ಮಡಿಕೇರಿ ಮೇ 15 : ಸಾಮಾಜಿಕ ಜಾಲತಾಣಗಳಲ್ಲಿ ಆಧಾರ ರಹಿತ ಸುದ್ಧಿಗಳನ್ನು ಹರಡಿ ಸಾರ್ವಜನಿಕರಲ್ಲಿ ದ್ವೇಷ ಭಾವನೆಯನ್ನುಂಟುಮಾಡಿ ಸಮಾಜದ ಸ್ವಾಸ್ಥ್ಯವನ್ನು ಕದಡುವಂತಹ ವ್ಯಕ್ತಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಸ್ಪಿ ಕೆ.ರಾಮರಾಜನ್ ಎಚ್ಚರಿಕೆ ನೀಡಿದ್ದಾರೆ.
ಈಗಾಗಲೇ ಈ ಸಂಬಂಧ ಜಿಲ್ಲೆಯಲ್ಲಿ ಒಟ್ಟು 13 ಪ್ರಕರಣಗಳನ್ನು ದಾಖಲಿಸಿ ಆರೋಪಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗಿದೆ. ಆದ್ದರಿಂದ ಸಾರ್ವಜನಿಕರು ಇಂತಹ ಘಟನೆಗಳಿಗೆ ಆಸ್ಪದ ನೀಡದಂತೆ ಮನವಿ ಮಾಡಿದ್ದಾರೆ.