ಮಡಿಕೇರಿ ಮೇ 16 : ಮೈಸೂರಿನಲ್ಲಿ ಸ್ಥಾಪಿತವಾಗಿರುವ ರಂಗಾಯಣ ರೆಪರ್ಟರಿಯು ಕಳೆದ 14 ವರ್ಷಗಳ ಹಿಂದೆ ಸ್ಥಾಪಿಸಿದ ಭಾರತೀಯ ರಂಗಶಿಕ್ಷಣ ಕೇಂದ್ರ ಪೂರ್ಣ ಪ್ರಮಾಣದ ರಂಗ ಶಿಕ್ಷಣವನ್ನು ನೀಡುವ ಸಂಸ್ಥೆಯಾಗಿದೆ. ಈ ಸಂಸ್ಥೆ ಮೈಸೂರಿನ ಡಾ.ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ಚವಿದ್ಯಾಲಯದ ಮಾನ್ಯತೆ ಪಡೆದಿದೆ. ಪ್ರತಿವರ್ಷ ರಂಗ ಶಿಕ್ಷಣದಲ್ಲಿ ಹತ್ತು ತಿಂಗಳ ಡಿಪ್ಲೊಮೊ ಕೋರ್ಸ್‍ನ್ನು ನಡೆಸುವ ಈ ಸಂಸ್ಥೆಗೆ ಪ್ರಸ್ತುತ 2023-24ನೇ ಸಾಲಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
2023-24 ನೇ ಸಾಲಿನ ಈ ರಂಗ ತರಬೇತಿ ಕೋರ್ಸ್‍ಗೆ ಸೇರಬಯಸುವ ವಿದ್ಯಾರ್ಥಿಗಳು ರಂಗಭೂಮಿಯ ಪ್ರಾಥಮಿಕ ಅನುಭವ ಹೊಂದಿರಬೇಕು. ಕನಿಷ್ಠ ದ್ವಿತೀಯ ಪಿಯುಸಿ (10+2) ಅಥವಾ ತತ್ಸಮಾನ ಪರೀಕ್ಷೆ ತೇರ್ಗಡೆ ಹೊಂದಿರಬೇಕು. ವಯೋಮಿತಿ ಅರ್ಜಿ ಸಲ್ಲಿಸಲು ನಿಗದಿಗೊಳಿಸಿದ ಕಡೆಯ ದಿನಾಂಕಕ್ಕೆ 18 ವರ್ಷಗಳು ತುಂಬಿದ ಮತ್ತು 28 ವರ್ಷಗಳು ತುಂಬಿರದ ಅಭ್ಯರ್ಥಿಗಳಾಗಿರಬೇಕು. ಆಯ್ಕೆಯಾದ ವಿದ್ಯಾರ್ಥಿಗಳಿಗೆ ನಿಯಮಾನುಸಾರ ರಂಗಾಯಣದಿಂದಲೇ ವಸತಿ ವ್ಯವಸ್ಥೆ ಕಲ್ಪಿಸಲಾಗುವುದು ಮತ್ತು ಮಾಹೆಯಾನ 5 ಸಾವಿರ ರೂ ವಿದ್ಯಾರ್ಥಿ ವೇತನ ಪಾವತಿಸಲಾಗುವುದು.
ಭಾರತೀಯ ರಂಗಶಿಕ್ಷಣ ಕೇಂದ್ರಕ್ಕೆ ಸೇರಬಯಸುವ ವಿದ್ಯಾರ್ಥಿಗಳು ಮೇ, 15 ರಿಂದ ರಂಗಾಯಣದ ವೆಬ್‍ಸೈಟ್ http://rangayanamysore.karnataka.gov.in ನಲ್ಲಿ ಅರ್ಜಿಯನ್ನು ಡೌನ್‍ಲೋಡ್ ಮಾಡಿಕೊಂಡು ಅಥವಾ ರಂಗಾಯಣದ ಕಚೇರಿಯಲ್ಲಿ ಕೆಲಸದ ದಿನಗಳ ಕಚೇರಿ ಅವಧಿಯಲ್ಲಿ ಖುದ್ದಾಗಿ ಪಡೆದು ಅಗತ್ಯ ದಾಖಲೆಗಳೊಂದಿಗೆ ಭರ್ತಿ ಮಾಡಿದ ಅರ್ಜಿಯನ್ನು ಅರ್ಜಿ ಶುಲ್ಕ ಸಾಮಾನ್ಯ ವರ್ಗ ರೂ.230, ಪ.ಜಾ, ಪ.ವರ್ಗ ಮತ್ತು ಪ್ರವರ್ಗ-1 ಅಭ್ಯರ್ಥಿಗಳಿಗೆ ರೂ.180 ಗಳು (ರಂಗಕೈಪಿಡಿ ಶುಲ್ಕ ರೂ.30 ಒಳಗೊಂಡಂತೆ) ಡಿ.ಡಿ.ಯನ್ನು ಉಪ ನಿರ್ದೇಶಕರು, ರಂಗಾಯಣ, ಮೈಸೂರು ಇವರ ಹೆಸರಿನಲ್ಲಿ ಪಡೆದು ರಂಗಾಯಣದ ವಿಳಾಸಕ್ಕೆ ಜೂನ್, 05 ರ ಸಂಜೆ 5.30 ಗಂಟೆಯೊಳಗೆ ತಲುಪುವಂತೆ ಅಂಚೆಯ ಮೂಲಕ ಕಳುಹಿಸಬಹುದು.
