ಮಡಿಕೇರಿ ಮೇ 15 : ನಾಪೋಕ್ಲು ಗ್ರಾ.ಪಂ ವ್ಯಾಪ್ತಿಯ ಕಲ್ಲುಮೊಟ್ಟೆ ಗ್ರಾಮದಲ್ಲಿ ನೀರಿನ ಸಮಸ್ಯೆ ಉಂಟಾಗಿರುವ ಬಗ್ಗೆ ದೂರುಗಳು ಬಂದ ಹಿನ್ನೆಲೆ ತಾ.ಪಂ ಕಾರ್ಯ ನಿರ್ವಹಣಾಧಿಕಾರಿ ಶೇಖರ್ ಅವರು ಸೋಮವಾರ ಖುದ್ದು ಭೇಟಿ ನೀಡಿ ಪರಿಶೀಲಿಸಿದರು.
ಈ ಕಾಲೋನಿಗೆ ನೀರು ಪೂರೈಕೆ ಮಾಡಲಾಗುತ್ತಿದ್ದ 7.5 ಹೆಚ್.ಪಿ ಸಾಮರ್ಥ್ಯದ ಮೋಟಾರ್ ಪಂಪು ದುರಸ್ತಿಯಾಗಿರುವ ಹಿನ್ನೆಲೆಯಲ್ಲಿ ನೀರಿನ ಸಮಸ್ಯೆ ಉಂಟಾಗಿತ್ತು. ಪ್ರಸ್ತುತ ಈ ಮೋಟಾರ್ ಪಂಪು ದುರಸ್ತಿಯಾಗುವವರೆಗೆ ತಾತ್ಕಾಲಿಕವಾಗಿ 5 ಹೆಚ್.ಪಿ ಮೋಟಾರು ಪಂಪನ್ನು ಅಳವಡಿಸಿ ನೀರು ಪೂರೈಕೆ ಮಾಡಲಾಗಿದೆ ಎಂದು ಶೇಖರ್ ತಿಳಿಸಿದರು.
ಕಿರಿಯ ಎಂಜಿನಿಯರ್ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ಪಂಚಾಯತಿ ಅಭಿವೃದ್ಧಿ ಅಧಿಕಾರಿ ಮತ್ತಿತರರು ಹಾಜರಿದ್ದರು.










