ಮಡಿಕೇರಿ ಮೇ 15 : ವ್ಯಕ್ತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕುಶಾಲನಗರದಲ್ಲಿ ನಡೆದಿದೆ.
ಸ್ವಾಮಿ ಬಡಾವಣೆಯ ಆಟೋ ಚಾಲಕ ಹೆಚ್.ಜಿ.ಹರ್ಷ(37) ಮೃತ ವ್ಯಕ್ತಿ. ಮೃತರು ಪತ್ನಿ ಹಾಗೂ ಒಂದು ವರ್ಷದ ಹೆಣ್ಣು ಮಗುವನ್ನು ಅಗಲಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಕುಶಾಲನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.









