್ಯವಾಗಿದೆ. ಈ ಹಿಂದೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಸಂದರ್ಭಗಳಲ್ಲೆಲ್ಲ ಜಿಲ್ಲೆಯವರಿಗೆ ಮತ್ತು ಜಿಲ್ಲೆಯಲ್ಲಿ ಕಾಂಗ್ರೆಸ್ ಶಾಸಕರು ಇಲ್ಲದಿದ್ದ ಸಂದರ್ಭದಲ್ಲಿ ಜಿಲ್ಲೆಗೆ ಸಂಬoಧಿಸಿದವರಿಗೆ ಸಚಿವ ಸ್ಥಾನವನ್ನು ನೀಡಲಾಗಿತ್ತೆಂದು ತಿಳಿಸಿದರು.
::: ಮತದಾರನಿಗೆ ಕೋಟೆ ಕಟ್ಟಲಾಗದು :::
ಕೊಡಗನ್ನು ಪಕ್ಷವೊಂದರ ಭದ್ರಕೋಟೆ ಎಂದು ಬಿಂಬಿಸಲಾಗುತಿತ್ತು. ಆದರೆ, ಎಂದಿಗೂ ಯಾವುದೇ ಪಕ್ಷ ಮತದಾರನಿಗೆ ಕೋಟೆ ಕಟ್ಟಲು ಸಾಧ್ಯವಿಲ್ಲವೆಂದು ಸ್ಪಷ್ಟಪಡಿಸಿದ ಸಂಕೇತ್ ಪೂವಯ್ಯ, ಜಿಲ್ಲೆಯಲ್ಲಿ ಕಾಂಗ್ರೆಸ್ ಎಲ್ಲಿದೆಯೆಂದು ದುರ್ಬೀ ಹಾಕಿ ನೋಡಬೇಕೆನ್ನುವ ಮಾಜಿ ಶಾಸಕರೊಬ್ಬರು ಈ ಹಿಂದೆ ಹೇಳಿದ್ದರು, ಈಗ ಆ ದುರ್ಬೀಯನ್ನು ಎತ್ತ ತಿರುಗಿಸಬೇಕೆಂದು ಅವರೇ ತಿಳಿಸಬೇಕಷ್ಟೆ ಎಂದು ವ್ಯಂಗ್ಯವಾಡಿದರು.
::: ಅಪಪ್ರಚಾರಕ್ಕೆ ಉತ್ತರ ಕೊಟ್ಟಿದ್ದಾರೆ :::
ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಎ.ಎಸ್.ಪೊನ್ನಣ್ಣ ಅವರು ಕೇವಲ ಅಭಿವೃದ್ಧಿ ವಿಚಾರಗಳ ಆಧಾರದಲ್ಲಿ ಮತಯಾಚಿಸಿದ್ದಾರೆ. ಇದಕ್ಕೆ ವ್ಯತಿರಿಕ್ತವಾಗಿ ಅವರ ವಿರುದ್ಧ ಬಿಜೆಪಿ ಅಪ್ರಪ್ರಚಾರಗಳನ್ನು ಮಾಡಿ, ಅವರ ಕುಟುಂಬಸ್ಥರ ಮೇಲೆ ಸುಳ್ಳು ಆರೋಪಗಳನ್ನು ಮಾಡುವ ಮೂಲಕ ಪೊನ್ನಣ್ಣ ಅವರಿಗೆ ನೋವನ್ನುಂಟು ಮಾಡಿದ್ದರು. ಈ ಎಲ್ಲಾ ಅಪಪ್ರಚಾರಗಳಿಗೆ ಮತದಾರ ಉತ್ತರ ನೀಡಿರುವುದಾಗಿ ಹೇಳಿದರು.
