ಮಡಿಕೇರಿ ಮೇ 15 : ಕರ್ನಾಟಕ ರಾಜ್ಯ ವಿಧಾನಸಭಾ ಸದಸ್ಯರಾಗಿ ಹಾಗೂ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾಗಿ ಆಯ್ಕೆಯಾಗಿರುವ ಡಾ.ಮಂಥರ್ ಗೌಡ ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾಗಿ ಆಯ್ಕೆಯಾಗಿರುವ ಎ.ಎಸ್.ಪೊನ್ನಣ್ಣ ಅವರಿಗೆ ಆಮ್ ಆದ್ಮಿ ಪಕ್ಷದ ಜಿಲ್ಲಾಧ್ಯಕ್ಷ ಭೋಜಣ್ಣ ಸೋಮಯ್ಯ ಅಭಿನಂದನೆ ಸಲ್ಲಿಸಿದರು.
ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಈ ಬಾರಿ ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಕಾರ್ಡ್ ಕೊಡಗು ಜಿಲ್ಲೆಯ ಜನರಿಗೆ ವಿಶ್ವಾಸ ಮೂಡಿಸಿದ್ದು, ಅದರಂತೆ ಗೆಲುವು ಸಾಧಿಸಿದ್ದು, ಇಬ್ಬರು ಶಾಸಕರು ಜಿಲ್ಲೆಯ ಅಭಿವೃದ್ಧಿಗೆ ಹೆಚ್ಚು ಆದ್ಯತೆ ನೀಡುವಂತೆ ಮನವಿ ಮಾಡಿದರು.
ಕೊಡಗು ಜಿಲ್ಲೆಯಲ್ಲಿ ಪ್ರಾಮಾಣಿಕ ರಾಜಕೀಯಕ್ಕೆ ಎಎಪಿ ಅಭ್ಯರ್ಥಿಗಳಿಗೆ ಬೆಂಬಲಿಸಿದ ಎಲ್ಲಾ ಮತದಾರರು, ಕಾರ್ಯಕರ್ತರಿಗೆ ಧನ್ಯವಾದ ಸಲ್ಲಿಸಿದರು. ಮುಂದಿನ ದಿನಗಳಲ್ಲಿ ಜಿಲ್ಲೆಯಲ್ಲಿ ಎಎಪಿ ಪಕ್ಷಕ್ಕೆ ನೂರು ಪಟ್ಟು ಬೆಂಬಲ ದೊರಕಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ ಅವರು, ಪಕ್ಷದ ಜಿಲ್ಲೆಯಲ್ಲಿ ಸಂಘಟನಾ ಕೆಲಸವನ್ನು ಮುಂದುವರಿಯಲಿದೆ ಎಂದರು.