ಮಡಿಕೇರಿ ಮೇ 15 : ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ರಾಜ್ಯ ಬಾಲಭವನ ಸೊಸೈಟಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಬಾಲಭವನ ಸಮಿತಿ ಹಾಗೂ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕೊಡಗು ಜಿಲ್ಲಾ ಸಂಸ್ಥೆಯ ಸಹಯೋಗದೊಂದಿಗೆ ಮೇ, 29 ರವರೆಗೆ ಹಮ್ಮಿಕೊಂಡಿರುವ ಜಿಲ್ಲಾ ಮಟ್ಟದ ಬೇಸಿಗೆ ಶಿಬಿರಕ್ಕೆ ನಗರದ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಭವನದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ವಿ.ಟಿ.ವಿಸ್ಮಯಿ ಚಾಲನೆ ನೀಡಿದರು.
ನಂತರ ಮಾತನಾಡಿದ ಅವರು, ಮಕ್ಕಳು ಇಂತಹ ಬೇಸಿಗೆ ಶಿಬಿರದಲ್ಲಿ ಭಾಗವಹಿಸಿ ಅದರ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದು ನುಡಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಪ್ರಥಮ ದರ್ಜೆ ಸಹಾಯಕರಾದ ಜಯಂತಿ ಅಧ್ಯಕ್ಷತೆ ವಹಿಸಿದ್ದರು.
ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಪತ್ರಾಂಕಿತ ವ್ಯವಸ್ಥಾಪಕರಾದ ಕವಿತಾ, ಸಾರ್ವಜನಿಕ ಶಿಕ್ಷಣ ಇಲಾಖೆಯ ವಿಷಯ ಪರಿವೀಕ್ಷಕರಾದ ಕೆ.ಆರ್.ಬಿಂದು, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಕಾರ್ಯದರ್ಶಿ ಎಂ.ಎಂ.ವಸಂತಿ ಹಾಜರಿದ್ದರು.
ಜಿಲ್ಲಾ ಸಂಘಟಕರಾದ ಯು.ಸಿ.ದಮಯಂತಿ, ಪೂಜಾ, ಹರೀಶ್, ಬಾಲಭವನ ಸಿಬ್ಬಂದಿಗಳು ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಿಬ್ಬಂದಿಗಳಾದ ಕಾವ್ಯ, ಚೈತ್ರ ಇತರರು ಇದ್ದರು.
ಸಂಪನ್ಮೂಲ ವ್ಯಕ್ತಿಗಳಾಗಿ ಪಿ.ಎಚ್.ಅಲಿಮ, ಕೆ.ಯು.ರಂಜಿತ್, ಟಿ.ಬಿ.ಕುಮಾರಸ್ವಾಮಿ, ಟಿ.ಕೆ.ವಾಮನ, ಅಲ್ಲದೇ ಯಕ್ಷಗಾನ ಗುರು ಚಂದ್ರಶೇಖರ್ ಪೆರಾಜೆ ಯಕ್ಷಗಾನ ತರಬೇತಿ ನೀಡಲಿದ್ದಾರೆ.
ಶಿಬಿರದಲ್ಲಿ 80 ಮಕ್ಕಳು ಭಾಗವಹಿಸಿದರು. ಕಾರ್ಯಕ್ರಮದಲ್ಲಿ ಟಿ.ಕೆ.ವಾಮನ ಸ್ವಾಗತಿಸಿದರು. ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಪಾಜೆ ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿ ಉಷಾರಾಣಿ ವಂದಿಸಿದರು. ಅಲಿಮ ನಿರೂಪಿಸಿದರು.