ಮಡಿಕೇರಿ ಮೇ 15 : ಹೊದ್ದೂರು ವಾಟೆಕಾಡು ಸಾಮಾಜಿಕ ಅರಣ್ಯ ಇಲಾಖೆಯ ಸಸ್ಯಕ್ಷೇತ್ರದಲ್ಲಿ 2023-24ನೇ ಸಾಲಿನ ಮಳೆಗಾಲದಲ್ಲಿ ನೆಡಲು ವಿವಿಧ ಹಣ್ಣಿನ, ಔಷಧೀಯ ಹಾಗೂ ಕಾಡು ಜಾತಿಯ ಸಸಿಗಳನ್ನು ಬೆಳೆಸಲಾಗಿದೆ. ಮಹಾಗನಿ, ಶಿವನೆ, ಸಿಲ್ವರ್, ತೇಗ, ಬೀಟೆ, ಮಳೆಮರ, ನೇರಳೆ, ಸುಬಾಬುಲ್, ಹಲಸು, ಧೂಪ, ನೆಲ್ಲಿ, ನಿಂಬೆ, ಪುನರ್‍ಪುಳಿ, ಅಗಸೆ, ಬೆಟ್ಟದನೆಲ್ಲಿ, ಸೀಬೆ ಮತ್ತಿತರ ಸಸಿಗಳು ಲಭ್ಯವಿದ್ದು, ರೈತ ಫಲಾನುಭವಿಗಳಿಗೆ ರೂ.7 ಹಾಗೂ ರೂ.23.60 ಪ್ರತಿ ಸಸಿಗೆ ರಿಯಾಯಿತಿ ದರದಲ್ಲಿ ಪಡೆದುಕೊಳ್ಳಬಹುದು.
ರೈತರು ತಮ್ಮ ಆಧಾರ್ ಪ್ರತಿ, ರಾಷ್ಟ್ರೀಕೃತ ಬ್ಯಾಂಕ್ ಪಾಸ್‍ಬುಕ್ ಪ್ರತಿ, ತಮ್ಮ ಜಮೀನಿನ ಆರ್‍ಟಿಸಿ ಪ್ರತಿಯನ್ನು ನೀಡಿ ಸಸಿಗಳನ್ನು ಪಡೆಯಬಹುದು. ಬಿಪಿಎಲ್ ಕಾರ್ಡ್ ಮತ್ತು ನರೇಗಾ ಉದ್ಯೋಗ ಚೀಟಿ ಹೊಂದಿರುವ ರೈತರಿಗೆ ನೆಟ್ಟ 100 ಸಸಿಗಳಿಗೆ ಸರಿಸುಮಾರು 10 ಸಾವಿರ ರೂ.ಗಳ ಪ್ರೋತ್ಸಾಹ ಧನ ನೀಡಲಾಗುತ್ತದೆ. ಹೆಚ್ಚಿನ ಮಾಹಿತಿಗೆ ಉಪ ವಲಯ ಅರಣ್ಯಾಧಿಕಾರಿಗಳು-9743722646, ಗಸ್ತು ಅರಣ್ಯ ಪಾಲಕರು-7975952388 ನ್ನು ಸಂಪರ್ಕಿಸಬಹುದು ಎಂದು ಮಡಿಕೇರಿ ಸಾಮಾಜಿಕ ಅರಣ್ಯ ವಲಯದ ವಲಯ ಅರಣ್ಯಾಧಿಕಾರಿ ತಿಳಿಸಿದ್ದಾರೆ.
Breaking News
- *ಜ.25 ರಂದು ಕಸಾಪ ದತ್ತಿ ಉಪನ್ಯಾಸ ಕಾರ್ಯಕ್ರಮ*
- *ಸುಂಟಿಕೊಪ್ಪ : ಸಾರ್ವಜನಿಕರು ಆರೋಗ್ಯ ಶಿಬಿರದ ಸದುಪಯೋಗ ಪಡೆದುಕೊಳ್ಳಿ : ಎ.ಲೋಕೇಶ್ ಕುಮಾರ್*
- *ಮಡಿಕೇರಿಯಲ್ಲಿ ನೇತಾಜಿ ಸುಭಾಷ್ ಚಂದ್ರ ಬೋಸ್ ಜನ್ಮದಿನ ಆಚರಣೆ*
- *ಮಡಿಕೇರಿಯಲ್ಲಿ ಪರಾಕ್ರಮ್ ದಿವಸ್ ಆಚರಣೆ : ಪರೀಕ್ಷಾ ಪೇ ಚರ್ಚಾ 9ನೇ ಆವೃತ್ತಿ*
- *ಕಳೆದು ಹೋಗಿದೆ*
- *ಫೆ.27 ಮತ್ತು 28 ರಂದು ಕೊಡವ ಬಲ್ಯನಮ್ಮೆ : ವಿವಿಧ ಸ್ಪರ್ಧೆಗಳಿಗೆ ಆಹ್ವಾನ*
- *ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಆಹ್ವಾನ*
- *ಕೊಡವ ಲ್ಯಾಂಡ್ ಭೂರಾಜಕೀಯ ಸ್ವಾಯತ್ತತೆ : ಮಾ.11ಕ್ಕೆ ವಿಚಾರಣೆ ಮುಂದೂಡಿಕೆ*
- *ಜ.25 ರಂದು ಜಿಲ್ಲಾ ಮಟ್ಟದ ಜನಸ್ಪಂದನ ಕಾರ್ಯಕ್ರಮ*
- *ಜ.30 ರಂದು ಹುತಾತ್ಮರ ದಿನಾಚರಣೆ : ಮಡಿಕೇರಿಯಲ್ಲಿ ಪೂರ್ವಭಾವಿ ಸಭೆ*