ಮಡಿಕೇರಿ ಮೇ 17 : ಡಿ.ಶಿವಪ್ಪ ಸ್ಮರಣಾರ್ಥ ಸುಂಟಿಕೊಪ್ಪದ ಬ್ಲೂಬಾಯ್ಸ್ ಯುವಕ ಸಂಘದ ವತಿಯಿಂದ ಮೇ 19 ರಿಂದ ಮೇ 28ರ ವರೆಗೆ ರಾಜ್ಯಮಟ್ಟದ 25ನೆ ಬೆಳ್ಳಿ ಮಹೋತ್ಸವದ ಗೋಲ್ಡ್ ಕಪ್ ಫುಟ್ಬಾಲ್ ಪಂದ್ಯಾವಳಿ ನಡೆಯಲಿದೆ ಎಂದು ಸಂಘದ ಪ್ರವರ್ತಕರು ಹಾಗೂ ಗೋಲ್ಡ್ ಕಪ್ ದಾನಿ ಬಿ.ವಿನೋದ್ ಶಿವಪ್ಪ ತಿಳಿಸಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸುಂಟಿಕೊಪ್ಪದ ಪ್ರಾಥಮಿಕ ಸರ್ಕಾರಿ ಶಾಲಾ ಮೈದಾನದಲ್ಲಿ ಪಂದ್ಯಾವಳಿ ನಡೆಯಲಿದ್ದು, ಮೇ 19 ರಂದು ಮಧ್ಯಾಹ್ನ 3 ಗಂಟೆಗೆ ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಮತ್ತು ಎ.ಎಸ್.ಪಿ. ಸುಂದರ್ ರಾಜ್, ಬ್ಲೂಬಾಯ್ಸ್ ಯುವಕ ಸಂಗದ ಸ್ಥಾಪಕರಾದ ಜೆರ್ಮಿ ಡಿಸೋಜ, ಹಿರಿಯ ಆಟಗಾರ ಪ್ಯಾಟ್ರಿಕ್ ಸೇರಿದಂತೆ ಹಲವಾರು ಗಣ್ಯರು ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಮಾಹಿತಿ ನೀಡಿದರು.
ಈ ಬಾರಿ ಪಂದ್ಯಾವಳಿಯಲ್ಲಿ ಬೆಂಗಳೂರು, ಮಂಡ್ಯ, ಮೈಸೂರು, ಕೇರಳದ ಕ್ಯಾಲಿಕಟ್, ಮಲಪುರಂ, ಕೂತುಪರಂಬು, ಕಂಬ್ಳೆ, ಉಪ್ಪಳ, ನಂಜನಗೂಡು, ಕೆಜಿಎಫ್‍ನ ವಾರಿಯರ್ಸ್ ಪುಟ್ಬಾಲ್ ಕ್ಲಬ್, ಕೊಡಗಿನ ಪ್ರತಿಷ್ಟಿತ ತಂಡಗಳಾದ ಕುಶಾಲನಗರ, ಮಿಡ್ ಸಿಟಿ, ಪನ್ಯ, ಬೆಟ್ಟಗೇರಿ, ಒಂಟಿಯಂಗಡಿ, ಕೊಡಗರಹಳ್ಳಿಯ ನೇತಾಜಿ ಯುವಕ ಸಂಘ, ಗದ್ದೆಹಳ್ಳದ ಎಮಿಟಿ, ಆತಿಥೇಯ ಸುಂಟಿಕೊಪ್ಪದ ಬ್ಲೂಬಾಯ್ಸ್ ಯೂತ್ ಕ್ಲಬ್ ತಂಡ ಸೇರಿದಂತೆ 22 ತಂಡಗಳಿಂದ ಗೋಲ್ಡ್ ಕಪ್‍ಗಾಗಿ ಹಣಾಹಣಿ ನಡೆಯಲಿದೆ ಎಂದು ತಿಳಿಸಿದರು.
ಪ್ರತಿನಿತ್ಯ ಮಧ್ಯಾಹ್ನ 3 ಗಂಟೆಯಿಂದ 2 ಪಂದ್ಯಗಳು ನಡೆಯಲಿದ್ದು, ಭಾನುವಾರ 3 ಪಂದ್ಯಗಳು ನಡೆಯಲಿದೆ. ಮೇ 27 ರಂದು ಸೆಮಿಫೈಲ್, ಮೇ28 ರಂದು ಫೈನಲ್ ಪಂದ್ಯ ಜರುಗಲಿದೆ ಎಂದರು.
ಪಂದ್ಯಾವಳಿಯ ಪ್ರಥಮ ವಿಜೇತ ತಂಡಕ್ಕೆ ಡಿ.ಶಿವಪ್ಪ ಸ್ಮರಣಾರ್ಥ ಗೋಲ್ಡ್ ಕಪ್ ಮತ್ತು 1 ಲಕ್ಷ ರೂ.ನಗದು, ದ್ವಿತೀಯ ಬಹುಮಾನವಾಗಿ 50 ಸಾವಿರ ನಗದು ಮತ್ತು ಟ್ರೋಫಿ ಹಾಗೂ ವೈಯಕಿಕ ಬಹುಮಾನಗಳನ್ನು ನೀಡಲಾಗುವುದೆಂದು ತಿಳಿಸಿದರು.
