ಮಡಿಕೇರಿ ಮೇ 15 : ಕೊಡಗು ಜಿಲ್ಲೆಯಿಂದ ಬೆಂಗಳೂರಿಗೆ ವರ್ಗಾವಣೆಗೊಂಡ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಎಂ.ಭೃಂಗೇಶ್ ಅವರಿಗೆ ಮಡಿಕೇರಿ ವಕೀಲರ ಸಂಘದ ವತಿಯಿಂದ ಸನ್ಮಾನಿಸಿ ಬೀಳ್ಕೊಡಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ವಕೀಲರ ಸಂಘದ ಅಧ್ಯಕ್ಷ ಕೆ.ಡಿ.ದಯಾನಂದ ನ್ಯಾಯಾಧೀಶರ ಸೇವೆಯನ್ನು ಸ್ಮರಿಸಿ ಶುಭ ಹಾರೈಸಿದರು.
ಸನ್ಮಾನ ಸ್ವೀಕರಿಸಿ ಮಾತನಾಡಿದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಎಂ.ಭೃಂಗೇಶ್, ಕೋರ್ಟ್ ಕಲಾಪ ನಡೆಸುವಲ್ಲಿ ವಕೀಲರ ಪಾತ್ರ ಮಹತ್ವದು. ಮಡಿಕೇರಿಯ ವಕೀಲರು ಕಕ್ಷಿದಾರರಿಗೆ ನ್ಯಾಯ ಒದಗಿಸುವಲ್ಲಿ ಸಹಕಾರ ನೀಡಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರಲ್ಲದೆ, ಸಹಕರಿಸಿದ ಎಲ್ಲರಿಗೂ ಧನ್ಯವಾದಗಳನ್ನು ಸಲ್ಲಿಸಿದರು.
ಸಮಾರಂಭದಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕೆ.ಬಿ.ಪ್ರಸಾದ್, ಅಪರ ಸಿವಿಲ್ ನ್ಯಾಯಾಧೀಶ ಎನ್.ಎ.ನಾಗೇಶ್, ಸಂಘದ ಖಜಾಂಚಿ ಬಿ.ಸಿ.ದೇವಿಪ್ರಸಾದ್, ಜಂಟಿ ಕಾರ್ಯದರ್ಶಿ ಎಂ.ವಿ.ಸಂಜಯ್ ರಾಜ್, ಪದಾಧಿಕಾರಿಗಳಾದ ಭಾನುಪ್ರಕಾಶ್, ಡಿ.ಕೆ.ರಾಜೇಶ್, ಡಿ.ಎನ್.ಡೊಮಿನಿಕ್, ದಿವ್ಯಾ ನಂಜಪ್ಪ, ತಾಹ ಯಾಸೀನ್, ಪಿ.ಆರ್.ಚಂದನ್, ಲತಾಕುಮಾರಿ ಹಾಗೂ ಸಂಘದ ಸದಸ್ಯರು ಹಾಜರಿದ್ದರು.
ಸಂಘದ ಕಾರ್ಯದರ್ಶಿ ಎಂ.ಕೆ.ಅರುಣ ಕುಮಾರ್ ಸ್ವಾಗತಿಸಿ, ಉಪಾಧ್ಯಕ್ಷ ಕೆ.ಎಸ್.ತಮ್ಮಯ್ಯ ಸರ್ವರನ್ನು ವಂದಿಸಿದರು.