ಸಂದರ್ಶನದ ದಿನಾಂಕವನ್ನು ಅಭ್ಯರ್ಥಿಗಳಿಗೆ ಪತ್ರ ಮುಖೇನ ತಿಳಿಸಲಾಗುವುದು. ರಂಗಾಯಣದ ಆವರಣದಲ್ಲಿ ನಡೆಯುವ ಈ ಸಂದರ್ಶನಕ್ಕೆ ವಿದ್ಯಾರ್ಥಿಗಳು ತಮ್ಮ ಸ್ವಂತ ಖರ್ಚಿನಲ್ಲೇ ಹಾಜರಾಗಬೇಕು. ಗರಿಷ್ಠ 15 ರಿಂದ 20 ವಿದ್ಯಾರ್ಥಿಗಳಿಗೆ ಮಾತ್ರ ಪ್ರವೇಶಾವಕಾಶವಿದೆ. ಹೆಚ್ಚಿನ ವಿವರಕ್ಕೆ ದೂ.ಸಂ.0821-2512639, 9448938661 / 9148827720 / 8867514311 ನ್ನು ಸಂಪರ್ಕಿಸಬಹುದು ಎಂದು ಮೈಸೂರು ರಂಗಾಯಣದ ಉಪ ನಿರ್ದೇಶಕರು ತಿಳಿಸಿದ್ದಾರೆ.
Breaking News
- *ಕೊಡವ ಲ್ಯಾಂಡ್ ಭೂರಾಜಕೀಯ ಸ್ವಾಯತ್ತತೆ : ಮಾ.11ಕ್ಕೆ ವಿಚಾರಣೆ ಮುಂದೂಡಿಕೆ*
- *ಜ.25 ರಂದು ಜಿಲ್ಲಾ ಮಟ್ಟದ ಜನಸ್ಪಂದನ ಕಾರ್ಯಕ್ರಮ*
- *ಜ.30 ರಂದು ಹುತಾತ್ಮರ ದಿನಾಚರಣೆ : ಮಡಿಕೇರಿಯಲ್ಲಿ ಪೂರ್ವಭಾವಿ ಸಭೆ*
- *ಹೈದರಾಬಾದ್ನಲ್ಲಿ ಗಮನ ಸೆಳೆದ ಕುಡಿಯರ ಉರುಟಿಕೊಟ್ಟ್ ಪಾಟ್ ನೃತ್ಯ*
- *ಮಡಿಕೇರಿ : ಜ.28 ರಂದು ಕುಂದುರುಮೊಟ್ಟೆ ದಸರಾ ಉತ್ಸವ ಸಮಿತಿಯ ಸುವರ್ಣ ಮಹೋತ್ಸವ ಸ್ಮರಣ ಸಂಚಿಕೆ “ದಶಮಿ” ಬಿಡುಗಡೆ*
- *ಮಡಿಕೇರಿಯ ಡಾ.ಅಂಬೇಡ್ಕರ್ ಭವನವನ್ನು ದಲಿತ ಸಂಘರ್ಷ ಸಮಿತಿಯ ವಶಕ್ಕೆ ನೀಡಿ*
- *‘ಸಂವಿಧಾನ್ ಸಮ್ಮಾನ್ ಅಭಿಯಾನ್’ : ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಸಂವಿಧಾನ ವಿರೋಧಿಯಾಗಿ ನಡೆದುಕೊಂಡವರ ಬಣ್ಣ ಬಯಲು*
- *ಅಂತರರಾಷ್ಟ್ರೀಯ ವಾಣಿಜ್ಯ ಮೇಳ ಸಾವಯವ ಮತ್ತು ಸಿರಿಧಾನ್ಯ ಕಾರ್ಯಕ್ರಮ ಉದ್ಘಾಟನೆ : ಮಂಡ್ಯದಲ್ಲಿ ಸಂಯೋಜಿತ ಕೃಷಿ ವಿಶ್ವವಿದ್ಯಾಲಯ ಸ್ಥಾಪನೆ : ಮುಖ್ಯಮಂತ್ರಿ ಸಿದ್ದರಾಮಯ್ಯ
- *ಭಾಗಮಂಡಲದಲ್ಲಿ ಕಸಾಪ ದತ್ತಿ ಉಪನ್ಯಾಸ ಕಾರ್ಯಕ್ರಮ : ಗೌರವ ಸಮರ್ಪಣೆ*
- *ಬಲ್ಲಮಾವಟಿಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ : ಪ್ರತಿಯೊಬ್ಬರೂ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಿ : ಡಾ.ಶೈಲಜಾ ಸಲಹೆ*