ಈ ಬಾರಿ ಬ್ಲೂಬಾಯ್ಸ್ ಫುಟ್ಬಾಲ್ ಪಂದ್ಯಾವಳಿಯ ಪ್ರಯುಕ್ತ ಪ್ರತ್ಯೇಕ ಫೇಸ್ ಬುಕ್ ಮತ್ತು ವಾಟ್ಸಪ್ ಖಾತೆ ತೆರೆಯಲಾಗಿದ್ದು, ಸಾವಿರಾರು ಕ್ರೀಡಾಭಿಮಾನಿಗಳಿಗೆ ಪಂದ್ಯಾವಳಿಯ ಮಾಹಿತಿ ಲಭಿಸಲಿದೆ ಎಂದರು.
ಸುದ್ದಿಗೋಷ್ಠಿಯಲ್ಲಿ ಯುವಕ ಸಂಘದ ಅಧ್ಯಕ್ಷ ಆಲಿ ಕುಟ್ಟಿ, ಪೋಷಕ ಪಿ.ವಿ.ಪ್ರಸನ್ನ, ಮಾಜಿ ಅಧ್ಯಕ್ಷ ಆದಿ ಶೇಷನ್, ಗ್ರಾಪಂ ಮಾಜಿ ಅಧ್ಯಕ್ಷ ಎಂ.ಎ. ಉಸ್ಮಾನ್, ಸದಸ್ಯ ಜಾನ್ ಉಪಸ್ಥಿತರಿದ್ದರು.
Breaking News
- *ಕೊಡವ ಲ್ಯಾಂಡ್ ಭೂರಾಜಕೀಯ ಸ್ವಾಯತ್ತತೆ : ಮಾ.11ಕ್ಕೆ ವಿಚಾರಣೆ ಮುಂದೂಡಿಕೆ*
- *ಜ.25 ರಂದು ಜಿಲ್ಲಾ ಮಟ್ಟದ ಜನಸ್ಪಂದನ ಕಾರ್ಯಕ್ರಮ*
- *ಜ.30 ರಂದು ಹುತಾತ್ಮರ ದಿನಾಚರಣೆ : ಮಡಿಕೇರಿಯಲ್ಲಿ ಪೂರ್ವಭಾವಿ ಸಭೆ*
- *ಹೈದರಾಬಾದ್ನಲ್ಲಿ ಗಮನ ಸೆಳೆದ ಕುಡಿಯರ ಉರುಟಿಕೊಟ್ಟ್ ಪಾಟ್ ನೃತ್ಯ*
- *ಮಡಿಕೇರಿ : ಜ.28 ರಂದು ಕುಂದುರುಮೊಟ್ಟೆ ದಸರಾ ಉತ್ಸವ ಸಮಿತಿಯ ಸುವರ್ಣ ಮಹೋತ್ಸವ ಸ್ಮರಣ ಸಂಚಿಕೆ “ದಶಮಿ” ಬಿಡುಗಡೆ*
- *ಮಡಿಕೇರಿಯ ಡಾ.ಅಂಬೇಡ್ಕರ್ ಭವನವನ್ನು ದಲಿತ ಸಂಘರ್ಷ ಸಮಿತಿಯ ವಶಕ್ಕೆ ನೀಡಿ*
- *‘ಸಂವಿಧಾನ್ ಸಮ್ಮಾನ್ ಅಭಿಯಾನ್’ : ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಸಂವಿಧಾನ ವಿರೋಧಿಯಾಗಿ ನಡೆದುಕೊಂಡವರ ಬಣ್ಣ ಬಯಲು*
- *ಅಂತರರಾಷ್ಟ್ರೀಯ ವಾಣಿಜ್ಯ ಮೇಳ ಸಾವಯವ ಮತ್ತು ಸಿರಿಧಾನ್ಯ ಕಾರ್ಯಕ್ರಮ ಉದ್ಘಾಟನೆ : ಮಂಡ್ಯದಲ್ಲಿ ಸಂಯೋಜಿತ ಕೃಷಿ ವಿಶ್ವವಿದ್ಯಾಲಯ ಸ್ಥಾಪನೆ : ಮುಖ್ಯಮಂತ್ರಿ ಸಿದ್ದರಾಮಯ್ಯ
- *ಭಾಗಮಂಡಲದಲ್ಲಿ ಕಸಾಪ ದತ್ತಿ ಉಪನ್ಯಾಸ ಕಾರ್ಯಕ್ರಮ : ಗೌರವ ಸಮರ್ಪಣೆ*
- *ಬಲ್ಲಮಾವಟಿಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ : ಪ್ರತಿಯೊಬ್ಬರೂ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಿ : ಡಾ.ಶೈಲಜಾ ಸಲಹೆ*