ಸಿದ್ದಾಪುರ ಮೇ 15 : ಮಡಿಕೇರಿ ವಿಧಾನಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸಿದ ಡಾ. ಮಂತರ್ ಗೌಡ ಪರವಾಗಿ ನೆಲ್ಯಹುದಿಕೇರಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಬೃಹತ್ ಮೆರವಣಿಗೆ ನಡೆಸುವುದರ ಮೂಲಕ ಪಟಾಕಿ ಸಿಡಿಸಿ ವಿಜಯೋತ್ಸವ ಆಚರಿಸಿದರು.
ನೆಲ್ಯಹುದಿಕೇರಿ ಪಟ್ಟಣದ ಮುಖ್ಯ ಬೀದಿಗಳಲ್ಲಿ ಮಂತರ್ ಗೌಡ ಪರ ಜಯ ಘೋಷಗಳನ್ನು ಕೂಗಿ ಮತದಾರರಿಗೆ ಸಿಹಿ ಹಂಚುವ ಮೂಲಕ ಸಂಭ್ರಮಿಸಿದರು.
ವಲಯ ಕಾಂಗ್ರೆಸ್ ಅಧ್ಯಕ್ಷ ಸಾಬು ವರ್ಗೀಸ್ ನೇತೃತ್ವದಲ್ಲಿ ನಡೆದ ವಿಜಯೋತ್ಸವದಲ್ಲಿ ಗ್ರಾ.ಪಂ ಅಧ್ಯಕ್ಷ ಎ.ಕೆ ಹಕೀಂ, ಜಿ.ಪಂ ಮಾಜಿ ಸದಸ್ಯ ಸುನಿತಾ ಮಂಜುನಾಥ್, ಕಾಂಗ್ರೆಸ್ ಜಿಲ್ಲಾ ಸಮಿತಿ ಮುಖಂಡರುಗಳಾದ ಜೋಸೆಫ್ ಶ್ಯಾಮ್, ಕೆ ಎಂ ಬಶೀರ್, ಕೆ.ಎಂ.ಬಾವ, ವಲಯ ಕಾಂಗ್ರೆಸ್ ಕಾರ್ಯಾಧ್ಯಕ್ಷ ಹನೀಫ,
ಯುವ ಕಾಂಗ್ರೆಸ್ ಅಧ್ಯಕ್ಷ ಶಿಹಾಬ್ ಸೇರಿದಂತೆ ಗ್ರಾ.ಪಂ ಸದಸ್ಯರುಗಳು, ಕಾಂಗ್ರೆಸ್ ಬೂತ್ ಮಟ್ಟದ ಕಾರ್ಯಕರ್ತರು, ವಲಯ ಸಮಿತಿ ಸದಸ್ಯರು ಹಾಗೂ ಸ್ಥಳೀಯರು ಹಾಜರಿದ್ದರು.












