ಸುಂಟಿಕೊಪ್ಪ ಮೇ 16: ಗುಡ್ಡಪ್ಪ ರೈ ಬಡಾವಣೆಯ ಶ್ರೀ ಹುಲಿ ಮಸಣಿಕಮ್ಮ ದೇವಸ್ಥಾನದ ವಾರ್ಷಿಕೋತ್ಸವದ ಅಂಗವಾಗಿ ದೇವಾಲಯದಲ್ಲಿ ವಿಶೇಷ ಪೂಜಾ ಕೈಂಕರ್ಯಗಳು ಶ್ರದ್ಧಾ ಭಕ್ತಿಯಿಂದ ನೆರವೇರಿತು.
ಉತ್ಸವದ ಅಂಗವಾಗಿ ದೇವಿಗೆ ¨ ಬೆಳಗ್ಗೆ ವಿಶೇಷ ಪೂಜಾ ಕಾರ್ಯಕ್ರಮ ನಡೆಯಿತು. ಮಧ್ಯಾಹ್ನದ ಮಹಾಪೂಜೆ ಮಂಗಳಾರತಿಯ ಬಳಿಕ ಪ್ರಸಾದ ವಿತರಣೆ ನಡೆಯಿತು.
ಸಂಜೆ 5 ಗಂಟೆಯವರೆಗೆ ನೆರೆದಿದ್ದ ಭಕ್ತರಿಗೆ ಅನ್ನ ಸಂತರ್ಪಣೆ ಮಾಡಲಾಯಿತು. ಸುಂಟಿಕೊಪ್ಪ ಸೇರಿದಂತೆ ಸುತ್ತ ಮುತ್ತಲಿನ ಗ್ರಾಮಗಳಿಂದ ನೂರಾರು ಭಕ್ತಾದಿಗಳು ಉತ್ಸವದಲ್ಲಿ ಪಾಲ್ಗೊಂಡಿದ್ದರು.
ಶ್ರೀ ಹುಲಿ ಮಸಣಿಕಮ್ಮ ದೇವಸ್ಥಾನದ ಸಮಿತಿ ಅಧ್ಯಕ್ಷ ಅಯ್ಯಪ್ಪ, ಉಪಾಧ್ಯಕ್ಷ ಬಿ.ಬಿ.ಜಿನ್ನಪ್ಪ, ಪ್ರಧಾನ ಕಾರ್ಯದರ್ಶಿ ಬಿ.ಕೆ.ಮೋಹನ, ಗೌರವ ಅಧ್ಯಕ್ಷ ರಾಜ ಸರ್ವ ಸದಸ್ಯರು ಹಾಜರಿದ್ದರು.