ಮಡಿಕೇರಿ ಮೇ.15 : ತೋಟಗಾರಿಕೆ ಇಲಾಖೆ ಅಧೀನದ ತೋಟಗಾರಿಕೆ ತರಬೇತಿ ಕೇಂದ್ರಗಳಲ್ಲಿ ರೈತ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಯು 2023 ಜೂನ್, 01 ರಿಂದ 2024 ರ ಮಾರ್ಚ್, 30 ರವರೆಗೆ ಹಾಸನ ಜಿಲ್ಲೆಯ ಸೋಮನಹಳ್ಳಿ ಕಾವಲ್ ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ ನಡೆಯಲಿದ್ದು, ಈ ಸಂಬಂಧ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಭರ್ತಿ ಮಾಡಿದ ಅರ್ಜಿಯನ್ನು ಮೇ, 22 ರ ಸಂಜೆ 5.30 ಗಂಟೆಯೊಳಗೆ ಸಲ್ಲಿಸಬೇಕು. ಅರ್ಜಿಯನ್ನು ಈ ಕಚೇರಿಯಿಂದ ಪಡೆಯಬಹುದು. ಹೆಚ್ಚಿನ ವಿವರವನ್ನು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿ(ರಾ.ವ), ಮಡಿಕೇರಿ ಕೊಡಗು ಜಿಲ್ಲೆ ಕಚೇರಿಯನ್ನು ಬೆಳಗ್ಗೆ 10 ರಿಂದ ಸಂಜೆ 5.30 ರೊಳಗೆ ಅಥವಾ ದೂ.ಸಂ. 8310687707/ ಅಂತರ್ಜಾಲ www.horticulture.kar.nic.in ನಲ್ಲಿ ಪಡೆಯಬಹುದು.
ಮೂಲ ಅಗತ್ಯ ದಾಖಲಾತಿಗಳೊಡನೆ(ಎಸ್‍ಎಸ್‍ಎಲ್‍ಸಿ ಅಂಕಪಟ್ಟಿ, ಛಾಪಾಕಾಗದ, ತಂದೆ/ತಾಯಿ/ಪೋಷಕರ ಹೆಸರಿನಲ್ಲಿರುವ ಜಮೀನಿನ ಆರ್‍ಟಿಸಿ, ಜಾತಿ ಪ್ರಮಾಣ ಪತ್ರ, ಫೋಟೋ, ತಂದೆ/ ತಾಯಿಯವರ ಒಪ್ಪಿಗೆ ಪತ್ರ ಮತ್ತಿತರ) ಅರ್ಹ ಅಭ್ಯರ್ಥಿಗಳು ನಿಗಧಿತ ಸಮಯದೊಳಗೆ ಅರ್ಜಿಯನ್ನು ಮಡಿಕೇರಿಯ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿ(ರಾಜ್ಯವಲಯ)ಗೆ ಖುದ್ದಾಗಿ ಸಲ್ಲಿಸುವಂತೆ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು(ರಾಜ್ಯವಲಯ) ತಿಳಿಸಿದ್ದಾರೆ.
Breaking News
- *ನಾಡಿನ ಸಮಸ್ತ ಜನತೆಗೆ ಗಣರಾಜ್ಯೋತ್ಸವದ ಶುಭಾಶಯಗಳು*
- *ಸ್ವಾತಂತ್ರ್ಯ ಮತ್ತು ಸಂವಿಧಾನಕ್ಕಾಗಿ ಶ್ರಮಿಸಿದ ಮಹನೀಯರನ್ನು ಗೌರವಿಸೋಣ, ಸಮಸ್ತ ಜನತೆಗೆ ಗಣರಾಜ್ಯೋತ್ಸವದ ಶುಭಾಶಯಗಳು*
- *ಗಣತಂತ್ರ ಹಬ್ಬದ ಮೂಲಕ ನಮ್ಮ ದೇಶದ ಸಾಂವಿಧಾನಿಕ ಅನನ್ಯತೆಯನ್ನು ಸಾರೋಣ, ಸರ್ವರಿಗೂ ಗಣರಾಜ್ಯೋತ್ಸವದ ಶುಭಾಶಯಗಳು*
- *ನಾಡಿನ ಸಮಸ್ತ ಜನತೆಗೆ ಗಣರಾಜ್ಯೋತ್ಸವದ ಶುಭಾಶಯಗಳು*
- *ಸಂವಿಧಾನದ ಆಶಯಗಳಿಗೆ ಬದ್ಧರಾಗಿರೋಣ, ಸರ್ವರಿಗೂ ಗಣರಾಜ್ಯೋತ್ಸವದ ಶುಭಾಶಯಗಳು*
- *ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಲಗೊಳಿಸೋಣ, ಸಮಸ್ತ ಜನತೆಗೆ ಗಣರಾಜ್ಯೋತ್ಸವದ ಶುಭಾಶಯಗಳು*
- *ನಾಡಿನ ಸಮಸ್ತ ಜನತೆಗೆ ಗಣರಾಜ್ಯೋತ್ಸವದ ಶುಭಾಶಯಗಳು*
- *ನಾವೆಲ್ಲರೂ ಸಂವಿಧಾನದ ಮೌಲ್ಯಗಳನ್ನು ಎತ್ತಿ ಹಿಡಿಯೋಣ, ಸರ್ವರಿಗೂ ಗಣರಾಜ್ಯೋತ್ಸವದ ಶುಭಾಶಯಗಳು*
- *ಸಂವಿಧಾನವನ್ನು ನಾವು ರಕ್ಷಿಸಿದರೆ, ಸಂವಿಧಾನ ನಮ್ಮನ್ನು ರಕ್ಷಿಸುತ್ತದೆ, ನಾಡಿನ ಸಮಸ್ತ ಜನತೆಗೆ ಗಣರಾಜ್ಯೋತ್ಸವದ ಶುಭಾಶಯಗಳು*
- *ನಾವೆಲ್ಲರೂ ಭಾರತೀಯರಾಗಿರುವುದಕ್ಕೆ ಹೆಮ್ಮೆ ಪಡೋಣ, ಸಮಸ್ತ ಜನತೆಗೆ ಗಣರಾಜ್ಯೋತ್ಸವದ ಶುಭಾಶಯಗಳು*