ಚುನಾವಣಾ ಹಂತದಲ್ಲಿ ತಾವು ಮಾಡಿದ ಸಾಧನೆಗಳ ಆಧಾರದಲ್ಲಿ ಮತಯಾಚನೆ ಮಾಡದ ಬಿಜೆಪಿ ಭಾವನಾತ್ಮಕ ವಿಚಾರಗಳಿಗೆ ಒತ್ತು ನೀಡಿ ಜನರನ್ನು ಸೆಳೆೆಯಲು ಯತ್ನಿಸಿತ್ತು. ಆದರೆ, ಪ್ರಬುದ್ಧ ಮತದಾರ ಇಂತಹ ವಿಚಾರಗಳನ್ನು ಲೆಕ್ಕಿಸದೆ ಅಭಿವೃದ್ಧಿಯ ಚಿಂತನೆಯಡಿ ಪೊನ್ನಣ್ಣ ಅವರನ್ನು ಆಶೀರ್ವದಿಸಿರುವುದಾಗಿ ಸಂಕೇತ್ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಟ್ಟಡ ರಂಜಿ ಪೂಣಚ್ಚ, ನಾಪೋಕ್ಲು ಬ್ಲಾಕ್ ಅಧ್ಯಕ್ಷ ಕೆ.ಎ.ಇಸ್ಮಾಯಿಲ್, ವಿರಾಜಪೇಟೆ ನಗರಾಧ್ಯ್ಯಕ್ಷ ಬಾನಂಡ ತಿಮ್ಮಯ್ಯ, ವಿರಾಜಪೇಟೆ ಕ್ಷೇತ್ರದ ಪ್ರಚಾರ ಸಮಿತಿ ಅಧ್ಯಕ್ಷ ಎಸ್.ಹೆಚ್.ಮತೀನ್ ಹಾಗೂ ಬೆಟ್ಟಗೇರಿ ವಲಯ ಕಾಂಗ್ರೆಸ್ ಅಧ್ಯಕ್ಷ ತೀರ್ಥ ಪ್ರಸಾದ್ ಉಪಸ್ಥಿತರಿದ್ದರು.
Breaking News
- *ಫೀ.ಮಾ.ಕೆ.ಎಂ.ಕಾರ್ಯಪ್ಪ ಕಾಲೇಜ್ ನಲ್ಲಿ ಸಂಭ್ರಮದ ಗಣರಾಜ್ಯೋತ್ಸವ ಆಚರಣೆ*
- *ಕೊಡಗು ಹಿತರಕ್ಷಣಾ ವೇದಿಕೆಯಿಂದ ಸಂಭ್ರಮದ 76ನೇ ಗಣರಾಜ್ಯೋತ್ಸವ ಆಚರಣೆ*
- *ರಾಜಾಸೀಟು ಸೊಬಗಿಗೆ ಮನಸೋತ ಉಸ್ತುವಾರಿ ಸಚಿವರು*
- *ಸಿಕ್ಕ ಸಿಕ್ಕ ವಾಹನಗಳ ಮೇಲೆ ಒಂಟಿ ಸಲಗ ದಾಳಿ*
- *ಕೊಡ್ಲಿಪೇಟೆ ನಂದಿಪುರ ಕೆರೆ ಅಭಿವೃದ್ಧಿ : ಗ್ಯಾರಂಟಿ ಯೋಜನೆಗಳ ಮೂಲಕ ಭ್ರಷ್ಟಚಾರವಿಲ್ಲದೆ ಜನರಿಗೆ ನೇರವಾಗಿ ಹಣ : ಸಚಿವ ಎನ್.ಎಸ್.ಭೋಸರಾಜು*
- *ಸಿಎನ್ಸಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಶಾಂತಿಯುತ ಹಕ್ಕೊತ್ತಾಯ ಮಂಡನೆ*
- *ಕೊಡಗು ವಿಶ್ವವಿದ್ಯಾಲಯದಲ್ಲಿ ಕೌಶಲ್ಯಾಭಿವೃದ್ಧಿ ಡಿಪ್ಲೊಮೋ ಕೋರ್ಸ್ ಲೋಕಾರ್ಪಣೆ : ವಿದ್ಯಾರ್ಥಿಗಳು ಕೌಶಲ್ಯಾಭಿವೃದ್ಧಿಗೆ ಆದ್ಯತೆ ನೀಡಬೇಕು : ಸಚಿವ ಎನ್ ಎಸ್ ಭೋಸರಾಜು ಕರೆ*
- *ಜಿಲ್ಲಾ ಮಟ್ಟದ ಜನಸ್ಪಂದನಾ ಸಭೆ : ಸಮಸ್ಯೆಗಳ ಪರಿಹಾರಕ್ಕೆ ಸಚಿವ ಎನ್.ಎಸ್.ಭೋಸರಾಜು ಸೂಚನೆ*
- *ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕಾಲೇಜು ಹಳೆ ವಿದ್ಯಾರ್ಥಿ ಸಂಘದಿಂದ ಗುರುವಂದನಾ ಕಾರ್ಯಕ್ರಮ*
- *ಮಡಿಕೇರಿಯಲ್ಲಿ 76 ನೇ ಗಣರಾಜ್ಯೋತ್ಸವದ ಅರ್ಥಪೂರ್ಣ ಆಚರಣೆ*